18.1 C
Bangalore
Saturday, December 7, 2019

15ರಿಂದ ಬೆಳ್ಮಣ್‌ನಲ್ಲಿ ಟೋಲ್‌ಗೇಟ್?

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

– ಹರಿಪ್ರಸಾದ್ ನಂದಳಿಕೆ, ಬೆಳ್ಮಣ್
ಸಾರ್ವಜನಿಕ ಪ್ರತಿಭಟನೆಯಿಂದ ಹಿಂದೆ ಸರಿಸಿದ್ದ ಬೆಳ್ಮಣ್ ಟೋಲ್‌ಗೇಟ್ ಪ್ರಕ್ರಿಯೆಗೆ ಮತ್ತೆ ಚಾಲನೆ ದೊರಕಿದೆ. ಅಕ್ಟೋಬರ್ 15ರಿಂದ ರಾಜ್ಯ ಹೆದ್ದಾರಿ 1ರಲ್ಲಿ ಪಡುಬಿದ್ರಿಯಿಂದ ಕಾರ್ಕಳಕ್ಕೆ ಹೋಗಬೇಕಿದ್ದರೆ ವಾಹನ ಸವಾರರು ಸುಂಕ ಪಾವತಿ ಮಾಡಬೇಕು!
ಕೆಆರ್‌ಡಿಸಿಎಲ್ ಜತೆ ಸುಂಕ ವಸೂಲಿ ಗುತ್ತಿಗೆ ವಹಿಸಿಕೊಂಡಿರುವ ಸಂಸ್ಥೆ(ಮೈಸೂರಿನ ಮಿತ್ರಾ ಇನ್ಫೋ ಸೊಲ್ಯೂಷನ್) ಒಡಂಬಡಿಕೆ ಮಾಡಿಕೊಂಡಿದೆ. ಈ ಬಗ್ಗೆ ಪಂಚಾಯಿತಿಯಿಂದ ನಿರಾಕ್ಷೇಪಣಾ ಪತ್ರದ ಅಗತ್ಯ ಇಲ್ಲ ಎಂದು ಮಿತ್ರಾ ಸಂಸ್ಥೆ ಯೋಜನಾಧಿಕಾರಿ ನಿಷಿತ್ ಕುಮಾರ್ ‘ವಿಜಯವಾಣಿ’ಗೆ ತಿಳಿಸಿದ್ದಾರೆ. ಈ ಬಗ್ಗೆ ಗಜೆಟ್ ನೋಟಿಫಿಕೇಷನ್ ಕೂಡ ಹೊರಡಿಸಲಾಗಿದ್ದು, ದ್ವಿಚಕ್ರ, ರಿಕ್ಷಾ ಹಾಗೂ ಸ್ಥಳೀಯ ಬೆಳ್ಮಣ್ ಪಂಚಾಯಿತಿ ವ್ಯಾಪ್ತಿಯ ವಾಹನಗಳಿಗೆ ಮಾತ್ರ ಸುಂಕ ವಿನಾಯಿತಿ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
2012ರಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ಕಾರ್ಕಳ-ಪಡುಬಿದ್ರಿಯ 29 ಕಿ.ಮೀ.ಉದ್ದದ ರಸ್ತೆ ಕಾಮಗಾರಿಯನ್ನು ಮುರ್ಡೇಶ್ವರದ ಆರ್.ಎನ್.ಎಸ್ ಗುತ್ತಿಗೆದಾರರು 68 ಕೋಟಿ ರೂ. ವೆಚ್ಚದಲ್ಲಿ ನಿರ್ವಹಿಸಿದ್ದರು. 2 ವರ್ಷ ಬಳಿಕ ಈ ರಾಜ್ಯ ಹೆದ್ದಾರಿಗೆ ಟೋಲ್‌ಗೇಟ್ ನಿರ್ಮಿಸಲು ಸರ್ಕಾರ ಮುಂದಾಗಿರುವುದು ಭಾರಿ ಜನಾಕ್ರೋಶಕ್ಕೆ ಗುರಿಯಾಗಿದೆ.

ರಾಜ್ಯ ಹೆದ್ದಾರಿಗೆ ಬೇಕೇ ಟೋಲ್?: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚಾಗಿ ರಸ್ತೆಯ ನಿರ್ವಹಣೆಗಾಗಿ ಟೋಲ್ ಸಂಗ್ರಹಕ್ಕೆ ಅವಕಾಶವಿದೆ. ಮಂಗಳೂರು-ಮಡಿಕೇರಿ, ಮಂಗಳೂರು-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಟೋಲ್‌ಗೇಟ್ ಇಲ್ಲ. ಹೀಗಿರುವಾಗ ರಾಜ್ಯ ಹೆದ್ದಾರಿಯಲ್ಲಿ(ಕಾರ್ಕಳ-ಪಡುಬಿದ್ರಿ)ಇದೇ ಮೊದಲ ಬಾರಿಗೆ ಟೋಲ್ ಗೇಟ್ ಆರಂಭವಾಗಲಿದೆ. ಸ್ಥಳೀಯ ವಾಹನಗಳೇ ಹೆಚ್ಚಾಗಿ ಸಂಚರಿಸುವ ಹೆದ್ದಾರಿಯಲ್ಲಿ ಟೋಲ್‌ಗೇಟ್ ಅಪ್ರಸ್ತುತ ಎನ್ನುವುದು ಸ್ಥಳೀಯರ ವಾದ. ‘ಅವರಿಗೆ ಪಂಚಾಯಿತಿ ನಿರಾಕ್ಷೇಪಣಾಪತ್ರದ ಅಗತ್ಯವಿಲ್ಲ. ಟೋಲ್ ನಿರ್ಮಾಣಕ್ಕೆ ನಮ್ಮ ಪೂರ್ಣ ವಿರೋಧವಿದೆ’ ಎಂದು ಬೆಳ್ಮಣ್ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ರಾವ್ ತಿಳಿಸಿದ್ದಾರೆ. ‘ಗ್ರಾಮೀಣ ಭಾಗದ ಈ ರಾಜ್ಯ ಹೆದ್ದಾರಿಯಲ್ಲಿ ಟೋಲ್‌ಗೇಟ್ ನಿರ್ಮಾಣ ದುರದೃಷ್ಟ. ರಾಜಕೀಯ ರಹಿತವಾಗಿ ಹೋರಾಟ ಮಾಡಿ ಟೋಲ್ ನಿರ್ಮಾಣವನ್ನು ವಿರೋಧಿಸುತ್ತೇವೆ’ ಎಂದು ನಂದಳಿಕೆ ಚಾವಡಿ ಅರಮನೆ ಸುಹಾಸ್ ಹೆಗ್ಡೆ ವಿಜಯವಾಣಿಗೆ ಪ್ರತಿಕ್ರಿಯಿಸಿದ್ದಾರೆ.

ಪ್ರತಿಭಟನೆ ಸುಳಿವು:  ಈ ಹಿಂದೆ ಬೆಳ್ಮಣ್ ಚರ್ಚ್ ಮುಂಭಾಗದ ಹೆದ್ದಾರಿಯಲ್ಲಿ ಟೋಲ್‌ಗೇಟ್ ನಿರ್ಮಾಣದ ಗುಮಾನಿಯಿತ್ತು. ಸ್ಥಳೀಯ ಸಂಘ ಸಂಸ್ಥೆಗಳ ಭಾರಿ ಪ್ರತಿಭಟನೆಯಿಂದ ಪ್ರಸ್ತಾಪ ರದ್ದಾಗಿತ್ತು. ಈಗ ಪ್ರಕ್ರಿಯೆಗೆ ಮತ್ತೆ ಚಾಲನೆ ದೊರಕಿದೆ. ಸ್ಥಳೀಯ ಸಂಘಟನೆಗಳು ಪ್ರತಿಭಟನೆಗೆ ಮುಂದಾಗುವ ಸಾಧ್ಯತೆಗಳಿವೆ. ಬೆಳ್ಮಣ್ ಸ.ಪ.ಪೂ.ಕಾಲೇಜು ಎದುರುಗಡೆ ಪೊದೆ ಹಾಗೂ ಗಿಡಗಂಟಿಗಳಿಂದ ಕೂಡಿದ್ದ ಹೆದ್ದಾರಿ ಬದಿಯನ್ನು ಸ್ವಚ್ಛಗೊಳಿಸಿ ರೋಟರಿ ಕ್ಲಬ್ 17 ಲಕ್ಷ ರೂ. ವೆಚ್ಚದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಶೇ.99 ಕಾಮಗಾರಿ ಮುಗಿದಿತ್ತು. ಇದೇ ಜಾಗದಲ್ಲಿ ಟೋಲ್‌ಗೇಟ್ ನಿರ್ಮಾಣ ಮಾಡಲುದ್ದೇಶಿಸಲಾಗಿದೆ.

ಮಂಗಳೂರು-ಕಾರ್ಕಳ ಮೂರು ಕಡೆ ಟೋಲ್!:  ಮಂಗಳೂರಿನಿಂದ ಕಾರ್ಕಳಕ್ಕೆ ಪ್ರಯಾಣಿಸುವಾಗ ಸುರತ್ಕಲ್ ಹಾಗೂ ಹೆಜಮಾಡಿಯಲ್ಲಿ ಎರಡು ಟೋಲ್‌ಗೇಟ್‌ಗಳಿವೆ. ಮತ್ತೆ ಬೆಳ್ಮಣ್‌ನಲ್ಲಿಯೂ ಪ್ರಾರಂಭಗೊಂಡರೆ ನಮಗೆ ಹೊರೆಯಲ್ಲವೆ ಎಂಬುದು ವಾಹನ ಸವಾರರ ಪ್ರಶ್ನೆ. ಕಾರ್ಕಳದಿಂದ ಮಂಗಳೂರು ಸಾಗಬೇಕಾದರೆ 60 ಕಿ.ಮೀ.ಉದ್ದದ ರಸ್ತೆಗೆ ಮೂರು ಕಡೆ ಸುಂಕ ಕಟ್ಟಬೇಕಾದ ಸ್ಥಿತಿ ನಿರ್ಮಾಣವಾಗಲಿದೆ.

ದೇಗುಲ, ಕಾಲೇಜಿಗೂ ತೊಂದರೆ: ನಿರ್ಮಿಸಲು ಉದ್ದೇಶಿಸಲಾಗಿರುವ ಟೋಲ್‌ಗೇಟ್ ಜಾಗದಲ್ಲಿ ಸ.ಪ.ಪೂ.ಕಾಲೇಜಿದೆ. ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜು ಚಟುವಟಿಕೆಗಳಿಗೆ ಟೋಲ್‌ಗೇಟ್‌ನಿಂದ ತೊಂದರೆಯಾಗುತ್ತದೆ. ಇದೇ ಜಾಗದಲ್ಲಿ ಶ್ರೀ ದುರ್ಗಾಪರಮೇಶ್ವರೀ ದೇಗುಲಕ್ಕೆ ತಿರುಗುವ ರಸ್ತೆಯೂ ಇದೆ. ಹೀಗಾಗಿ ಟೋಲ್‌ಗೇಟ್ ಬೇಡ ಎನ್ನುತ್ತಾರೆ ಸ್ಥಳೀಯರು.

ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಮೊದಲು ಟೋಲ್ ಪ್ರಸ್ತಾಪ ಇರಲಿಲ್ಲ. ಈ ರಸ್ತೆ ನಿರ್ಮಾಣಕ್ಕೆ ಖಾಸಗಿ ಗುತ್ತಿಗೆದಾರರು ಬಂಡವಾಳ ಹೂಡಿಲ್ಲ. 4 ವರ್ಷ ಬಳಿಕ ಟೋಲ್ ನಿರ್ಮಾಣ ಎಷ್ಟು ಸರಿ? ಇದು ಸರ್ಕಾರದ ದಿವಾಳಿತನ ತೋರಿಸುತ್ತದೆ. ಜನಸಾಮಾನ್ಯರಿಗೆ ತೊಂದರೆಯಾಗುವ ಟೋಲ್‌ಗೆ ಅವಕಾಶ ಇಲ್ಲ. ಇದರ ವಿರುದ್ಧ ಹೋರಾಟ ಮಾಡುತ್ತೇವೆ. ಈ ಬಗ್ಗೆ ಸಿಎಂ ಭೇಟಿ ಮಾಡುತ್ತೇನೆ.
– ಸುನೀಲ್ ಕುಮಾರ್, ಶಾಸಕರು, ಕಾರ್ಕಳ.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...