More

    ಸೊಳ್ಳೆ ಕಚ್ಚದಂತೆ ಮುಂಜಾಗ್ರತೆವಹಿಸುವುದು ಅಗತ್ಯ

    ಮಾನ್ವಿ: ಹಿರೇಕೊಟ್ನೆಕಲ್ ಹಾಗೂ ಭೋಗಾವತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗಾಗಿ ಆರೋಗ್ಯ ಇಲಾಖೆಯಿಂದ ಡೆಂೆ ಹಾಗೂ ಸೊಳ್ಳೆಗಳಿಂದ ಹರಡುವ ಇತರ ಕಾಯಿಲೆಗಳ ಕುರಿತು ಮಂಗಳವಾರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.


    ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಮಾತನಾಡಿ, ಸೊಳ್ಳೆಗಳು ಕಚ್ಚದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು. ಮುಖ್ಯ ಶಿಕ್ಷಕ ಸಬ್ಜಲಿಸಾಬ್ ಮಾತನಾಡಿ, ಮಳೆಗಾಲ ಮತ್ತು ಚಳಿಗಾಲದಲ್ಲಿ ಸೊಳ್ಳೆ ಕಾಟ ಹೆಚ್ಚಾಗಿರುತ್ತದೆ. ಮಲಗುವಾಗ ಸೊಳ್ಳೆ ಪರದೆ ಬಳಸಬೇಕು ಎಂದು ತಿಳಿಸಿದರು.ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಭೀಮೇಶಪ್ಪ, ಮುಖ್ಯ ಶಿಕ್ಷಕಿ ಸಂಜೀವಮ್ಮ, ಶಿಕ್ಷಕರಾದ ಶರಣಮ್ಮ, ಪ್ರಕಾಶ, ಶಿವಗ್ಯಾನಿ, ಶ್ರೀದೇವಿ, ಬಸವರಾಜ, ಗಿರೀಶ್ ಇತರರು ಇದ್ದರು

    ಇದನ್ನೂ ಓದಿ: ಸೊಳ್ಳೆಗಳಿಂದ ಹರಡುವ ರೋಗ ನಿಯಂತ್ರಿಸೋಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts