More

  ಇಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

  ಉಡುಪಿ: ಗ್ರಾಪಂ ಚುನಾವಣೆ ಪೂರ್ವಭಾವಿಯಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನ.29ರಂದು ಬೆಳಗ್ಗೆ 11ಕ್ಕೆ ಮಿಷನ್ ಕಾಂಪೌಂಡ್‌ನ ಮಿಷನ್ ಬಾಸೆಲ್ ಸಭಾಂಗಣದಲ್ಲಿ ಜರುಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಬ್ರಹ್ಮಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಪಕ್ಷದ ಮುಖಂಡರ ಆಂತರಿಕ ಸಭೆ, ಬಳಿಕ ಬ್ಲಾಕ್ ಅಧ್ಯಕ್ಷರು ಹಾಗೂ ವಿವಿಧ ಮುಂಚೂಣಿ ಘಟಕಗಳ ಸಭೆ ನಡೆಯಲಿದೆ ಎಂದರು. ಡಿ.ಕೆ ಶಿವಕುಮಾರ್ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾದ ಬಳಿಕ ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸುತ್ತಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬಿದೆ. ಕೋವಿಡ್ ಮಾರ್ಗಸೂಚಿಯಂತೆ ಸಮಾವೇಶ ಜರುಗಲಿದೆ. ಜಿಲ್ಲೆಯ ಎಲ್ಲ ಭಾಗದ ಸೀಮಿತ ಸಂಖ್ಯೆಯ ಕಾರ್ಯಕರ್ತರು ಸಮಾವೇಶ ಪಾಲ್ಗೊಳ್ಳಲಿದ್ದಾರೆ. ಗ್ರಾಪಂ ಚುನಾವಣೆಗೆ ಪಕ್ಷ ಸೂಕ್ತ ತಯಾರಿ ನಡೆಸುತ್ತಿದ್ದು, ವಾರ್ಡ್, ಹೋಬಳಿ ಮಟ್ಟದಲ್ಲಿ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

  ಸಮಾವೇಶದಲ್ಲಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ.ಪುಷ್ಪಲತಾ ಅಮರನಾಥ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಯು.ಆರ್ ಸಭಾಪತಿ, ಕಿಸಾನ್ ಕಾಂಗ್ರೆಸ್‌ನ ಸಚಿನ್ ಸೇರಿದಂತೆ ಇತರೆ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

  ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಣ್ಣಯ್ಯ ಶೇರಿಗಾರ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾರ್ಯದರ್ಶಿ ಪ್ರಶಾಂತ್ ಜತ್ತನ್ನ, ಕೀರ್ತಿ ಶೆಟ್ಟಿ, ಮಾಧ್ಯಮ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಸುದ್ದಿಗೋಷ್ಠಿಯಲ್ಲಿದ್ದರು.

  ಬಿಜೆಪಿ ಸರ್ಕಾರ ಕತ್ತೆ ಕಾಯುತ್ತಿತ್ತೆ ?:
  ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ಮಾಫಿಯದಿಂದ ಉಳಿದಿದ್ದು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಿದ್ದರಾಮಯ್ಯ ಅವರ ಸರ್ಕಾರ ಹೋಗಿ ಒಂದೂವರೆ ವರ್ಷ ಕಳೆದಿದೆ. ಡ್ರಗ್ಸ್ ಮಾಫಿಯ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಸರ್ಕಾರ ಒಂದೂವರೆ ವರ್ಷ ಕತ್ತೆ ಕಾಯುತ್ತಿತ್ತೆ ಎಂದು ಪ್ರಶ್ನಿಸಿದರು.

  See also  ಕಂಚಿನ ಕಂಠದ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts