ಬಡ ಮಹಿಳೆಗೆ ನ್ಯಾಯ ಒದಗಿಸಲು ಆಗ್ರಹ

ಯಾದಗಿರಿ: ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಸರ್ಕಾರ ನಿರ್ಗತಿಕ ಮಹಿಳೆಗೆ ಇಂದಿರಾ ಆವಾಸ್ ಯೋಜನೆಯಡಿ ಮಂಜೂರು ಮಾಡಿದ ಮನೆಯನ್ನು ಅಕ್ರಮವಾಗಿ ವಶಪಡಿಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಟೋಕರಿ ಕೋಲಿ ಸಮಾಜದಿಂದ ಇಲ್ಲಿನ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್ ಅವರಿಗೆ ಮನವಿ ಸಲ್ಲಿಸಲಾಯಿತು.

ಅನಪುರ ಗ್ರಾಮದ ನಿವಾಸಿ ಕವಿತಾ ಎಂಬುವವರು ಹೈದರಾಬಾದ್ಗೆ ಗುಳೆ ಹೋಗಿದ್ದ ಸಂದರ್ಭದಲ್ಲಿ ಗ್ರಾಮದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಆಕೆಗೆ ಸರ್ಕಾರದಿಂದ ಮಂಜೂರಾಗಿದ್ದ ಮನೆ ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ವಾಸವಾಗಿದ್ದು, ಕೇಳಲು ಹೋದ ಮಹಿಳೆಗೆ ಬೆದರಿಕೆ ಹಾಕುತಿದ್ದಾರೆ ಎಂದು ಆರೋಪಿಸಿದರು.

ಅನಪುರ ಗ್ರಾಮದ ಸರ್ವೆ ನಂ. 478 ಕ್ಷೇತ್ರ: 3 ಎಕರೆ 10 ಗುಂಟೆ ಜಮೀನಿನ ಪಹಣಿಯಲ್ಲಿ ಅಕ್ರಮವಾಗಿ ಕವಿತಾಗೆ ಗೊತ್ತಿಲ್ಲದಂತೆ ಹೆಬ್ಬೆಟ್ಟು ಒತ್ತಿಸಿಕೊಳ್ಳಲಾಗಿದೆ. ಕೂಡಲೇ ಈ ಬಗ್ಗೆ ಗಮನ ಹರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಬಡ ಮಹಿಳೆಗೆ ನ್ಯಾಯ ಒದಗಿಸಿ ಕೊಡುವಂತೆ ಮನವಿ ಮಾಡಿದರು. ಗ್ರಾಮದ ಶ್ರೀನಿವಾಸ, ರೋಹಿತ್ ಸೇರಿ ಇನ್ನಿತರರಿದ್ದರು.

Leave a Reply

Your email address will not be published. Required fields are marked *