More

    ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಕುಷ್ಟಗಿಯಲ್ಲಿ ಬೀದಿನಾಟಕ ಪ್ರದರ್ಶನ

    ಕುಷ್ಟಗಿ: ತಂಬಾಕು ಸೇವನೆ ಕ್ಯಾನ್ಸರ್, ಶ್ವಾಸಕೋಶ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗುತ್ತದೆ. ಇದರ ಸೇವನೆ ತ್ಯಜಿಸಿ ಆರೋಗ್ಯಪೂರ್ಣ ಜೀವನ ಶೈಲಿ ಮೈಗೂಡಿಸಿಕೊಳ್ಳಬೇಕು ಎಂದು ತಾಲೂಕು ಆಸ್ಪತ್ರೆಯ ಹಿರಿಯ ಆರೋಗ್ಯ ನಿರೀಕ್ಷಕ ಸೋಮಶೇಖರ ಮೇಟಿ ಹೇಳಿದರು.

    ಜಿಲ್ಲಾ ಆರೋಗ್ಯ ಇಲಾಖೆ, ತಂಬಾಕು ನಿಯಂತ್ರಣ ಘಟಕದ ಸಹಯೋಗದೊಂದಿಗೆ ಪಟ್ಟಣದ ಜನಜಾಗೃತಿ ಕಲಾರಂಗ ಸಂಸ್ಥೆ ಏರ್ಪಡಿಸಿದ್ದ ಬೀದಿನಾಟಕಕ್ಕೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ತಂಬಾಕು ಸೇವನೆಯಿಂದ ವಿಶ್ವದಾದ್ಯಂತ ಪ್ರತಿ ವರ್ಷ 60ಲಕ್ಷಕ್ಕಿಂತ ಹೆಚ್ಚು ಜನ ಸಾಯುತ್ತಿದ್ದಾರೆ. ಇದರ ಸೇವನೆ ಆರೋಗ್ಯಕ್ಕೆ ಮಾರಕವೆಂದು ಗೊತ್ತಿದ್ದರೂ ಬಹುತೇಕರು ದಾಸರಾಗುತ್ತಿದ್ದಾರೆ. ಕಾಯಿಲೆಗೆ ತುತ್ತಾಗುವುದರಿಂದ ಕುಟುಂಬದ ಅವಲಂಬಿತರು ಬೀದಿ ಪಾಲಾಗುತ್ತಾರೆ. ದುಶ್ಚಟಗಳಿಂದ ದೂರವಿದ್ದರೆ ಕುಟುಂಬದಲ್ಲಿ ನೆಮ್ಮದಿ ಇರುತ್ತದೆ ಎಂದರು.

    ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಶರಣಪ್ಪ ವಡಿಗೇರಿ ಮಾತನಾಡಿ, ಇತ್ತೀಚೆಗೆ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಸಿಗರೇಟ್ ಸೇವನೆಯಂತಹ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಮನೆಯಲ್ಲಿ ಹಿರಿಯರು ಮಕ್ಕಳ ಮೇಲೆ ನಿಗಾ ಇಟ್ಟು ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದರು. ಹಿರಿಯ ಆರೋಗ್ಯ ಸುರಕ್ಷಿತ ಅಧಿಕಾರಿ ಐಶ್ವರ್ಯ, ಕಲಾವಿದರಾದ ಶಿವಣ್ಣ ಪೂಜಾರ, ಚನ್ನಪ್ಪ ಬಾವಿಮನಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts