More

    ಲಂಚಕ್ಕೆ ಬೇಡಿಕೆ ಇಟ್ಟರೆ ದೂರು ನೀಡಲಿ

    ರಾಮದುರ್ಗ: ಸಾರ್ವಜನಿಕ ಹಾಗೂ ವೈಯಕ್ತಿಕ ಕೆಲಸಕ್ಕಾಗಿ ಯಾವುದೇ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟರೆ ಹಾಗೂ ಅಕ್ರಮ ಆಸ್ತಿ ಗಳಿಕೆ ಮಾಡಿದ್ದರೆ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದರೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಲೋಕಾಯುಕ್ತ ಪೊಲೀಸ್ ಇಲಾಖೆ ಸಿದ್ಧವಿದೆ ಎಂದು ಬೆಳಗಾವಿ ಲೋಕಾಯುಕ್ತ ಎಸ್‌ಪಿ ಹಣಮಂತರಾಯ ಹೇಳಿದರು.

    ಪಟ್ಟಣದ ತಾಪಂ ಸಭಾಭವನದಲ್ಲಿ ಬೆಳಗಾವಿ ಲೋಕಾಯುಕ್ತರು ಹಾಗೂ ರಾಮದುರ್ಗ ತಾಲೂಕಾಧಿಕಾರಿಗಳ ಸಮಕ್ಷಮ ಬುಧವಾರ ಏರ್ಪಡಿಸಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸರ್ಕಾರಿ ಅಧಿಕಾರಿಗಳಿಂದ ಆದ ತೊಂದರೆಗಳನ್ನು ಗಮನಕ್ಕೆ ತಂದು ದೂರು ನೀಡಬಹುದಾಗಿದೆ. ಸಾರ್ವಜನಿಕ ಹಿತಾಸಕ್ತಿ ಪರವಾಗಿ ಹಾಗೂ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳಲು ಬದ್ಧರಿದ್ದೇವೆ. ಇನ್ನೊಂದು ವಾರದಲ್ಲಿ ಮತ್ತೆ ಸಾರ್ವಜನಿಕ ಸಂಪರ್ಕ ಸಭೆ ಏರ್ಪಡಿಸಲಾಗುವುದು ಎಂದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ ಬಳಿಗಾರ ಹಾಗೂ ಅಕ್ಷರ ದಾಸೋಹ ಅಧಿಕಾರಿ ಬಿ.ಎ್ ಮುನವಳ್ಳಿ, ಡಿವೈಎಸ್‌ಪಿ ಬಿ.ಎಸ್. ಪಾಟೀಲ ಭರತರಡ್ಡಿ, ತಹಸೀಲ್ದಾರ್ ಪ್ರಕಾಶ ಹೊಳೆಯಪ್ಪಗೋಳ, ಸಿಪಿಐ ಐ.ಆರ್. ಪಟ್ಟಣಶೆಟ್ಟಿ, ತಾ.ಪಂ ಎಡಿ, ಎ.ಎಸ್. ಕುಂಬಾರ, ಲೋಕಾಯುಕ್ತ ಸಿಪಿಐ ಅಜಿತ್ ಕಲಾದಗಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts