20.8 C
Bangalore
Sunday, December 8, 2019

ಬೆಳಗಾವಿ: ಗಣೇಶನಿಗೆ ಅದ್ದೂರಿ ವಿದಾಯ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಬೆಳಗಾವಿ: ತುಂತುರು ಮಳೆಯ ನಡುವೆಯೇ ಗುರುವಾರ ಸಂಜೆ ಬೆಳಗಾವಿಯಲ್ಲಿ ಗಣೇಶನಿಗೆ ಅದ್ದೂರಿ ವಿದಾಯ ಹೇಳಲಾಯಿತು. 11 ದಿನಗಳವರೆಗೆ ಭಕ್ತಿಯಿಂದ ಪೂಜೆ ಸಲ್ಲಿಸಿದ ಸಾರ್ವಜನಿಕರು ‘ವಿಘ್ನ ನಿವಾರಕ’ನಿಗೆ ಸಂಭ್ರಮ, ಸಡಗರದಿಂದ ಬೀಳ್ಕೊಟ್ಟರು.

ಮಹಾರಾಷ್ಟ್ರದ ಮುಂಬೈ, ಪುಣೆ ಬಿಟ್ಟರೆ ದೇಶದಲ್ಲೇ ಚೌತಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲ್ಪಡುವುದು ಬೆಳಗಾವಿಯಲ್ಲಿ ಮಾತ್ರ. ಕನ್ನಡ ಮತ್ತು ಮರಾಠಿ ಸಂಸ್ಕೃತಿ ಮೇಳೈಸಿರುವ ಬೆಳಗಾವಿಯ ವಿವಿಧ ಬಡಾವಣೆಗಳಲ್ಲಿ 378 ಸಾರ್ವಜನಿಕ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿತ್ತು.

ನೆರೆ ನೋವಿನ ಮಧ್ಯೆಯೇ ಸರಳವಾಗಿ ಗಣೇಶ ಹಬ್ಬವನ್ನು ಆಚರಿಸಿದ ಜನರು ಭಕ್ತಿಪೂರ್ವಕವಾಗಿ ಗಣಪನನ್ನು ಬೀಳ್ಕೊಟ್ಟರು. ಹುತಾತ್ಮ ಚೌಕ್‌ನಲ್ಲಿ ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ ವಿಗ್ರಹಗಳ ವಿಸರ್ಜನೆ ಮೆರವಣಿಗೆಗೆ ಚಾಲನೆ ನೀಡಿದರು. ಅಲ್ಲಿಂದ ಹೊರಟ ಮೆರವಣಿಗೆ ರಾಮದೇವ ಗಲ್ಲಿ, ಸಮಾದೇವಿ ಗಲ್ಲಿ, ಕಾಲೇಜು ರಸ್ತೆ, ಧರ್ಮವೀರ ಸಂಭಾಜಿ ವೃತ್ತ, ಕಿರ್ಲೋಸ್ಕರ್ ರಸ್ತೆ, ರಾಮಲಿಂಗಖಿಂಡ್ ಗಲ್ಲಿ, ಶಿವಭವನ, ಶನಿಮಂದಿರ, ಕಪಿಲೇಶ್ವರ ರೈಲ್ವೆ ಮೇಲ್ಸೇತುವೆ ಮಾರ್ಗವಾಗಿ ಸಂಚರಿಸಿ ಕಪಿಲೇಶ್ವರ ದೇವಸ್ಥಾನ ಬಳಿಯ ಹೊಂಡಗಳಲ್ಲಿ ಮುಕ್ತಾಯಗೊಂಡಿತು. ಶಾಸಕದ್ವಯರು, ಮಹಾನಗರ ಪಾಲಿಕೆ ಮತ್ತು ಪೊಲೀಸ್ ಅಕಾರಿಗಳು ಗಣೇಶನನ್ನು ಹೊತ್ತು ಸಾಗುವ ವಾಹನ ಚಲಾಯಿಸಿ ಗಮನ ಸೆಳೆದರು.

ಕನ್ನಡಿಗರು ಮತ್ತು ಮರಾಠಿಗರು ಭಾಷಾ ಭೇದಭಾವ ಮರೆತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಎಲ್ಲಿ ನೋಡಿದರಲ್ಲಿ ಕಣ್ಣಿಗೆ ರಾಚುತ್ತಿದ್ದ ಜನಸಾಗರ ಹಾಗೂ ಸಾಲು ಸಾಲಾಗಿ ಹೊರಟಿದ್ದ ವಾಹನಗಳು, ಕುಣಿದು ಕುಪ್ಪಳಿಸಿದ ಯುವಕರ ದೃಶ್ಯಗಳು ಕಣ್ಮನ ಸೆಳೆದವು. ಗ್ರಾಮೀಣ ಸಂಸ್ಕೃತಿ ಸಾರುವ ಜಾನಪದ ಕಲಾತಂಡಗಳ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಿದವು. ಮೆರವಣಿಗೆ ಮಾರ್ಗದಲ್ಲಿ ಕೆಲವು ಸಂಘಟನೆಗಳ ಪರವಾಗಿ ಜನರಿಗೆ ಕುಡಿಯುವ ನೀರು, ತಂಪು ಪಾನೀಯ, ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಶಾಸಕ ಅಭಯ ಪಾಟೀಲ ಮಾತನಾಡಿ, ಲಕ್ಷಾಂತರ ಜನರು ಬೆಳಗಾವಿಯಲ್ಲಿ ನಡೆಯುವ ಗಣೇಶ ವಿಸರ್ಜನೆ ಮೆರವಣಿಗೆ ವೀಕ್ಷಣೆಗೆ ಆಗಮಿಸುತ್ತಿದ್ದಾರೆ.

ಗಣೇಶೋತ್ಸವ ಮಹಾಮಂಡಳದ ಕಾರ್ಯಕರ್ತರು ಶಾಂತತೆ ಕಾಪಾಡಿಕೊಳ್ಳಬೇಕು. ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಎಚ್ಚರ ವಹಿಸಬೇಕು. ಶುಕ್ರವಾರ ಬೆಳಗ್ಗೆ 3 ಗಂಟೆಯೊಳಗೆ ಮೆರವಣಿಗೆ ಮುಕ್ತಾಯಗೊಳಿಸಲು ಪ್ರಯತ್ನಿಸಬೇಕು. ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು ಎಂದರು. ಶಾಸಕ ಅನಿಲ ಬೆನಕೆ ಮಾತನಾಡಿ, ಪ್ರತಿವರ್ಷ ಬೆಳಗಾವಿಯಲ್ಲಿ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ.

ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಮೆರವಣಿಗೆ ಸುಗಮವಾಗಿ ಸಾಗಲು ಎಲ್ಲರೂ ಸಹಕರಿಸಬೇಕು. ಜನಪ್ರತಿನಿಗಳು, ಪೊಲೀಸ್ ಅಕಾರಿಗಳು ನಿಮ್ಮೊಂದಿಗೆ ಇರುತ್ತಾರೆ. ಹಾಗಾಗಿ ಮೆರವಣಿಗೆ ವೇಳೆ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.

ಭದ್ರತೆಗೆ ಪೊಲೀಸ್ ನಿಯೋಜನೆ

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಸುಮಾರು 3 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ನಮ್ಮೊಂದಿಗೆ ಸಹಕರಿಸಬೇಕು.
|ಬಿ.ಎಸ್.ಲೋಕೇಶ್‌ಕುಮಾರ್ ಪೊಲೀಸ್ ಆಯುಕ್ತ

ಸ್ವಚ್ಛತೆ ಕಾಪಾಡಲು ಕರೆ

ಗಣೇಶ ವಿಗ್ರಹಗಳ ವಿಸರ್ಜನೆಗಾಗಿ ಕಪಿಲೇಶ್ವರ ದೇವಸ್ಥಾನ ಪಕ್ಕದ ಎರಡು ಹೊಂಡಗಳ ಸೇರಿ ಎಂಟು ಕಡೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. 16 ಕ್ರೇನ್ ಬಳಸಲಾಗುತ್ತಿದೆ. ಸಾರ್ವಜನಿಕರು, ಮಹಾಮಂಡಳದವರು ಹೊಂಡದ ಸುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು.
|ಅಶೋಕ ದುಡಗುಂಟಿ ಪಾಲಿಕೆ ಆಯುಕ್ತ

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...