More

    ಅಕ್ರಮ ಹಣ ವರ್ಗಾವಣೆ ಪ್ರಕರಣ; ಸೆಂಥಿಲ್ ಬಾಲಾಜಿ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದ ನ್ಯಾಯಾಲಯ

    ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ED) ವಶದಲ್ಲಿರುವ ತಮಿಳುನಾಡು ಸರ್ಕಾರದ ಸಚಿವ ವಿ. ಸೆಂಥಿಲ್​ ಕುಮಾರ್​ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಸ್ಥಳೀಯ ಸೆಷನ್ಸ್​ ನ್ಯಾಯಾಲಯ ನವೆಂಬರ್ 6ರವರೆಗೆ ವಿಸ್ತರಿಸಿದೆ.

    ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಅಲ್ಲಿ ಅವರಿದ್ದ ಏಕಸದಸ್ಯ ಪೀಠವು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ಬಳಿಕ ನ್ಯಾಯಾಂಗ ಬಂಧನದ ಅವಧಿಯನ್ನು ನವೆಂಬರ್ 6ರವೆರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.

    ಹಿಂದಿನ ಎಐಎಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ವೇಳೆ ಸೆಂಥಿಲ್​ ಉದ್ಯೋಗಕ್ಕಾಗಿ ಹಣ ಪಡೆದು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಸೆಂಥಿಲ್​ ಬಾಲಾಜಿರನ್ನು ಜೂನ್​ 14ರಂದು ಜಾರಿ ನಿರ್ದೇಶನಾಲಯ (ED) ವಶಕ್ಕೆ ಪಡೆದಿತ್ತು.

    ಇದನ್ನೂ ಓದಿ: VIDEO| ಚಲಿಸುವ ಕಾರಿನ ಮೇಲೆ ಪಟಾಕಿ ಸಿಡಿಸಿ ಹುಚ್ಚಾಟ

    ಬಂಧನದ ನಂತರ ಸೆಂಥಿಲ್​ ಬಾಲಾಜಿ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರಿಗೆ ಬೈಪಾಸ್ ಸರ್ಜರಿ ಮಾಡಿಸಲಾಗಿತ್ತು. ಬಳಿಕ ಅವರನ್ನು ವಶಕ್ಕೆ ಪಡೆದ ಜಾರಿ ನಿರ್ದೇಶನಾಲಯ ಪ್ರಸ್ತುತ ಪುಝಲ್​ ಜೈಲಿನಲ್ಲಿ ಇರಿಸಿ ವಿಚಾರಣೆ ನಡೆಸುತ್ತಿದೆ.

    ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಆಗಸ್ಟ್​ 12ರಂದು ಮುರು ಸಾವಿರ ಪುಟಗಳ ಚಾರ್ಜ್​ಶೀಟ್​ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಸೆಂಥಿಲ್ ಬಾಲಾಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮದ್ರಾಸ್​ ಹೈಕೋರ್ಟ್​ ಹಾಗೂ ಸ್ಥಳೀಯ ಸೆಷನ್ಸ್​ ನ್ಯಾಯಾಲಯ ಮೂರು ಬಾರಿ ತಿರಸ್ಕರಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts