More

    VIDEO| ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮುನ್ನಡೆ: ಕರೊನಾ ನಿಯಮಗಳನ್ನು ಗಾಳಿಗೆ ತೂರಿ ಸಂಭ್ರಮಾಚರಣೆ

    ಕೋಲ್ಕತ: ಚುನಾವಣಾ ಫಲಿತಾಂಶ ಏನೇ ಬರಲಿ ಯಾವುದೇ ಕಾರಣಕ್ಕೂ ಸಂಭ್ರಮಾಚರಣೆ ಮಾಡಬಾರದು ಎಂಬ ನ್ಯಾಯಾಲಯದ ಸೂಚನೆ ನಡುವೆಯೂ ಕರೊನಾ ನಿಯಮಗಳನ್ನು ಗಾಳಿಗೆ ತೂರಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದೆ.

    ಸದ್ಯದ ಟ್ರೆಂಡ್​ ಪ್ರಕಾರ ಪಶ್ವಿಮ ಬಂಗಾಳದಲ್ಲಿ ಟಿಎಂಸಿ 203 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಗೆಲುವಿನತ್ತ ದಾಪುಗಾಲು ಇಡುತ್ತಿದೆ. ಈ ಹಿನ್ನೆಲೆಯಲ್ಲಿ ಟಿಎಂಸಿ ಬೆಂಬಲಿಗರ ಸಂಭ್ರಮಾಚರಣೆ ಈಗಾಗಲೇ ಮುಗಿಲು ಮುಟ್ಟಿದೆ. ಕೋಲ್ಕತದ ಕಲಿಘಟ್​, ಅಸನ್ಸೋಲ್​ನಲ್ಲಿ ಟಿಎಂಸಿ ಬೆಂಬಲಿಗರು ಬೀದಿಗಳಿದು ಪಕ್ಷದ ಬಾವುಟ ಹಿಡಿದುಕೊಂಡು ಜೈಕಾರ ಕೂಗುತ್ತಿದ್ದಾರೆ.

    ಆದರೆ, ದೇಶದಲ್ಲಿ ಕರೊನಾ ಎರಡನೇ ಅಲೆ ಬಿಕ್ಕಟ್ಟು ಸೃಷ್ಟಿಸಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹುಮುಖ್ಯವಾಗಿದೆ. ಅಲ್ಲದೆ, ನ್ಯಾಯಾಲಯವು ಸಹ ಆಚರಣೆ ಮಾಡದಂತೆ ಸೂಚಿಸಿದೆ. ಆದರೆ, ನಿಯಮಗಳನ್ನು ಗಾಳಿಗೆ ತೂರಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

    ಒಟ್ಟು 294 ವಿಧಾನಸಭಾ ಸ್ಥಾನಗಳಲ್ಲಿ ಅಧಿಕಾರದ ಗದ್ದುಗೆ ಏರಲು 147 ಮ್ಯಾಜಿಕ್​ ನಂಬರ್​ ಅವಶ್ಯಕತೆ ಇದೆ. ಸದ್ಯ ಟಿಎಂಸಿ 203 ಮತ್ತು ಬಿಜೆಪಿ 86 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದುವರೆಗೂ ಅಸ್ತಿತ್ವವೇ ಇರದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಈ ಬಾರಿ ಗಟ್ಟಿಯಾಗಿ ನಲೆಯೂರಿದ್ದು, ಟಿಎಂಸಿ ಟಕ್ಕರ್​ ಕೊಡುವ ಸಾಧ್ಯತೆ ಇದೆ. ಹೀಗಾಗಿ ಈ ಚುನಾವಣಾ ಫಲಿತಾಂಶದ ಭಾರೀ ನಿರೀಕ್ಷೆ ಇದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts