ಸುರತ್ಕಲ್ ಟೋಲ್ ಗೇಟ್ ತೆರವಿಗೆ ಕೊನೆಗೂ ಬಂತು ಸೂಚನೆ; ಮಾಹಿತಿ ಹಂಚಿಕೊಂಡ ಸಂಸದ ನಳಿನ್ ಕುಮಾರ್ ಕಟೀಲ್

Surathkal Toll
Published on

ಮಂಗಳೂರು: ಜಿಲ್ಲೆಯ ಸುರತ್ಕಲ್ ಟೋಲ್​ ಗೇಟ್​ ತೆರವಿಗೆ ಕೊನೆಗೂ ಸೂಚನೆ ಬಂದಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡುವ ಮೂಲಕ ಟೋಲ್ ಗೇಟ್ ರದ್ದಾಗಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಕಾನೂನು ಬಾಹಿರವಾಗಿ ನಡೆಯುತ್ತಿದೆ ಎಂದು ಹೇಳಲಾಗುವ ಸುರತ್ಕಲ್ ಟೋಲ್​ ಗೇಟ್ ತೆರವಾಗಬೇಕೆಂದು ಇತ್ತೀಚೆಗೆ ನಿರಂತರವಾಗಿ ಹೋರಾಟಗಳು ನಡೆಯುತ್ತಿತ್ತು. ಪ್ರತಿಭಟನಾಕಾರರು ಅಹೋರಾತ್ರಿ ಸ್ಥಳದಲ್ಲಿಯೇ ಹೋರಾಟ ಮಾಡುತ್ತಿದ್ದರು. ಇದೀಗ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು, ಟೋಲ್ ಸಂಗ್ರಹ ರದ್ದಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದೆ. ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದಿದ್ದಾರೆ.

ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದರು. ಇದೀಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ಹೇಳಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ತೆರವು ಕಾರ್ಯ ಶೀಘ್ರದಲ್ಲಿಯೇ ಆಗಲಿದೆ. ಸದ್ಯ ಕೇಂದ್ರ ಸರ್ಕಾರದಿಂದ ಅಂತಿಮ ಹಂತದ ಅಧಿಸೂಚನೆ ಬರಬೇಕಿದೆ. ಸೂಚನೆ ಬಂದ ತಕ್ಷಣ ಟೋಲ್ ಗೇಟ್ ತೆರವು ಕಾರ್ಯ ಆಗಲಿದೆ ಎಂದು ನ.12ರಂದು ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net