ಇಂದು ಬಿಬಿಎಂಪಿ ಬಜೆಟ್

Latest News

ಈ ಅರಿಭಯಂಕರ ವೇಗಿ ಭಾರತದ ಮಾಲ್ಕಂ ಮಾರ್ಷಲ್​ ಎಂದು ಸುನಿಲ್​ ಗಾವಸ್ಕರ್​ ಹೊಗಳಿದ್ದು ಯಾರನ್ನ?

ನವದೆಹಲಿ: ಭಾರತ ಕ್ರಿಕೆಟ್​ ತಂಡದಲ್ಲಿ ಹಿಂದೊಮ್ಮೆ ವೇಗಿಗಳನ್ನು ಚೆಂಡಿನ ಹೊಳಪನ್ನು ತೆಗೆದುಹಾಕಲು ಬಳಸುತ್ತಿದ್ದರು ಎಂದು ಹೇಳಲಾಗುತ್ತದೆ. ಆದರೆ ಇಂಥ ಒಂದು ನಂಬಿಕೆಯನ್ನು ನೀಗಿಸಿದವರು...

ಕೃಷಿ ಮಾರುಕಟ್ಟೆಯಲ್ಲಿ ರೈತನ ತರಕಾರಿ ಮೇಲೆ ಕಾರು ಚಲಾಯಿಸಿ ದರ್ಪ ತೋರಿದ ಕೃಷಿ ಅಧಿಕಾರಿ

ಹಾಪುರ್ (ಉತ್ತರ ಪ್ರದೇಶ): ಹಿರಿಯ ಕೃಷಿ ಅಧಿಕಾರಿಯೊಬ್ಬರು ರೈತನ ತರಕಾರಿ ಮೇಲೆ ಕಾರು ಚಲಾಯಿಸಿ ತರಕಾರಿ ನಾಶ ಮಾಡಿದ ಘಟನೆ ಹಾಪುರ್​ ಜಿಲ್ಲೆಯ...

ಸಂಸದ, ಮಾಜಿ ಕ್ರಿಕೆಟಿಗ ಗೌತಮ್​ ಗಂಭೀರ್​ ಕಾಣೆಯಾಗಿದ್ದಾರೆ ಹುಡುಕಿಕೊಡಿ: ದೆಹಲಿಯಲ್ಲಿ ಪತ್ತೆಯಾದ ನಾಪತ್ತೆ ಪೋಸ್ಟರ್​!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಲ್ಬಣಿಸಿರುವ ವಾಯುಮಾಲಿನ್ಯ ಪರಿಸ್ಥಿತಿಯನ್ನು ಕುರಿತು ಚರ್ಚಿಸಲು ಸಂಸದೀಯ ಸಮಿತಿ ಕರೆದಿದ್ದ ಸಭೆಗೆ ಗೈರುಹಾಜರಾದ ಪೂರ್ವ ದೆಹಲಿಯ ಬಿಜೆಪಿ...

ಮೂಡಬಿದರೆಯ ತೋಡಾರು ಗ್ರಾಮದ ಅಯ್ಯಪ್ಪ ಭಕ್ತರೊಂದಿಗೆ ಹೆಜ್ಜೆ ಹಾಕುತ್ತಿರುವ ಶ್ವಾನ

ಚಿಕ್ಕಮಗಳೂರು: ತಿರುಪತಿಯಿಂದ ಶಬರಿಮಲೆಗೆ ಪಾದಯಾತ್ರೆ ಮೂಲಕ ಹೊರಟಿರುವ ಭಕ್ತರ ತಂಡದ ಜತೆ ಶ್ವಾನವೊಂದು ತೆರಳಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ...

ವಿಆರ್​ಎಲ್​ ಪ್ರಾಯೋಜಕತ್ವದ ಹಾಫ್​ ಮ್ಯಾರಥಾನ್​ಗೆ ನಟಿ ಸುಮನ್ ನಗರ್‍ಕರ್ ಚಾಲನೆ: ಗಿನ್ನೆಸ್​ ದಾಖಲೆ ಬರೆದ ಓಜಲ್ ನಲವಡಿಗೆ ಸನ್ಮಾನ

ಹುಬ್ಬಳ್ಳಿ: ವಿಆರ್​ಎಲ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಹಾಫ್ ಮ್ಯಾರಥಾನ್​ಗೆ ಖ್ಯಾತ ನಟಿ ಸುಮನ್ ನಗರ್‍ಕರ್ ಅವರು ಫ್ಲ್ಯಾಗ್ ಆಫ್ ಮಾಡುವ ಮೂಲಕ ಭಾನುವಾರ ಚಾಲನೆ...

ಬೆಂಗಳೂರು: ಬಿಬಿಎಂಪಿಯಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆಡಳಿತದ ನಾಲ್ಕನೇ ಬಜೆಟ್ ಸೋಮವಾರ (ಫೆ.18) ಮಂಡನೆಯಾಗಲಿದೆ. ಈ ಬಾರಿ ಮಹಿಳೆಯರ ಅಭಿವೃದ್ಧಿ, ಆರೋಗ್ಯ, ಶಿಕ್ಷಣ ಮತ್ತು ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆಯಿದೆ. ಸಿದ್ಧಗಂಗಾ ಶ್ರೀಗಳ ಹೆಸರಿನಲ್ಲಿ ಶಾಶ್ವತ ಯೋಜನೆ ಜಾರಿಗೊಳಿಸುವ ಸಾಧ್ಯತೆಯಿದೆ.

ರಾಜ್ಯ ಸರ್ಕಾರದ ಅನುದಾನ ನೆಚ್ಚಿಕೊಂಡು ಸಿದ್ಧಪಡಿಸಲಾಗಿರುವ ಬಜೆಟ್ ಮಂಡಿಡಲು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಸಿದ್ಧತೆ ಮಾಡಿಕೊಂಡಿದೆ. ಬಜೆಟ್ ಗಾತ್ರ 11 ಸಾವಿರ ಕೋಟಿ ರೂ. ದಾಟುವ ನಿರೀಕ್ಷೆ ಹೊಂದಲಾಗಿದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಮಂಡಿಸಲಾಗುತ್ತಿರುವ ಬಜೆಟ್​ನಲ್ಲಿ ಮಧ್ಯಮ ವರ್ಗದವರಿಗೆ ಅನುಕೂಲವಾಗುವ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ.

ಬಜೆಟ್ ಅಂತಿಮ: ಬಿಬಿಎಂಪಿಯ ಎಲ್ಲ ವಿಭಾಗಗಳೊಂದಿಗೆ ಚರ್ಚೆ ನಡೆಸಿರುವ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ, ಬಜೆಟ್​ನಲ್ಲಿ ಯಾವೆಲ್ಲ ಯೋಜನೆ ಘೋಷಿಸಬೇಕು ಎಂಬುದನ್ನು ಅಂತಿಮಗೊಳಿಸಿದ್ದಾರೆ. ಭಾನುವಾರ ಆಯವ್ಯಯ ಪುಸ್ತಕ ಮುದ್ರಿಸಿದ್ದು ಸೋಮವಾರ ಬೆಳಗ್ಗೆ 11.30ಕ್ಕೆ ಕೌನ್ಸಿಲ್ ಸಭಾಂಗಣದಲ್ಲಿ ಮಂಡಿಸಲಿದ್ದಾರೆ.

ಆರೋಗ್ಯಕ್ಕೆ ಒತ್ತು: ಈ ಬಾರಿ ಪ್ರಮುಖವಾಗಿ ಆರೋಗ್ಯ ಕ್ಷೇತ್ರಕ್ಕೆ ಬಿಬಿಎಂಪಿ ಬಜೆಟ್​ನಲ್ಲಿ ಒತ್ತು ನೀಡಲಾಗುತ್ತಿದೆ. ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಮಕ್ಕಳಿಗೆ ಅನುದಾನ ನೀಡುವ ಯೋಜನೆ ವಿಸ್ತರಿಸಲಾಗುತ್ತದೆ.

ಬಿಬಿಎಂಪಿ ಆಸ್ಪತ್ರೆಗಳಿಗೆ ಅತ್ಯಾಧುನಿಕ ಲೈಫ್ ಸಪೋರ್ಟರ್ ಆಂಬುಲೆನ್ಸ್ ಖರೀದಿಗೆ ಅನುದಾನ ನಿಗದಿ, ಎಲ್ಲ 198 ವಾರ್ಡ್​ಗಳಲ್ಲಿ ಡಯಾಲಿಸಿಸ್ ಕೇಂದ್ರ, ಹೊಸ ರೆಫರಲ್ ಆಸ್ಪತ್ರೆಗಳ ನಿರ್ವಣಕ್ಕೆ ಅನುದಾನ ನಿಗದಿ ಮಾಡಿ ಬಜೆಟ್​ನಲ್ಲಿ ಘೋಷಿಸುವ ಸಾಧ್ಯತೆಗಳಿವೆ.

ಒಂಟಿಮನೆ ಯೋಜನೆ ಅನುದಾನ ಹೆಚ್ಚಳ

ಕೆಲ ವರ್ಷಗಳಿಂದ ಘೋಷಣೆಗಷ್ಟೇ ಸೀಮಿತವಾಗಿ ಅನುಷ್ಠಾನಗೊಳ್ಳದ ಕೆಲ ಕಲ್ಯಾಣ ಕಾರ್ಯಕ್ರಮಗಳನ್ನು ಈ ಬಾರಿ ಕೈಬಿಡುವ ಸೂಚನೆಯಿದೆ. ಹಾಲು, ಪೇಪರ್ ಹಾಕುವವರಿಗೆ ಪ್ರತಿ ವಾರ್ಡ್​ನಲ್ಲಿ 50 ಸೈಕಲ್ ವಿತರಣೆ ಮಾಡುವ ಯೋಜನೆಗೆ ಕೊಕ್ ನೀಡಲಾಗುತ್ತಿದೆ. ಒಂಟಿ ಮನೆ ಯೋಜನೆ ಅನುದಾನ ಹೆಚ್ಚಳ, ಪ್ರತಿ ವಾರ್ಡ್​ನಲ್ಲಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್ ವಿತರಣೆ ಕುರಿತು ಘೋಷಿಸಲು ಸಿದ್ಧತೆ ನಡೆಸಲಾಗಿದೆ.

11 ಸಾವಿರ ಕೋಟಿ ರೂ. ಬಜೆಟ್?

ಬಿಬಿಎಂಪಿ ಇತಿಹಾಸದಲ್ಲಿಯೇ ಈ ಬಾರಿ ಅತಿ ಹೆಚ್ಚು ಮೊತ್ತದ ಬಜೆಟ್ ಮಂಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಆಯುಕ್ತರು 8,300 ಕೋಟಿ ರೂ. ಮೊತ್ತದ ಕರಡು ಬಜೆಟ್​ನ್ನು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಗೆ ಸಲ್ಲಿಸಿದ್ದರು. ಅದಕ್ಕೆ ಇನ್ನಷ್ಟು ಯೋಜನೆಗಳನ್ನು ಸೇರಿಸಿರುವ ಸ್ಥಾಯಿ ಸಮಿತಿ 2019-20ನೇ ಸಾಲಿಗೆ 11 ಸಾವಿರ ಕೋಟಿ ರೂ.ಗೂ ಹೆಚ್ಚಿನ ಮೊತ್ತದ ಬಜೆಟ್ ರೂಪಿಸಿದೆ ಎಂದು ಹೇಳಲಾಗುತ್ತಿದೆ. ವೈಟ್​ಟಾಪಿಂಗ್, ಟೆಂಡರ್​ಶ್ಯೂರ್ ರಸ್ತೆಗಳ ನಿರ್ವಣ, ಪ್ರಮುಖ ಜಂಕ್ಷನ್​ಗಳಲ್ಲಿ ಗ್ರೇಡ್ ಸಪರೇಟರ್​ಗಳ ನಿರ್ಮಾಣ ಸೇರಿ ಇನ್ನಿತರ ದೊಡ್ಡ ಯೋಜನೆಗಳನ್ನು ಘೋಷಿಸಲು ಹೇಮಲತಾ ಗೋಪಾಲಯ್ಯ ತಯಾರಿ ನಡೆಸಿದ್ದಾರೆ.

ಈ ಬಾರಿ ಮಹಿಳೆಯರಿಗೆ ಹೆಚ್ಚಿನ ಕೊಡುಗೆ ಸಾಧ್ಯತೆ

ಈ ಬಾರಿ ಮೇಯರ್ ಹಾಗೂ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧಕ್ಷರು ಮಹಿಳೆಯರಾಗಿರುವ ಕಾರಣ ಬಜೆಟ್​ನಲ್ಲಿ ಮಹಿಳೆಯರಿಗೆ ಹೆಚ್ಚಿನ ಕೊಡುಗೆ ನೀಡುವ ನಿರೀಕ್ಷೆಯಿದೆ. ಪ್ರತಿ ವಾರ್ಡ್​ನಲ್ಲಿ 20 ಮಹಿಳೆಯರಿಗೆ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ, ಮಹಿಳಾ ಉದ್ಯಮಿಗಳಿಗೆ ಕಿರು ಸಾಲ ನೀಡುವ ಬಗ್ಗೆ ಬಜೆಟ್​ನಲ್ಲಿ ಉಲ್ಲೇಖಿಸುವ ನಿರೀಕ್ಷೆಯಿದೆ.

ಕಳೆದ ಸಾಲಿನ ಬಜೆಟ್ ಅನುಷ್ಠಾನ ಶೇ.55?

ವಿಧಾನಸಭಾ ಚುನಾವಣೆ, ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ನಿರ್ಲಕ್ಷ್ಯದಿಂದಾಗಿ 2018-19ನೇ ಸಾಲಿನ ಬಜೆಟ್ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡಿಲ್ಲ. ಮೂಲಗಳ ಪ್ರಕಾರ 2018-19ನೇ ಸಾಲಿನ ಬಜೆಟ್ ಶೇ. 55 ಮಾತ್ರ ಅನುಷ್ಠಾನಗೊಂಡಿದೆ ಎಂದು ಹೇಳಲಾಗುತ್ತಿದೆ. ಉಳಿದ ಯೋಜನೆಗಳ ಅನುಷ್ಠಾನವನ್ನು 2019-20ಕ್ಕೆ ನಿಗದಿ ಮಾಡಲಾಗಿದೆ.

ಸಿದ್ಧಗಂಗಾ ಶ್ರೀಗಳಿಗೆ ಗೌರವ ಸಮರ್ಪಣೆ

ಇತ್ತೀಚೆಗೆ ಶಿವೈಕ್ಯರಾದ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರಿನಲ್ಲಿ ಅನ್ನ ಅಥವಾ ಶಿಕ್ಷಣ ದಾಸೋಹಕ್ಕೆ ಸಂಬಂಧಿಸಿದ ಯೋಜನೆಯನ್ನು ಬಜೆಟ್​ನಲ್ಲಿ ಘೋಷಿಸುವ ನಿರೀಕ್ಷೆ ಹೊಂದಲಾಗಿದೆ. ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಶಿಕ್ಷಣ ಸಂಸ್ಥೆಯೊಂದಕ್ಕೆ ಸಿದ್ಧಗಂಗಾ ಶ್ರೀಗಳ ಹೆಸರಿನಲ್ಲಿ ಅನುದಾನ ನೀಡುವ ಬಗ್ಗೆ ಘೋಷಿಸಲಾಗುತ್ತದೆ. ಬಿದ್ದು ಹೋಗುವ ಸ್ಥಿತಿಗೆ ತಲುಪಿರುವ ಶಾಲಾ ಕಟ್ಟಡಗಳನ್ನು ದುರಸ್ತಿ ಮಾಡಲು ಈ ಬಾರಿ ಶಿಕ್ಷಣ ವಿಭಾಗಕ್ಕೆ ಈ ಬಾರಿ ಹೆಚ್ಚುವರಿ ಅನುದಾನ ಘೋಷಿಸುವ ಸಾಧ್ಯತೆಗಳಿವೆ. ಮೈಕ್ರೋಸಾಫ್ಟ್ ಸಹಯೋಗದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ರೋಶಿನಿ ಯೋಜನೆಗೆ ಪೂರಕವಾಗಿ ಶಾಲೆಗಳಲ್ಲಿ ವ್ಯವಸ್ಥೆ ಕಲ್ಪಿಸಲು ತಾಂತ್ರಿಕ ಅನುದಾನ ಮೀಸಲಿಡುವ ನಿರೀಕ್ಷೆಯಿದೆ.

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....