ಸಿದ್ದಾಪುರ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಪದಾಧಿಕಾರಿಗಳು ಸೋಮವಾರ ಕಾರಟಗಿ ತಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗುಂಡೂರು ಗ್ರಾಪಂ ವ್ಯಾಪ್ತಿಯ ಗುಂಡೂರು, ಸಿಂಗನಾಳ ಬಡ ಕೂಲಿ ಕಾರ್ಮಿಕರಿಗೆ ನರೇಗಾದಡಿ ಕೂಲಿ ಕೆಲಸ ನೀಡಬೇಕು. ರೈತರಿಗೆ ಟ್ರ್ಯಾಕ್ಟರ್‌ಗಳ ಬಾಡಿಗೆಯನ್ನು ನೀಡಬೇಕು.
ಗುಂಡೂರು ಗ್ರಾಪಂ ಮೂರು ಜನ ಸದಸ್ಯರ ಮೇಲೆ ಭ್ರಷ್ಟಾಚಾರ ಮಾಡಿರುವ ಬಗ್ಗೆ ಸಲ್ಲಿಕೆಯಾದ ದೂರಿಗೆ ಶೀಘ್ರ ವರದಿ ನೀಡಬೇಕು. ಅಲ್ಲದೇ, ಅವರ ವಿರುದ್ಧ ತಾಪಂ ಇಒ ಸೂಕ್ತ ಕ್ರಮ ಕೈಗೊಳ್ಳಬೇಕು.
ಕಾಯಕ ಬಂಧುಗಳಿಗೆ ಪ್ರೋತ್ಸಾಹ ಧನ ನೀಡಬೇಕು. ಬಡ ಕುಟುಂಬಗಳಿಗೆ ನಿವೇಶನ ಹಾಗೂ ವಸತಿ ನೀಡಬೇಕು ಎಂದು ಆಗ್ರಹಿಸಿದ್ದರು.