16 C
Bangalore
Thursday, December 12, 2019

ತಿತ್ಲಿಯಿಂದ ಪಾರಾಗಲು ಗುಹೆ ಹೊಕ್ಕಿದ್ದ 12 ಮಂದಿ ಸಾವು: ನಾಲ್ವರು ನಾಪತ್ತೆ

Latest News

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಅನ್ನಭಾಗ್ಯ ಅಕ್ಕಿ ಪ್ರಮಾಣ ಇಳಿಕೆ? 408 ಕೋಟಿ ರೂ ಉಳಿತಾಯ 

| ಬೇಲೂರು ಹರೀಶ ಬೆಂಗಳೂರು ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್​ದಾರರಿಗೆ ವಿತರಿಸುವ 7 ಕೆಜಿ ಅಕ್ಕಿ ಪ್ರಮಾಣವನ್ನು 5 ಕೆಜಿಗೆ ಇಳಿಸಿ,...

ಭುವನೇಶ್ವರ್​: ರಾಜ್ಯಕ್ಕೆ ಅಪ್ಪಳಿಸಿರುವ ತಿತ್ಲಿ ಚಂಡಮಾರುತದಿಂದ ಪಾರಾಗಲು ಗುಹೆಯಲ್ಲಿ ಹಿಲ್ಲಾಕ್​ ಗುಹೆಯಲ್ಲಿ ಆಶ್ರಯ ಪಡೆದಿದ್ದ ಬುಡಕಟ್ಟು ಜನಾಂಗದ ಮೂರು ಮಕ್ಕಳು ಸೇರಿ ಒಟ್ಟು 12 ಜನರು ಮೃತಪಟ್ಟಿದ್ದು, ನಾಲ್ವರು ಕಾಣೆಯಾಗಿದ್ದಾರೆ.

ಗಜಪತಿ ಜಿಲ್ಲೆಯ ಬಾರ್ಗರಾ ಗ್ರಾಮದ ಮನೆಗಳ ಛಾವಣಿಗಳು ಚಂಡಮಾರುತದ ರಭಸಕ್ಕೆ ಹಾರಿಹೋಗಿದ್ದವು. ಅದಾದ ಬಳಿಕ ಅಲ್ಲಿನ 22 ಜನರು ಅಲ್ಲೇ ಸಮೀಪವಿರುವ ಗುಹೆಯೊಳಗೆ ಆಶ್ರಯ ಪಡೆದಿದ್ದರು. ಆದರೆ ಮಳೆಯ ರಭಸಕ್ಕೆ ಆ ಗುಹೆಯ ಕಲ್ಲು 16 ಜನರ ಮೇಲೆ ಕುಸಿದಿದೆ. 12 ಮೃತದೇಹಗಳು ಸಿಕ್ಕಿದ್ದು ಇನ್ನೂ ನಾಲ್ಕು ಜನ ನಾಪತ್ತೆಯಾಗಿದ್ದಾರೆ. ಉಳಿದ ಆರು ಜನರು ಸುರಕ್ಷಿತವಾಗಿ ಹಳ್ಳಿಗೆ ಆಗಮಿಸಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ ಎಂದು ರಾಯಗಢ ಬ್ಲಾಕ್​ ಅಧ್ಯಕ್ಷ ಧಾಲೇಶ್ವರ್​ ಭುಯನ್​ ತಿಳಿಸಿದ್ದಾರೆ.

ಡಿಸಿ, ಸ್ಥಳೀಯ ಪೊಲೀಸ್​ ಅಧಿಕಾರಿಗಳು ತಮ್ಮ ಎಸ್​ಒಎಸ್​ ಕರೆಗೆ ಸ್ಪಂದಿಸಿಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು ಸೂಕ್ತ ಪರಿಹಾರ ನೀಡುವವರೆಗೆ ಮೃತರ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ ಎಂದು ಭುಯನ್​ ಹೇಳಿದ್ದಾರೆ.
ಗಜಪತಿ ಜಿಲ್ಲೆಯ ಬಾರ್ಗರಾ ಗ್ರಾಮ ಕರಾವಳಿ ಪ್ರದೇಶದಿಂದ ತುಂಬ ದೂರದಲ್ಲಿದೆ. ನಾವು ಕರಾವಳಿಯಲ್ಲಿ ಆಗುತ್ತಿರುವ ಹಾನಿಯ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದುದರಿಂದ ಅಲ್ಲಿಗೆ ತಲುಪಲು ಸ್ವಲ್ಪ ವಿಳಂಬವಾಯಿತು ಎಂದು ವಿಶೇಷ ಪರಿಹಾರ ದಳದ ಆಯುಕ್ತ ಬಿಷ್ಣುಪಾದ ಸೇಠಿ ಹೇಳಿದ್ದಾರೆ.

ಒಡಿಶಾಕ್ಕೆ ಅಪ್ಪಳಿಸಿರುವ ತಿತ್ಲಿ ಚಂಡಮಾರುತ, ಅದರ ಪರಿಣಾಮವಾಗಿ ಸುರಿಯುತ್ತಿರುವ ಮಳೆ, ಪ್ರವಾಹಕ್ಕೆ ಈಗಾಗಲೇ 21 ಜನರು ಮೃತಪಟ್ಟಿದ್ದಾಗಿ ವರದಿ ಬಂದಿದೆ. ಗಜಪತಿಯಲ್ಲಿ 15ಜನರು ಬೇರೆ ಅವಘಡದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...