ಸರ್ಕಾರಿ ಕಚೇರಿ, ಆವರಣದಲ್ಲಿ ಧೂಮಪಾನ, ತಂಬಾಕು ಉತ್ಪನ್ನ ಸೇವನೆ ನಿಷೇಧ|TOBACCO PRODUCTS PROHIBITION

vidhanasoudha

ಬೆಂಗಳೂರು: ಸರ್ಕಾರಿ ಕಚೇರಿ ಹಾಗೂ ಕಚೇರಿ ಆವರಣಗಳಲ್ಲಿ ಧೂಮಪಾನ ಹಾಗೂ ಇತರ ತಂಬಾಕು ಉತ್ಪನ್ನ(TOBACCO PRODUCTS)ಗಳ ಸೇವನೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆ ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ. ಶಾಸನಾತ್ಮಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.

ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬಂದಿಗಳನ್ನು ರಕ್ಷಿಸುವ ಉದ್ದೇಶದಿಂದ ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಚೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸುವಂತೆ ನಿರ್ದೇಶನ ನೀಡಲಾಗಿದೆ.

ಈ ಸೂಚನೆಗಳನ್ನು ಉಲ್ಲಂಘಿಸಿ ಯಾವುದೇ ಸರ್ಕಾರಿ ನೌಕರ ಕಚೇರಿಯಲ್ಲಿ ಅಥವಾ ಕಚೇರಿಯ ಆವರಣದಲ್ಲಿ ಧೂಮಪಾನ ಮಾಡುವುದು ಮತ್ತು ಯಾವುದೇ ತಂಬಾಕು ಉತ್ಪನ್ನಗಳನ್ನು (ಗುಟ್ಕಾ, ಪಾನ್ ಮಸಾಲ, ಹೊಗೆಸೊಪ್ಪು ಇತ್ಯಾದಿ) ಸೇವಿಸುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

Share This Article

ಕೂದಲು ಬಿಳಿಯಾಗುವುದನ್ನು ತಡೆಯುವುದೇಗೆ ಎಂಬ ಚಿಂತೆಯೇ?; ಇಲ್ಲಿದೆ ಸಿಂಪಲ್​ ವಿಧಾನ | Health Tips

10 ವರ್ಷದಿಂದ 25 ರಿಂದ 30 ರವರೆಗೆ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಕಾಲಿಕ ಬಿಳಿ ಕೂದಲಿನಿಂದ…

ನೀವು ಈ ನಕ್ಷತ್ರದಲ್ಲಿ ಹುಟ್ಟಿದ್ದೀರಾ? ಹಾಗಾದ್ರೆ ಈ ಡಿಸೆಂಬರ್​ ತಿಂಗಳಲ್ಲಿ ನಿಮ್ಮ ಅದೃಷ್ಟ ಖುಲಾಯಿಸಲಿದೆ! Birth of Stars

Birth of Stars : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ…

ರಾಗಿಮುದ್ದೆಯಿಂದ ಇಷ್ಟೆಲ್ಲಾ ಪ್ರಯೋಜನ ಇದ್ಯಾ!; ತಿಳಿದ್ರೆ ನಿಮ್ಮ ದೈನಂದಿನ ಆಹಾರಕ್ರಮದಲ್ಲಿ ಮಿಸ್​ ಮಾಡೋದೆ ಇಲ್ಲ | Health Tips

ಚಳಿಗಾಲವು ಆರಂಭವಾಗಿದ್ದು ಭವಿಷ್ಯದಲ್ಲಿ ಈ ಬಾರಿ ಹಿಂದಿನ ವರ್ಷಗಳಿಗಿಂತ ತೀವ್ರ ಚಳಿ ಇರುತ್ತದೆ. ಇತ್ತೀಚಿನ ದಿನಗಳಲ್ಲಿ…