ಅಂತಾರಾಷ್ಟ್ರೀಯ ಯೋಗ ದಿನ: ದೇಶಾದ್ಯಂತ ಗಣ್ಯರ, ಯೋಧರ ಯೋಗ ಪ್ರದರ್ಶನದ ಝಲಕ್​ ಇಲ್ಲಿದೆ…

Yoga Day 2
Published on

ನವದೆಹಲಿ: ಇಂದು ವಿಶ್ವವು 9ನೇ ಆವೃತ್ತಿಯ ಅಂತಾರಾಷ್ಟ್ರೀಯ ಯೋಗ ದಿನದ ಸಂಭ್ರಮದಲ್ಲಿದೆ. ಪ್ರಧಾನಿ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದು, ಭಾರತೀಯ ಕಾಲಮಾನ ಪ್ರಕಾರ ಇಂದು ಸಂಜೆ 5.30ಕ್ಕೆ ನ್ಯೂಯಾರ್ಕ್​ನಲ್ಲಿರುವ ವಿಶ್ವಸಂಸ್ಥೆಯ ಮುಖ್ಯ ಕಚೇರಿಯಲ್ಲಿ ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ದೇಶಾದ್ಯಂತ ಯೋಗ ದಿನಾಚರಣೆ ಆರಂಭವಾಗಿದ್ದು, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಮತ್ತು ಯೋಧರು ಮತ್ತು ಸಾರ್ವಜನಿಕರು ಯೋಗಾಸನಗಳನ್ನು ಪ್ರದರ್ಶಿಸುವ ಮೂಲಕ ಯೋಗ ದಿನದ ಸಂಭ್ರಮದಲ್ಲಿ ಭಾಗಿಯಾಗಿದ್ದು, ಅದರ ಝಲಕ್​ ಈ ಕೆಳಕಂಡಂತಿದೆ.

ಕೇರಳದ ಕೊಚ್ಚಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್. ಹರಿ ಕುಮಾರ್ ಅವರೊಂದಿಗೆ ಐಎನ್‌ಎಸ್ ವಿಕ್ರಾಂತ್ ಹಡಗಿನಲ್ಲಿ ಯೋಗ ಪ್ರದರ್ಶನ ಮಾಡಿದರು.

ಕೇಂದ್ರ ಸಚಿವ ಅನುರಾಗ್​ ಠಾಕೂರ್​ ಅವರು ಹಿಮಾಚಲ ಪ್ರದೇಶದ ಹಮೀರ್​ಪುರ್​ನಲ್ಲಿ ಯೋಗ ಪ್ರದರ್ಶಿಸಿದರು.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಉತ್ತರ ಪ್ರದೇಶದ ನೋಯ್ಡಾದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗದಿನವನ್ನು ಆಚರಿಸಿದರು.

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಮುಂಬೈನಲ್ಲಿ ಯೋಗ ಪ್ರದರ್ಶನ ನೀಡಿದರು.

ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು 9ನೇ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ಒಡಿಶಾದ ಬಾಲಸೋರ್‌ನಲ್ಲಿ ಯೋಗ ಪ್ರದರ್ಶಿಸಿದರು.

ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು 9ನೇ ಅಂತಾರಾಷ್ಟ್ರೀಯ ಯೋಗದಿನ ಹಿನ್ನೆಲೆಯಲ್ಲಿ ಯೋಗ ಪ್ರದರ್ಶಿಸಿದರು.

ಭಾರತೀಯ ಸೇನೆಯ ಯೋಧರು ರಾಜಸ್ಥಾನದಲ್ಲಿ ಯೋಗ ಪ್ರದರ್ಶಿಸಿದರು.

ಅಂತರಾಷ್ಟ್ರೀಯ ಯೋಗದಿನ ಹಿನ್ನೆಲೆಯಲ್ಲಿ ಭಾರತೀಯ ಯೋಧರು ಲಡಾಖ್​ನ ಪ್ಯಾಂಗೊಂಗ್ ತ್ಸೋದಲ್ಲಿ ಯೋಗ ಪ್ರದರ್ಶನ ಮಾಡಿದರು.

ಭಾರತೀಯ ಯೋಧರು ಸಿಕ್ಕಿಂನಲ್ಲಿ ಯೋಗ ಪ್ರದರ್ಶನ ಮಾಡಿದರು.

ಉಪರಾಷ್ಟ್ರಪತಿ ಜಗದೀಪ್ ಧನಕರ್​ ಮತ್ತು ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಜಬಲ್ಪುರದಲ್ಲಿ ಯೋಗ ಪ್ರದರ್ಶಿಸಿದರು.

ಉತ್ತರಾಖಂಡದ ಹರಿದ್ವಾರದಲ್ಲಿ ಯೋಗ ಗುರು ಬಾಬಾ ರಾಮದೇವ್ ಮತ್ತು ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಯೋಗ ಪ್ರದರ್ಶನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net