More

    ಸಾಧನೆಗೆ ನಿರಂತರ ಶ್ರಮ ಅಗತ್ಯ

    ನೇಸರಗಿ: ಸ್ಪರ್ಧಾ ಮನೋಭಾವದಿಂದ ಮುನ್ನುಗ್ಗಿದಾಗ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಎನ್.ಎಂ.ಕುದರಿಮೋತಿ ಹೇಳಿದರು.

    ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಂಗೂಬಾಯಿ ಹಾನಗಲ್ ಸಭಾಭವನದಲ್ಲಿ 2023-24ನೇ ಸಾಲಿನ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್, ಸ್ಕೌಟ್ಸ್ ಹಾಗೂ ಗೈಡ್ಸ್, ರೆಡ್‌ಕ್ರಾಸ್ ಘಟಕಗಳ ಉದ್ಘಾಟನೆ ಹಾಗೂ ಪ್ರಥಮ ವರ್ಷದ ಬಿಎ, ಬಿಕಾಂ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

    ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಗುರುವಿನ ಮಾರ್ಗದರ್ಶನ ಅವಶ್ಯವಾಗಿದೆ. ಪ್ರತಿಯೊಬ್ಬರೂ ಬದುಕಿನಲ್ಲಿ ಉನ್ನತ ಗುರಿ ಹೊಂದುವ ಮೂಲಕ ಅದನ್ನು ಸಾಕಾರಗೊಳಿಸಲು ನಿರಂತರ ಶ್ರಮಿಸಬೇಕೆಂದರು.

    ಪ್ರಾಚಾರ್ಯ ಡಾ.ಕೀರನಾಯ್ಕ ಗಡ್ಡಿಗೌಡರ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.

    ಗ್ರಾಪಂ ಅಧ್ಯಕ್ಷ ನಿಂಗಪ್ಪ ಮಾಳಣ್ಣವರ, ಸದಸ್ಯ ನಿಂಗಪ್ಪ ತಳವಾರ, ಸಾಂಸ್ಕೃತಿಕ ವಿಭಾಗದ ಸಂಚಾಲಕಿ ಡಾ.ನಾಗರತ್ನಾ ರೇಣಕಿಗೌಡರ, ಐಕ್ಯುಎಸಿ ಸಂಚಾಲಕಿ ಪ್ರೊ.ಶ್ರೀದೇವಿ ನರವಾಡೆ, ಪ್ರೊ.ವಿನಯ ಕುಲಕರ್ಣಿ, ಪ್ರೊ.ಎಂ.ಬಿ.ಕೊಪ್ಪದ, ಗ್ರಂಥಪಾಲಕ ಮಲ್ಲಿಕಾರ್ಜುನ ಕುಂಬಾರ, ಪ್ರೊ.ರವೀಂದ್ರ ಪೂಜೇರಿ, ಪ್ರೊ.ನೇಂದ್ರಪ್ಪ, ಪ್ರೊ.ಪೃಥ್ವಿರಾಜ್ ಎನ್, ಪ್ರೊ.ಶಿವಾನಂದ ಹಿರೇಮಠ, ಸುರೇಖಾ ಶೆಟ್ಟಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts