25.1 C
Bangalore
Friday, December 6, 2019

ರಾಮದುರ್ಗ: ಪಂಪ್‌ಸೆಟ್‌ಗೆ ಕರೆಂಟಿಲ್ಲದೆ ಸಮಸ್ಯೆ

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ರಾಮದುರ್ಗ: ತಾಲೂಕಿನಲ್ಲಿ ಪ್ರವಾಹ ಸಮಸ್ಯೆಗಳಿಂದ ಜನರು ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ. ಈಗ ಮತ್ತೊಂದು ಸಮಸ್ಯೆ ಎದುರಾಗಿದ್ದು, ವಿದ್ಯುತ್ ಪೂರೈಕೆ ಇಲ್ಲದೆ ಜನರು ಕಂಗಾಲಾಗಿದ್ದಾರೆ. ಧರೆಗುರುಳಿದ ವಿದ್ಯುತ್ ಕಂಬಗಳನ್ನು ಎಬ್ಬಿಸಿ ನಿಲ್ಲಿಸುವ ಕಾರ್ಯ ನಡೆದಿದೆಯಾದರೂ ಪೂರೈಕೆ ಇಲ್ಲದ್ದರಿಂದ ಹಲವು ಕೆಲಸಗಳಿಗೆ ಅಡೆತಡೆಯಾಗಿದೆ.

ಆಗಸ್ಟ್ ತಿಂಗಳಲ್ಲಿ ಮಲಪ್ರಭಾ ನದಿ ಪ್ರವಾಹ ಉಂಟಾಗಿ ನದಿ ಪಾತ್ರದ ಜನರ ಜೀವನ ದಿವಾಳಿಯಾಗಿತ್ತು. ಬೆಳೆಗಳು ಸಂಪೂರ್ಣ ನಾಶವಾಗಿದ್ದವು. ಪ್ರವಾಹದ ನಂತರವಾದರೂ ಅಳಿದುಳಿದ ಬೆಳೆಗಳಿಗೆ, ಮತ್ತೆ ಬಿತ್ತನೆ ಮಾಡಿದ ಜಮೀನಿಗೆ ನೀರು ಹಾಯಿಸಬೇಕೆಂಬ ರೈತರ ಆಸೆಗೆ ಮಣ್ಣೆರೆಚಿದಂತಾಗಿದೆ. ವಿದ್ಯುತ್ ಕಂಬಗಳು ಬಿದ್ದು ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಇಲ್ಲದಂತಾಗಿದೆ. ಇದರಿಂದ ನೀರು ಹಾಯಿಸಿ, ಬೆಳೆ ಉಳಿಸಿಕೊಳ್ಳುವ ಅವರ ಉಮೇದಿಗೆ ಹೊಡೆತ ಬಿದ್ದಿದೆ.

29 ಗ್ರಾಮಗಳಲ್ಲಿ ಸಮಸ್ಯೆ: ನವೀಲುತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ಬಿಡುಗಡೆಗೊಂಡ ಸುಮಾರು 1.20 ಲಕ್ಷ್ ಕ್ಯೂಸೆಕ್ ನೀರಿನಿಂದ ತಾಲೂಕಿನ ಮಾಗನೂರ, ಮಲ್ಲಾಪುರ, ರಂಕಲಕೊಪ್ಪ, ಚಿಕ್ಕತಡಸಿ, ಹಿರೇತಡಸಿ ಸೇರಿ 29 ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿದ್ದವು. ವಿದ್ಯುತ್ ಸಂಪರ್ಕ ಕಲ್ಪಿಸುವ ಕಂಬಗಳು, ವಿದ್ಯುತ್ ಟ್ರಾನ್ಸ್ ಾರ್ಮರ್‌ಗಳು ನೆಲಕಚ್ಚಿದ್ದವು. ಈಗ ರೈತರ ಬೋರ್‌ವೆಲ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹೆಸ್ಕಾಂ ಹರಸಾಹಸ ಪಡೆಬೇಕಾಗಿದೆ. ರೈತರು ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆದು ಒಂದು ಜಮೀನಿನಿಂದ ಮತ್ತೊಂದು ಜಮೀನಿಗೆ ಪೈಪ್‌ಲೈನ್ ಮುಖಾಂತರ ನೀರು ಹಾಯಿಸಲು ವ್ಯವಸ್ಥೆ ಮಾಡಿಕೊಂಡಿದ್ದಾರೆ. ಆದರೆ ನದಿ ಪ್ರವಾಹದಿಂದ ಜಮೀನಿನ ಪಂಪ್‌ಸೆಟ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಂಬಗಳು, ಟ್ರಾನ್‌ಸ್ಾರ್ಮರ್‌ಗಳು ಹಾಳಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಮಣ್ಣಿನಲ್ಲಿ ಹೂತಿವೆ ವಿದ್ಯುತ್‌ಕಂಬಗಳು: ನದಿ ನೀರಿನ ರಭಸಕ್ಕೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ಅಷ್ಟೇ ಅಲ್ಲದೆ ನದಿ ಪ್ರವಾಹ ಹೊತ್ತು ತಂದ ರೇವೆ ಮಣ್ಣಿನಲ್ಲಿ ಕೆಲ ವಿದ್ಯುತ್ ಕಂಬಗಳು ಹೂತು ಹೋಗಿವೆ. ಅವುಗಳನ್ನು ಪತ್ತೆ ಹಚ್ಚಲು ಹೆಸ್ಕಾಂ ಸಿಬ್ಬಂದಿ ಹೆಣಗಾಡಬೇಕಾದ ದುಸ್ಥಿತಿ ಎದುರಾಗಿದೆ. ಆದರೆ ನದಿ ಪಾತ್ರದ ತಗ್ಗು ಪ್ರದೇಶದ ಜಮೀನಿನಲ್ಲಿ ನೀರು ನಿಂತು ಅದರಲ್ಲಿಯೇ ಕಂಬಗಳು ಬಿದ್ದಿವೆ. ಅವುಗಳನ್ನು ಸರಿಪಡಿಸಲು ಕೆಸರಿನಲ್ಲಿ ಹೇಗೆ ಕೆಲಸ ಮಾಡುವುದು ಎಂಬುದು ಸಿಬ್ಬಂದಿಯನ್ನು ಚಿಂತೆಗೀಡುಮಾಡಿದೆ.

ಮುಳುಗಿದ ಪರಿವರ್ತಕಗಳು: ರೈತರ ಜಮಿನುಗಳಿಗೆ ವಿದ್ಯುತ್ ಪೋರೈಕೆ ಮಾಡಲು ಅನುಕೂಲವಾಗಲು ಜೋಡಿಸಲಾದ ಸುಮಾರು 451 ಪರಿವರ್ತಕಗಳು ನೀರಿನಲ್ಲಿ ಮುಳುಗಿ ಸಂಪೂರ್ಣ ಹಾಳಾಗಿವೆ.
ಅವುಗಳನ್ನು ಸರಿಪಡಿಸಲು ಇಲಾಖೆಗೆ ಸಮಯ ಬೇಕಾಗುತ್ತದೆ. ಆದರೆ ರೈತರಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ದೊರೆಯುತ್ತದೆಯೋ ಇಲ್ಲವೋ ಎಂಬ ಚಿಂತೆ ಕಾಡತೊಡಗಿದೆ. ಇಲಾಖೆಯ ಅಕಾರಿಗಳು ವಿದ್ಯುತ್ ಸಂಪರ್ಕ ಸರಿಪಡಿಸುವ ಕೆಲಸದಲ್ಲಿ ತೊಡಗಿದ್ದು, ಈಗಾಗಲೆ ಬಹುತೇಕ ಗ್ರಾಮಗಳಿಗೆ ಇಲಾಖೆ ವಿದ್ಯುತ್ ಸಂಪರ್ಕ ಕಲ್ಪಿಸಿದೆ. ಕೆಲ ರೈತರ ಪಂಪ್‌ಸೆಟ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ಸಂಬಂಧಪಟ್ಟ ಇಲಾಖೆಯ ಅಕಾರಿಗಳು ಕಾರ್ಯ ನಿರ್ವಹಿಸಿದ್ದು, ಇನ್ನುಳಿದ ಪಂಪ್‌ಸೆಟ್‌ಗಳಿಗೆ ಶೀಘ್ರ ಕ್ರಮ ಕೈಗೊಂಡು ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಹೆಸ್ಕಾಂಗೆ ಅಪಾರ ಹಾನಿ

ರಾಮದುರ್ಗ ತಾಲೂಕಿನಲಿ ್ಲನದಿ ಪ್ರವಾಹಕ್ಕೆ ಸಿಲುಕಿ ಸುಮಾರು 3200 ವಿದ್ಯುತ್ ಕಂಬಗಳು ನೆಲ ಕಚ್ಚಿದ್ದು, ಕೆಲವು ಮಣ್ಣಿನಲ್ಲಿ ಹೂತುಹೋಗಿವೆ. 451 ವಿದ್ಯುತ್ ಟ್ರಾನ್‌ಸ್ಾರ್ಮರ್‌ಗಳು ನೀರಿನಲ್ಲಿ ಹೂತು ಹೋಗಿ ನಾಶವಾಗಿವೆ. 360 ಕಿ.ಮೀ ನಷ್ಟು ವಿದ್ಯುತ್ ತಂತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ನದಿ ಪ್ರವಾಹದಿಂದ ಹೆಸ್ಕಾಂಗೆ ಸುಮಾರು 12.8 ಕೋಟಿ ರೂ.ಗೂ ಅಕ ಮೊತ್ತದ ನಷ್ಟ ಸಂಭವಿಸಿದೆ ಎಂದು ಇಲಾಖೆ ಅಂದಾಜಿಸಿದೆ.

ಪ್ರವಾಹದಿಂದ ಇಲಾಖೆಗೆ ಅಪಾರ ನಷ್ಟವಾಗಿದ್ದು, ರೈತರಿಗೂ ತೊಂದರೆಯಾಗಿದೆ. ಈಗಾಗಲೆ ಪ್ರವಾಹ ಪೀಡಿತ ಪ್ರದೇಶದ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಕೆಲ ಹಳ್ಳಿಗಳ ಪಂಪ್‌ಸೆಟ್‌ಗಳಿಗೂ ಸಂಪರ್ಕ ಕಲ್ಪಿಸಲಾಗಿದ್ದು, ಶೀಘ್ರ ಎಲ್ಲರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಯತ್ನಿಸುತ್ತೇವೆ.
|ರಾಮಕೃಷ್ಣ ಗುಣಗಾ ಹೆಸ್ಕಾಂ, ಎಇಇ ರಾಮದುರ್ಗ

ಮನೆ, ಆಸ್ತಿ, ಬೆಳೆಗಳು ಸಂಪೂರ್ಣ ನಷ್ಟವಾಗಿವೆ ರೈತರು ಬದುಕು ನಡೆಸುವುದು ಕಷ್ಟಕರವಾಗಿದೆ. ಇದ್ದ ಭೂಮಿಯಲ್ಲಿ ಬೆಳೆದ ಬೆಳೆ ಹಾಳಾಗಿ ಹೋಗಿವೆ. ಇನ್ನೂ ಮುಂದಾದರೂ ಭೂಮಿ ಹದ ಮಾಡಿ ಬಿತ್ತನೆ ಮಾಡಿ, ನೀರು ಹಾಯಿಸಬೇಕೆಂದರೆ ವಿದ್ಯುತ್ ಕಂಬಗಳು ಬಿದ್ದಿವೆ. ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ. ಪಂಪ್‌ಸೆಟ್‌ಗಳಿಗೂ ಶೀಘ್ರ ವಿದ್ಯುತ್ ಸಂಪರ್ಕ ಕಲ್ಪಿಸಿ ಸರಿಪಡಿಸಬೇಕು
|ಭೀಮಪ್ಪ ಬೈಲಪ್ಪ ಹರನಟ್ಟಿ ಚಿಕ್ಕತಡಸಿ ಗ್ರಾಮಸ್ಥ

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...