More

    ನೀರಿನ ಕಾಮಗಾರಿಗಳಿಗೆ ವೇಗ ನೀಡಿ

    ಯಾದಗಿರಿ: ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳಿಗೆ ವೇಗ ನೀಡಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಗರ್ಳಾಶಿ ಟಿ.ಕೆ. ಅನಿನಿಲಕುಮಾರ್ ಅವರು ಸೂಚಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆಸಿದ ಪ್ರಮುಖ ವಿಷಯಗಳ ಚಚರ್ಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 386 ಶುದ್ಧ ಕುಡಿಯುವ ನೀರಿನ ಘಟಕಗಳ ಪೈಕಿ 274 ಮಾತ್ರ ಕಾಯರ್ಾಚರಣೆ ಮಾಡುತ್ತಿವೆ. ಬಾಕಿ 112 ಘಟಕಗಳು ಕಾಯರ್ಾಚರಣೆಯಲ್ಲಿಲ್ಲ. ಇಷ್ಟೊಂದು ಘಟಕಗಳು ಸ್ಥಗಿತಗೊಂಡಿದ್ದರೆ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗಬಹುದು. ತಕ್ಷಣ ಇವುಗಳನ್ನು ಸರಿಪಡಿಸಬೇಕು. ಅದೇ ರೀತಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ ಚಾಲ್ತಿಗೆ ಕೂಡ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

    ನಗರ ಪ್ರದೇಶದಲ್ಲಿ ಕೈಗೊಂಡಿದ್ದ 500 ಕಾಮಗಾರಿಗಳಲ್ಲಿ 495 ಪೂರ್ಣಗೊಂಡಿವೆ. ಆದರೆ, ಆರ್ಥಿಕ ಪ್ರಗತಿ ಶೇ.61.30ರಷ್ಟಿದೆ. ಕಾಮಗಾರಿಗಳ ಭೌತಿಕ ಪ್ರಗತಿಗೆ ತಕ್ಕಂತೆ ಆಥರ್ಿಕ ಪ್ರಗತಿ ಸಾಧಿಸಬೇಕು. ಇನ್ನು ಜಿಲ್ಲೆಯಲ್ಲಿ ಪ್ರವಾಹ ಸಂದರ್ಭದಲ್ಲಿ ಉಂಟಾದ ರಸ್ತೆ ಮತ್ತು ಸೇತುವೆಗಳ ದುರಸ್ತಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಪಂಚಾಯಿತಿ ರಾಜ್ ಇಂಜಿನೀಯರಿಂಗ್ ವಿಭಾಗ ಮತ್ತು ಲೋಕೋಪಯೋಗಿ ಇಲಾಖೆ ಇಂಜಿನಿಯರಗಳು ಬರುವ ಮಾಚರ್್ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದರು.

    ಆಯುಷ್ಮಾನ್ ಕಾರ್ಡ್​ ನೋಂದಾಯಿಸಿ: ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 1.44 ಲಕ್ಷ ಕಾಡರ್್ಗಳನ್ನು ಮಾತ್ರ ವಿತರಿಸಲಾಗಿದೆ. ಈ ಯೋಜನೆಯಡಿ ಬಿಪಿಎಲ್ ಕುಟುಂಬ ವರ್ಷದಲ್ಲಿ 5ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್ ಕುಟುಂಬ 1.50 ಲಕ್ಷ ರೂ.ವರೆಗೂ ಸಹಪಾವತಿಯೊಂದಿಗೆ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಬಡವರ ಆರೋಗ್ಯ ರಕ್ಷಣೆಯಲ್ಲಿ ಈ ಯೋಜನೆ ಪ್ರಮುಖವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಬೇಕು ಎಂದರು.

    ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಮಾತನಾಡಿ, ಬೆಳೆ ಸಮೀಕ್ಷೆ ವಿವರ, ವಸತಿ ಯೋಜನೆ, ನಗರೋತ್ಥಾನ ಕಾಮಗಾರಿಗಳ ಪ್ರಗತಿ, ಜಲಾಮೃತ ಹಾಗೂ ಜಲಸಂವರ್ಧನೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಗೆ ನಿಗದಿಪಡಿಸಿದ 26.61 ಲಕ್ಷ ಮಾನವ ದಿನಗಳ ಗುರಿಯಲ್ಲಿ ಈಗಾಗಲೇ 20.45 ಲಕ್ಷ ದಿನಗಳನ್ನು ಪೂರ್ಣಗೊಳಿಸಿದ್ದು, ಶೇ.76.85ರಷ್ಟು ಸಾಧನೆ ಮಾಡಲಾಗಿದೆ ಎಂದು ತಿಳಿಸಿದರು.

    ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದಶರ್ಿ ಮುಕ್ಕಣ್ಣ ಕರಿಗಾರ, ಜಂಟಿ ಕೃಷಿ ನಿದರ್ೇಶಕ ಆರ್.ದೇವಿಕಾ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts