More

    5 ಮತ್ತು 8ನೇ ತರಗತಿ ಬೋರ್ಡ್​ ಎಕ್ಸಾಂ; ಹೈಕೋರ್ಟ್​ನಲ್ಲಿ ಇಂದೇನಾಯ್ತು?

    ಬೆಂಗಳೂರು: ಐದು ಮತ್ತು ಎಂಟನೇ ತರಗತಿ ಬೋರ್ಡ್ ಎಕ್ಸಾಂ ವಿಚಾರವಾಗಿ ಇಂದು ಹೈಕೋರ್ಟ್​ನಲ್ಲಿ ವಿಚಾರಣೆ ನಡೆದಿದ್ದು, ಪರೀಕ್ಷೆಯ ವಿಷಯ ಮತ್ತೊಂದು ಮಜಲಿಗೆ ತಲುಪಿದೆ. ಇಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠದ ಸರ್ಕಾರಕ್ಕೆ ಮಹತ್ವದ ಸೂಚನೆಯೊಂದನ್ನು ನೀಡಿದೆ.

    ಐದು ಮತ್ತು ಎಂಟನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ ಏಕಸದಸ್ಯ ಪೀಠ ಮಾ.10ರಂದು ಆದೇಶ ನೀಡಿತ್ತು. ಆದರೆ ಅದನ್ನು ಪ್ರಶ್ನಿಸಿ ಸರ್ಕಾರ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿತ್ತು. ಆದರೆ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡದ ವಿಭಾಗೀಯ ಪೀಠ ಅರ್ಜಿ ವಿಚಾರಣೆಯನ್ನು ಮಾ. 14ಕ್ಕೆ ಮುಂದೂಡಿತ್ತು. ಈ ಹಿನ್ನೆಲೆಯಲ್ಲಿ ಇಂದು ವಿಭಾಗೀಯ ಪೀಠದಲ್ಲಿ ಈ ವಿಚಾರ ವಿಚಾರಣೆಗೆ ಬಂದಿತ್ತು.

    ಇದನ್ನೂ ಓದಿ: ದೇವಸ್ಥಾನದ ರಥದ ಮುಕ್ತಿಬಾವುಟಕ್ಕೆ ಭಾರಿ ಬೇಡಿಕೆ; ಊಹೆಗೂ ಮೀರಿದ ಭರ್ಜರಿ ಮೊತ್ತಕ್ಕೆ ಹರಾಜು

    ನ್ಯಾ.ನರೇಂದರ್ ಹಾಗೂ ನ್ಯಾ. ಅಶೋಕ್ ಕಿರಣಗಿ ಅವರಿದ್ದ ವಿಭಾಗೀಯ ಪೀಠ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದು, ಅಫಿಡವಿಟ್​ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಬೋರ್ಡ್ ಎಕ್ಸಾಂ ಸಿಲಬಸ್ ಏನಾಗಿರುತ್ತದೆ? ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಯಾವ ರೀತಿ ಇರುತ್ತದೆ? ಪರೀಕ್ಷೆಯಲ್ಲಿ ಪಾಸ್ ಅಥವಾ ಫೇಲ್ ಮಾನದಂಡಗಳೇನು? ಎಂಬ ಅಂಶಗಳ‌ನ್ನು ಒಳಗೊಂಡಂತೆ ಪ್ರಮಾಣಪತ್ರ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts