More

    ಸಮಸ್ಯೆ ನಿವಾರಣೆಗೆ ನಮ್ಮನ್ನೂ ಪರಿಗಣಿಸಿ

    ಬೆಳಗಾವಿ: ನಗರದಲ್ಲಿನ ಕುಡಿಯುವ ನೀರು ಸೇರಿದಂತೆ ಇನ್ನಿತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸ್ಥಳೀಯ ಮಟ್ಟದ ಮಾಜಿ ಜನಪ್ರತಿನಿಧಿಗಳನ್ನೂ ಗಣನೆಗೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ನಗರ ಸೇವಕರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

    ನಗರದಲ್ಲಿ ಸ್ಮಾರ್ಟ್‌ಸಿಟಿ, ಕುಡಿಯುವ ನೀರು, ರಸ್ತೆ, ಚರಂಡಿ ಕಾಮಗಾರಿ ಕೈಗೊಂಡಿದ್ದರಿಂದ ನಿವಾಸಿಗಳು ನಿತ್ಯ ವಿವಿಧ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ, ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಹಾಗಾಗಿ ಸಾರ್ವಜನಿಕರು ನಮ್ಮ ಬಳಿಗೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಸ್ಯೆಗಳ ನಿವಾರಣೆಗೆ ಪಾಲಿಕೆಯ ಮಾಜಿ ಸದಸ್ಯರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ವಿನಂತಿಸಿದರು. ಪಾಲಿಕೆಯು ನೀರಿನ ಕರ ನಿಗದಿಪಡಿಸುವ ಸಂದರ್ಭದಲ್ಲಿ ಮಾಜಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಬೇಕು. ಸ್ಮಾರ್ಟ್‌ಸಿಟಿ ಕಾಮಗಾರಿಗಳನ್ನು ಅಧಿಕಾರಿಗಳು ಮನಬಂದಂತೆ ಕೈಗೊಂಡಿದ್ದರಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಅವೈಜ್ಞಾನಿಕವಾಗಿ ಚರಂಡಿ, ರಸ್ತೆ ನಿರ್ಮಿಸುತ್ತಿದ್ದು, ಭವಿಷ್ಯದಲ್ಲಿ ಸಮಸ್ಯೆ ಉಂಟಾಗಲಿದೆ ಎಂದು ದೂರಿದರು. ಮಾಜಿ ನಗರ ಸೇವಕರ ಸಂಘದ ಅಧ್ಯಕ್ಷ ನಾಗೇಶ ಸಾತೇರಿ, ಮಾಜಿ ಶಾಸಕ ರಮೇಶ ಕುಡಚಿ, ಧನರಾಜ ಗವಳಿ, ದೀಪಕ ವೇಲಾ, ಸಂಜಯ ಪ್ರಭು, ಶಿವಾಜಿ ಸುಂಠಕರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts