ಉಪಸಮರ ಬಹಿರಂಗ ಪ್ರಚಾರಕ್ಕೆ ಇಂದು ತೆರೆ; ಮೂರು ಕ್ಷೇತ್ರಗಳಲ್ಲಿ ಕೊನೆ ಹಂತದ ಮತಬೇಟೆ

BJP Congress

ಬೆಂಗಳೂರು : ಕರ್ನಾಟಕದ ಮಿನಿ ಮಹಾಸಮರ, ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬೀಳಲಿದೆ. ಹೀಗಾಗಿ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಕೊನೇ ಹಂತದ ಮತಬೇಟೆಗಿಳಿದು ಅಖಾಡವನ್ನು ರಂಗೇರಿಸಿದ್ದಾರೆ.

ಹಾಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ, ಹಾಲಿ ಸಂಸದರಾದ ಬಸವರಾಜ ಬೊಮ್ಮಾಯಿ ಹಾಗೂ ತುಕಾರಾಂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರಿಂದ ರಾಮನಗರ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಹೀಗಾಗಿ ರಾಷ್ಟ್ರಮಟ್ಟದಲ್ಲೂ ಈ ಚುನಾವಣೆ ಗಮನ ಸೆಳೆದಿದೆ. ಸ್ಟಾರ್ ಪ್ರಚಾರಕರು, ಕ್ಷೇತ್ರಕ್ಕೆ ಸೇರದವರು ಸೋಮವಾರ ಸಂಜೆ ಹೊರ ಹೋಗಬೇಕಿದೆ. ಬಳಿಕ ಮನೆ ಮನೆ ಪ್ರಚಾರ ಶುರುವಾಗಲಿದೆ.

ಚುನಾವಣಾ ವಿಷಯ: ಅಬಕಾರಿ ಇಲಾಖೆ ಭ್ರಷ್ಟಾಚಾರ ಪ್ರಕರಣ ರಾಜ್ಯದಲ್ಲಷ್ಟೇ ಅಲ್ಲದೆ ನೆರೆಯ ರಾಜ್ಯಗಳ ಚುನಾವಣೆ ಪ್ರಚಾರದಲ್ಲೂ ದೊಡ್ಡ ಸದ್ದು ಮಾಡಿತು. ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಈ ವಿಷಯ ಪ್ರಸ್ತಾಪಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ಕಳೆದ ಒಂದೂವರೆ ತಿಂಗಳಿಂದ ರಾಜ್ಯದಲ್ಲಿ ಹೊತ್ತಿ ಉರಿಯುತ್ತಿದ್ದ ವಕ್ಪ್ ಆಸ್ತಿ ವಿವಾದ ಪ್ರತಿಪಕ್ಷ ಬಿಜೆಪಿ, ಜೆಡಿಎಸ್​ಗೆ ಪ್ರಬಲ ಅಸ್ತ್ರವಾಗಿದೆ. ಚನ್ನಪಟ್ಟಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕಣ್ಣೀರ ‘ಧಾರೆ’ ಹರಿಸಿ

ದರೆ, ಮಾಜಿ ಸಂಸದ ಡಿ.ಕೆ.ಸುರೇಶ್ ದೇವೇಗೌಡರ ಕಣ್ಣೀರನ್ನು ಅಪಹಾಸ್ಯ ಮಾಡಿದ್ದು ಚರ್ಚೆಗೀಡಾಗಿದೆ. ಚುನಾವಣಾ ಕಣದಲ್ಲಿ ಕದನ ಕೋಲಾಹಲವನ್ನೇ ಸೃಷ್ಟಿಸಿದೆ. ವಾಲ್ಮೀಕಿ ನಿಗಮದ ಆರ್ಥಿಕ ಅವ್ಯವಹಾರ ಪರಿಶಿಷ್ಟ ಪಂಗಡದ ಮತದಾರರು ಹೆಚ್ಚಿರುವ ಸಂಡೂರು ಕ್ಷೇತ್ರದಲ್ಲಿ ಬಿಜೆಪಿಗೆ ಪ್ರಬಲ ಅಸ್ತ್ರವಾಗಿದೆ. ಕಾಂಗ್ರೆಸ್ ಪರಿಶಿಷ್ಟ ವಿರೋಧಿ ಎಂಬುದನ್ನು ಬಿಂಬಿಸಲು ಒಳ ಮೀಸಲಾತಿ ವಿಚಾರವನ್ನೂ ಬಿಜೆಪಿ ನಾಯಕರು ಉಲ್ಲೇಖಿಸಿ ಮತಯುದ್ಧ ನಡೆಸಿದ್ದಾರೆ.

