More

    ಮಂಗಳವಾರದಂದೇ ‘ಮಂಗಳವಾರ ರಜಾ ದಿನ’ ಚಿತ್ರದ ಹಾಡು

    ಬೆಂಗಳೂರು: ಶೀರ್ಷಿಕೆಯಲ್ಲೇ ವಿಭಿನ್ನತೆಯಿರುವ ಮಂಗಳವಾರ ರಜಾದಿನ ಚಿತ್ರದ ಶೀರ್ಷಿಕೆ ಹಾಡು ನವೆಂಬರ್ 24ರಂದು ಬಿಡುಗಡೆಯಾಗಲಿದೆ. ನಿರ್ದೇಶಕ ಯೋಗರಾಜ್ ಭಟ್ ಬರೆದಿರುವ ಈ ಚಿತ್ರದ ಶೀರ್ಷಿಕೆ ಹಾಡನ್ನು ವಿಜಯಪ್ರಕಾಶ್ ಹಾಡಿದ್ದಾರೆ. ಪ್ರಜೋತ್ ಡೇಸಾ ಸಂಗೀತ ನೀಡಿರುವ ಈ ಹಾಡು ಲಹರಿ‌ ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ.

    ಇದನ್ನೂ ಓದಿ: ಶಿವರಾಜಕುಮಾರ್​-ಧನಂಜಯ್​ ಜತೆಯಾದ ಫೃಥ್ವಿ ಅಂಬರ್​

    ಕ್ಷೌರಿಕನ ಸುತ್ತ ಹೆಣೆಯಲಾಗಿರುವ ಕಥಾಹಂದರ ಹೊಂದಿದೆ ಈ ಸಿನಿಮಾ. ಈ ಚಿತ್ರದ ಶೀರ್ಷಿಕೆ ಗೀತೆ ಕೂಡ ಸವಿತಾ ಸಮಾಜದವರ ಕೀರ್ತಿ ಸಾರುವ ಹಾಗಿದೆ ಎನ್ನುತ್ತಾರೆ ನಿರ್ದೇಶಕ ಯುವಿನ್. ತ್ರಿವರ್ಗ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ಚಿತ್ರೀಕರಣ ‌ಮುಕ್ತಾಯವಾಗಿದೆ.

    ಬೆಂಗಳೂರಿನಲ್ಲೇ ಬಹುತೇಕ ಭಾಗದ ಚಿತ್ರೀಕರಣ ನಡೆದಿದೆ. ಯವಿನ್ ರಚನೆ ಹಾಗೂ ನಿರ್ದೇಶನದ ಈ ಚಿತ್ರದ ನಾಯಕನಾಗಿ ಬಿಗ್ ಬಾಸ್ ಖ್ಯಾತಿಯ ಚಂದನ್ ಆಚಾರ್ ನಟಿಸಿದ್ದಾರೆ. ಚಂದನ್ ಆಚಾರ್ ಈ ಚಿತ್ರದಲ್ಲಿ ಕ್ಷೌರಿಕನ ಪಾತ್ರ ನಿರ್ವಹಣೆ ಮಾಡಿದ್ದಾರೆ. ಲಾಸ್ಯ ನಾಗರಾಜ್ ಈ ಚಿತ್ರದ ನಾಯಕಿ.‌ ಜಹಂಗೀರ್, ರಜನಿಕಾಂತ್, ಗೋಪಾಲ್ ದೇಶಪಾಂಡೆ, ನಂದನ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ಇದನ್ನೂ ಓದಿ: ಚಿರಂಜೀವಿ ಕರೊನಾ ಗೆದ್ದು ಬರಲಿ: ದೇವಸ್ಥಾನ ಸುತ್ತುತ್ತಿರುವ ಅಭಿಮಾನಿ ಬಳಗ

    ನಾಲ್ಕು ಹಾಡುಗಳಿದ್ದು ಪ್ರಜೋತ್ ಡೇಸಾ ಸಂಗೀತ ನೀಡಿದ್ದಾರೆ. ರಿತ್ವಿಕ್‌ ಮುರಳೀಧರ್ ಹಿನ್ನೆಲೆ ಸಂಗೀತ, ಉದಯ್ ಲೀಲಾ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ ಹಾಗೂ ಭೂಷಣ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆಯಾಗಿರುವ ಮಂಗಳವಾರ ರಜಾದಿನ ಚಿತ್ರದ ಟ್ರೇಲರ್ ಜನಮನಸೂರೆಗೊಂಡಿದೆ‌. ಡಿಸೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಸಿದ್ಧತೆ ನಡೆಯುತ್ತಿದೆ.

    ಕಿಚ್ಚನ ‘ಫ್ಯಾಂಟಮ್​’ ಚಿತ್ರಕ್ಕೆ ಮತ್ತೊಬ್ಬ ಪ್ರೊಡ್ಯೂಸರ್ ಬಂದ್ರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts