ಅಪಪ್ರಚಾರಕರ ವಿರುದ್ಧ ಕ್ರಮ ಕೈಗೊಳ್ಳಿ

sor yuva brigade
ಧರ್ಮಸ್ಥಳ ಕ್ಷೇತ್ರದ ಘನತೆಗೆ ಧಕ್ಕೆ ತರುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಯುವ ಬ್ರಿಗೇಡ್ ಪದಾಧಿಕಾರಿಗಳು ಸೊರಬದಲ್ಲಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಮಹೇಶ್ ಖಾರ್ವಿ, ರಂಗನಾಥ ಮೊಗವೀರ್, ಲೋಕೇಶ್, ನಾಗರಾಜ ಆಚಾರ್ ಇತರರಿದ್ದರು.
Published on

ಸೊರಬ: ಧರ್ಮಸ್ಥಳ ಕ್ಷೇತ್ರದ ಘನತೆಗೆ ಧಕ್ಕೆ ತರುತ್ತಿರುವವರನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಯುವ ಬ್ರಿಗೇಡ್ ಪದಾಧಿಕಾರಿಗಳು ಬುಧವಾರ ತಹಸೀಲ್ದಾರ್ ಮಂಜುಳಾ ಹೆಗಡಾಳ್ ಅವರಿಗೆ ಮನವಿ ಸಲ್ಲಿಸಿದರು.

ಕೋಟ್ಯಂತರ ಭಕ್ತರ ಪಾಲಿನ ಧಾರ್ಮಿಕ ಕೇಂದ್ರವಾದ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಇತ್ತೀಚೆಗೆ ಹಿಂದು ವಿರೋಧಿ ಶಕ್ತಿಗಳು ಅಪಪ್ರಚಾರ ನಡೆಸುತ್ತಿವೆ. ಧರ್ಮಸ್ಥಳದ ಗೌರವ ಹಾಗೂ ಘನತೆಗೆ ಧಕ್ಕೆ ತರುತ್ತಿವೆ. ಹಿಂದುಗಳ ಭಾವನೆ, ಶಾಂತಿ, ಸೌಹಾರ್ದತೆಗೆ ಧಕ್ಕೆ ತರುತ್ತಿದ್ದಾರೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕಾರ್ಯಕ್ರಮ ರೂಪಿಸುವ ಮೂಲಕ ಲೋಕಕಲ್ಯಾಣ ಕಾರ್ಯ ಮಾಡುತ್ತಿರುವ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವುದನ್ನು ತಡೆಯಬೇಕು ಎಂದು ಯುವ ಬ್ರಿಗೇಡ್ ಜಿಲ್ಲಾ ಸಂಚಾಲಕ ಮಹೇಶ್ ಖಾರ್ವಿ ಆಗ್ರಹಿಸಿದರು.

ಧರ್ಮಸ್ಥಳ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಎಸ್‌ಐಟಿ ಮೂಲಕ ತನಿಖೆ ನಡೆಸುತ್ತಿದೆ. ಇದೇ ವೇಳೆ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕ್ಷೇತ್ರದ ಬಗ್ಗೆ ಅವಹೇಳನ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಹಾಗೂ ಸಮೀರ್ ಎಂಬುವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಒತ್ತಾಯಿಸಿದರು.

ಬ್ರಿಗೇಡ್‌ನ ತಾಲೂಕು ಸಂಚಾಲಕ ರಂಗನಾಥ ಮೊಗವೀರ್, ಹಿಂದು ಜಾಗರಣಾ ವೇದಿಕೆ ಜಿಲ್ಲಾ ಸಹ ಸಂಚಾಲಕ ಲೋಕೇಶ್, ತಾಲೂಕು ಸಂಚಾಲಕ ನಾಗರಾಜ ಆಚಾರ್, ಪ್ರಮುಖರಾದ ಪ್ರಶಾಂತ್, ಪುಟ್ಟರಾಜ, ವೀರೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net