ತಿರುಪತಿ ಕಾಲ್ತುಳಿತ ಕೇಸ್; ಮುಖ್ಯಮಂತ್ರಿಗೆ ದೇವರ ಬಗ್ಗೆ ಭಯ, ಭಕ್ತಿ ಇಲ್ಲ ಎಂಬುದನ್ನು ತೋರಿಸುತ್ತದೆ: Jagan Mohan Reddy ಕಿಡಿ

Jagan Mohan Reddy
Published on

ಅಮರಾವತಿ: ವೈಕುಂಠ ಏಕಾದಶಿ ಪ್ರಯುಕ್ತ ವೈಕುಂಠ ದ್ವಾರ ಸರ್ವ ದರ್ಶನ ಟಿಕೆಟ್ ಪಡೆಯಲು ನೂಕುನುಗ್ಗಲು ಉಂಟಾದ ಕಾಲ್ತುಳಿತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಆಸ್ಪದ ಮಾಡಿಕೊಟ್ಟಿದ್ದು, ಈ ಬಗ್ಗೆ ಮಾಜಿ ಸಿಎಂ ಜಗನ್ ​ಮೋಹನ್​ ರೆಡ್ಡಿ (Jagan Mohan Reddy) ಮಾತನಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಜಗನ್ ​ಮೋಹನ್​ ರೆಡ್ಡಿ (Jagan Mohan Reddy), ಚಂದ್ರಬಾಬು ನಾಯ್ಡು ಅವರು ಮೂರು ದಿನಗಳ ಕಾಲ ಪ್ರವಾಸದಲ್ಲಿದ್ದ ಸಮಯದಲ್ಲಿ ಇಡೀ ಪೊಲೀಸ್​ ಪಡೆಯನ್ನೇ ಭದ್ರತೆಗಾಗಿ ಕುಪ್ಪಂನಲ್ಲಿ ನಿಯೋಜಿಸಲಾಗಿತ್ತು. ತಿರುಪತಿಯಲ್ಲಿ ಜನಸಂದಣಿ ನಿರ್ವಹಣೆಗೆ ಯಾವುದೇ ಪೊಲೀಸ್ ಸಿಬ್ಬಂದಿ ಇರಲಿಲ್ಲ. ಇದು ಕಾಲ್ತುಳಿತಕ್ಕೆ ಕಾರಣವಾಯಿತು.

ನಾಯ್ಡು ಅವರ ಪ್ರವಾಸಕ್ಕೆ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಿದ್ದ ಕಾರಣ ಕಾಲ್ತುಳಿತ ಸಂಭವಿಸಿದೆ. ಘಟನೆಯನ್ನು ನೋಡಿದರೆ ಮುಖ್ಯಮಂತ್ರಿಗೆ ದೇವರ ಬಗ್ಗೆ ಭಯ ಅಥವಾ ಭಕ್ತಿ ಇಲ್ಲ ಎಂಬುದನ್ನು ತೋರಿಸುತ್ತದೆ. ನಮ್ಮ ಅಧಿಕಾರವಧಿಯಲ್ಲಿ ಈ ರೀತಿಯ ಒಂದು ಘಟನೆ ನಡೆದಿಲ್ಲ. ನಾವು ಎಚ್ಚರಿಕೆ ಹಾಗೂ ಮುಂಜಾಗ್ರತೆಯನ್ನು ವಹಿಸುತ್ತಿದ್ದೆವು. 

2014ರಲ್ಲೂ ಚಂದ್ರಬಾಬು ನಾಯ್ಡು ಅವರ ಆಡಳಿತ ನಡೆಸುವಾಗ ಗೋದಾವರಿ ಪುಷ್ಕರಂನಲ್ಲೂ ಇದೇ ರೀತಿಯ ಘಟನೆ ನಡೆದಿತ್ತು. ಅಲ್ಲಿ 29 ಮಂದಿ ಕಾಲ್ತುಳಿತದಿಂದ ಮೃತಪಟ್ಟಿದ್ದರು. ಚಂದ್ರಬಾಬು ನಾಯ್ಡು ಅವರ ಪ್ರಚಾರದ ವ್ಯಾಮೋಹಕ್ಕೆ ಈ ರೀತಿ ಜನರನ್ನು ಬಲಿ ಕೊಡುತ್ತಿದ್ದಾರೆ. ಮೃತರ ಕುಟುಂಬಕ್ಕೆ ತಲಾ 50 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಾಳುಗಳಿಗೆ 5 ಲಕ್ಷ ರೂ. ಪರಿಹಾರವನ್ನು ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ (Jagan Mohan Reddy) ಆಗ್ರಹಿಸಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net