ಘಟಾನುಘಟಿಗಳ ಪ್ರಚಾರ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಎಚ್.ಡಿ. ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಸಂಸದ ಜಗದೀಶ ಶೆಟ್ಟರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಘಟಾನುಘಟಿ ದಂಡೇ ಚುನಾವಣಾ ಕ್ಷೇತ್ರದಲ್ಲಿದ್ದು ಅಬ್ಬರದ ಪ್ರಚಾರ ನಡೆಸಿ ಪರಸ್ಪರ ತೊಡೆ ತಟ್ಟಿದರು.

ಮತದಾರರ ವಿವರ: ಶಿಗ್ಗಾವಿಯಲ್ಲಿ 1,21,443 ಪುರುಷ, 1,16,076 ಮಹಿಳಾ ಹಾಗೂ 6 ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 2,37,525 ಮತದಾರರಿದ್ದಾರೆ. ಸಂಡೂರಿನಲ್ಲಿ 1,17,885 ಪುರುಷ, 1,18,435 ಮಹಿಳಾ ಮತ್ತು 29 ಲಿಂಗತ್ವ ಅಲ್ಪಸಂಖ್ಯಾತರು ಒಳಗೊಂಡಂತೆ 2,36,349 ಮತದಾರರಿದ್ದಾರೆ. ಚನ್ನಪಟ್ಟಣದಲ್ಲಿ 1,12,324 ಪುರುಷ, 1,29,617 ಮಹಿಳಾ, 8 ಲಿಂಗತ್ವ ಅಲ್ಪಸಂಖ್ಯಾತರು ಸೇರಿ 2,32,949 ಮತದಾರರಿದ್ದಾರೆ. ಮತದಾನ ನ.13 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ.

45 ಮಂದಿ ಕಣದಲ್ಲಿ: ಚನ್ನಪಟ್ಟಣದಲ್ಲಿ ಎನ್​ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್​ನಿಂದ ಸಿ.ಪಿ. ಯೋಗೇಶ್ವರ ಸೇರಿದಂತೆ 31 ಮಂದಿ ಕಣದಲ್ಲಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್​ನ ಇ. ಅನ್ನಪೂರ್ಣ, ಎನ್​ಡಿಎ ಅಭ್ಯರ್ಥಿ ಬಂಗಾರ ಹನುಮಂತ ಒಳಗೊಂಡಂತೆ ಆರು ಮಂದಿ ಸ್ಪರ್ಧಿಸಿದ್ದಾರೆ. ಶಿಗ್ಗಾವಿಯಲ್ಲಿ ಎನ್​ಡಿಎಯಿಂದ ಭರತ್ ಬೊಮ್ಮಾಯಿ, ಕಾಂಗ್ರೆಸ್​ನಿಂದ ಪಠಾಣ್ ಯಾಸೀರ್ ಅಹ್ಮದ್​ಖಾನ್ ಸೇರಿದಂತೆ ಎಂಟು ಮಂದಿ ಚುನಾವಣಾ ಕಣದಲ್ಲಿದ್ದಾರೆ.

ಸಣ್ಣ ಸಮುದಾಯ ಗುರಿ: ಮೂರೂ ಕ್ಷೇತ್ರಗಳಲ್ಲಿ ಬಲಾಢ್ಯ ಸಮುದಾಯಗಳು ನಿರ್ದಿಷ್ಟ ಪಕ್ಷವನ್ನು ಬೆಂಬಲಿಸುವ ಹಿನ್ನೆಲೆಯಲ್ಲಿ ಸಣ್ಣ ಮತ್ತು ಸೂಕ್ಷ್ಮ ಸಮುದಾಯಗಳನ್ನು ಬಿಜೆಪಿ ಈ ಬಾರಿ ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಹಿಂದೆ ಕೆ.ಆರ್.ಪೇಟೆ, ಶಿರಾ, ಮಸ್ಕಿ ಚುನಾವಣೆಯಲ್ಲಿ ನಡೆಸಿದ

ಕಾಂಗ್ರೆಸ್ ಪ್ರತ್ಯಸ್ತ್ರ: ಕಾಂಗ್ರೆಸ್ ಕೂಡ ಎನ್​ಡಿಎ ಮಿತ್ರ ಪಕ್ಷಗಳ ವಿರುದ್ಧ ಪ್ರತ್ಯಸ್ತ್ರ ಸಿದ್ಧಪಡಿಸಿದೆ. ಕೋವಿಡ್ ಹಗರಣದ ತನಿಖಾ ವರದಿ ಉಲ್ಲೇಖಿಸಿ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಟ್ಟಿ ಹಾಕುವ ಪ್ರಯತ್ನ ನಡೆಸಿತು. ಅದಕ್ಕೆ ಬಿಜೆಪಿ ಕೂಡ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿ ಕಾವನ್ನು ತಗ್ಗಿಸಿತು. ಒಟ್ಟಾರೆ ಕಾಂಗ್ರೆಸ್ ಮತ್ತು ಎನ್​ಡಿಎ ಅಭ್ಯರ್ಥಿಗಳ ನಡುವಿನ ಅಗ್ನಿದಿವ್ಯಕ್ಕೆ ಸಾಕ್ಷಿಯಾಯಿತು.

ನನ್ನ ಪ್ರಕಾರ ಮೆಗಾ ಹರಾಜಿನಲ್ಲಿ ಈತ RCB ಪಾಲಿಗೆ ದುಬಾರಿಯಾಗಬಹುದು; ABD ಹೇಳಿದ ಆಟಗಾರ ಯಾರು ಗೊತ್ತಾ?

Champions Trophy ವಿಚಾರವಾಗಿ ಪಟ್ಟು ಸಡಿಲಿಸದ ಭಾರತ; BCCI ವಿರುದ್ಧ Court​ ಮೆಟ್ಟಿಲೇರಲು ಸಜ್ಜಾದ ಪಾಕಿಸ್ತಾನ

Share This Article

2025ರಲ್ಲಿ ಈ 3 ರಾಶಿಯವರಿಗೆ ರಾಜಯೋಗ!? ಅನೇಕ ರೀತಿಯಲ್ಲಿ ಹಣದ ಹರಿವು, ಐಷಾರಾಮಿ ಜೀವನ | Royal Life

Royal Life : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ಜೇನುತುಪ್ಪ ಜತೆ ಹುರಿದ ಶುಂಠಿ ತಿಂದರೆ ಗಂಟಲು ನೋವು ಮಾಯಾ! ಹೀಗಿವೆ ಪ್ರಯೋಜನಗಳು

ಬೆಂಗಳೂರು: ಜೇನುತುಪ್ಪ ಮತ್ತು ಶುಂಠಿ ಆರೋಗ್ಯಕ್ಕೆ ತುಂಬಾ ಪ್ರಯೋಜನ ಎಂಬ ವಿಷಯ ಬಹುತೇಕರಿಗೆ ತಿಳಿದಿದೆ. ಈ…

ಸಾಮಾನ್ಯವಾಗಿ ಮಾಡುವ ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ ಎಚ್ಚರ! Relationship Tips

Relationship Tips : ಪರಸ್ಪರ ತಿಳುವಳಿಕೆಯುಳ್ಳ ಉತ್ತಮ ಲೈಂಗಿಕ ಜೀವನವು ಸಂತೋಷದ ದಾಂಪತ್ಯಕ್ಕೆ ಕಾರಣವಾಗುತ್ತದೆ. ಲೈಂಗಿಕ…