25.5 C
Bangalore
Monday, December 16, 2019

ಅಪಘಾತ ತಡೆಗೆ ಹೆಚ್ಚುವರಿ ಸಿಗ್ನಲ್ ಅಳವಡಿಕೆ

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಅವಿನ್ ಶೆಟ್ಟಿ ಉಡುಪಿ
ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ಅಪಾಯಕಾರಿ ಜಂಕ್ಷನ್‌ಗಳಲ್ಲಿ ಸಿಗ್ನಲ್ ಅಳವಡಿಕೆ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ರಾಷ್ಟ್ರೀಯ ಹೆದ್ದಾರಿ 66 ಕುಂದಾಪುರ-ಪಡುಬಿದ್ರಿ ನಡುವೆ ಈ ಹಿಂದೆ 6 ಕಡೆ ಸಿಗ್ನಲ್ ಅಳವಡಿಸಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರಸ್ತುತ ಹೆಚ್ಚುವರಿಯಾಗಿ ಮೂರು ಮತ್ತು ಮಲ್ಪೆಯಿಂದ ಮಣಿಪಾಲವರೆಗೆ ಒಂಬತ್ತು ಸಿಗ್ನಲ್ ಅಳವಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ.

- Advertisement -

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳಿಗೆ ಕಡಿವಾಣ, ಟ್ರಾಫಿಕ್ ಸಮಸ್ಯೆ ನಿವಾರಿಸುವ ಸಲುವಾಗಿ ಸಿಗ್ನಲ್ ಅಳವಡಿಕೆ ಅಗತ್ಯ ಎಂದು ಪ್ರಾಧಿಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ವಿವರಿಸಲಾಗಿದೆ. ಹೆದ್ದಾರಿಯಲ್ಲಿ ಅಪಾಯಕಾರಿ ಜಂಕ್ಷನ್‌ಗಳಿಂದಲೇ ಸಾಕಷ್ಟು ಜನ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ ಎಂದು ಮಣಿಪಾಲ ಎಂಐಟಿ ತಜ್ಞರು ಪೊಲೀಸ್ ಇಲಾಖೆಗೆ ನೀಡಿದ್ದ ವರದಿಯಲ್ಲಿ ಉಲ್ಲೇಖಿಸಿದ್ದರು.

ಎಲ್ಲಿಲ್ಲಿ ಸಿಗ್ನಲ್ ಅಳವಡಿಕೆ?: ಉಡುಪಿ ವ್ಯಾಪ್ತಿಯಲ್ಲಿ ಪಡುಬಿದ್ರಿ, ಬಲೈಪಾದೆ, ಅಂಬಾಗಿಲುವಿನಲ್ಲಿ ಹೆಚ್ಚುವರಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗುತ್ತದೆ. ಈ ಹಿಂದಿನ ಪ್ರಸ್ತಾವನೆಯನ್ವಯ ಎನ್‌ಎಚ್ 66 ಕುಂದಾಪುರ ವ್ಯಾಪ್ತಿಯ ತಲ್ಲೂರು, ಸಂಗಮ್, ಹೆಮ್ಮಾಡಿ, ಉಡುಪಿ ವ್ಯಾಪ್ತಿಯ ಅಂಬಲಪಾಡಿ, ಕಟಪಾಡಿ, ಸಂತೆಕಟ್ಟೆ ಜಂಕ್ಷನ್‌ಗಳಲ್ಲೂ ಸಿಗ್ನಲ್ ಅಳವಡಿಸಲಾಗುತ್ತದೆ. ಮಲ್ಪೆ ಜಂಕ್ಷನ್, ಕರಾವಳಿ ಬೈಪಾಸ್, ಬನ್ನಂಜೆ, ಎಂಜಿಎಂ, ಕಲ್ಸಂಕ, ಶಿರಿಬೀಡು, ಸಿಂಡಿಕೇಟ್ ಸರ್ಕಲ್. ಎಂಐಟಿ, ಟೈಗರ್ ಸರ್ಕಲ್‌ನಲ್ಲಿ ಒಟ್ಟು ಒಂಬತ್ತು ಕಡೆ ಸಿಗ್ನಲ್ ಅಳವಡಿಕೆಗಾಗಿ ಜಿಲ್ಲಾಡಳಿತ, ಸ್ಥಳೀಯಾಡಳಿತ ಸಂಸ್ಥೆಯೊಂದಿಗೆ ಚರ್ಚಿಸಿ ಪೊಲೀಸ್ ಇಲಾಖೆ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಸಿಸಿಟಿವಿ ಅಳವಡಿಕೆ: ಪೊಲೀಸ್ ಇಲಾಖೆ ರಾಷ್ಟ್ರೀಯ ಹೆದ್ದಾರಿ 65 ಮತ್ತು 165 ಎ ನಲ್ಲಿ ಸಿಗ್ನಲ್ ಅಳವಡಿಕೆಗಾಗಿ ಗುರುತಿಸಿರುವ ಎಲ್ಲ ಜಂಕ್ಷನ್‌ಗಳು ಅಪಾಯಕಾರಿಯಾಗಿದ್ದು, ಪದೇಪದೆ ಅಪಘಾತಗಳು ಮರುಕಳಿಸುತ್ತಿರುತ್ತವೆ. ವಾಹನಗಳ ಅಡ್ಡ್ಡಾದಿಡ್ಡಿ ಚಾಲನೆ ಸೇರಿದಂತೆ ಸಂಚಾರ ನಿಯಮ ಉಲ್ಲಂಘನೆಯಾಗುತ್ತಿದ್ದು, ಹೆಚ್ಚಿನ ಅಪಘಾತಕ್ಕೆ ಕಾರಣವಾಗುತ್ತಿದೆ. ಎಲ್ಲ ಸಿಗ್ನಲ್‌ಗಳಲ್ಲಿ ಸಿಸಿಟಿವಿ ಅಳವಡಿಸಿ ಪೊಲೀಸ್ ಇಲಾಖೆ ಮಾನಿಟರಿಂಗ್ ಮಾಡಿ, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಿದೆ.

ಅಡ್ಡಾದಿಡ್ಡಿ ವಾಹನ ಸಂಚಾರ, ಟ್ರಾಫಿಕ್ ಸಮಸ್ಯೆ ನಿಯಂತ್ರಣ, ಅಪಘಾತಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಹೆಚ್ಚುವರಿ ಮೂರು ಕಡೆ ಹಾಗೂ ಮಲ್ಪೆ-ಮಣಿಪಾಲ ನಡುವೆ ಒಂಬತ್ತು ಕಡೆ ಸಿಗ್ನಲ್ ಅಳವಡಿಕೆ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
– ನಿಶಾ ಜೇಮ್ಸ್, ಉಡುಪಿ ಎಸ್‌ಪಿ

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...