ಟೋಲ್ ನಿರ್ಮಾಣ ಕಾಮಗಾರಿ ಮತ್ತೆ ಆರಂಭ

10
Published on

ಕುಂಬಳೆ: ಕುಂಬಳೆಯಲ್ಲಿ ತಾತ್ಕಾಲಿಕ ಟೋಲ್ ಬೂತ್ ಕಾಮಗಾರಿ ಶನಿವಾರ ಮತ್ತೆ ಪೊಲೀಸ್ ಬಂದೋಬಸ್ತಿನಲ್ಲಿ ಪುನರಾರಂಭಗೊಂಡಿದೆ.

ಕುಂಬಳೆ ಠಾಣೆ ಇನ್‌ಸ್ಪೆಕ್ಟರ್ ಪಿ.ಕೆ.ಜಿಜೇಶ್ ನೇತೃತ್ವದಲ್ಲಿ ಭದ್ರತೆ ಏರ್ಪಡಿಸಲಾಗಿತ್ತು. ಗುರುವಾರ ಮಧ್ಯಾಹ್ನ ಹಠಾತ್ತನೆ ಟೋಲ್ ಬೂತ್ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. ಈ ವೇಳೆ ಜನಪರ ಮುಷ್ಕರ ಸಮಿತಿ ಪದಾಧಿಕಾರಿಗಳು ಕಾಮಗಾರಿಗೆ ತಡೆಯೊಡ್ಡಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಪೊಲೀಸರ ಕಾವಲಿನಲ್ಲಿ ಮತ್ತೆ ಕಾಮಗಾರಿ ಆರಂಭಿಸಲಾಗಿತ್ತು. ಈ ವೇಳೆಯೂ ಮುಷ್ಕರ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ತಡೆಯೊಡ್ಡಿದ್ದರು. ಬಳಿಕ ಮುಷ್ಕರ ಸಮಿತಿಯ ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ಬಂಧಿಸಿದ್ದರು.

ಟೋಲ್‌ಬೂತ್ ಕಾಮಗಾರಿ 60 ದಿನಗಳೊಳಗೆ ಪೂರ್ಣಗೊಳಿಸಬೇಕೆಂದು ರಾ.ಹೆದ್ದಾರಿ ಪ್ರಾಧಿಕಾರ ಗುತ್ತಿಗೆ ಕಂಪನಿಗೆ ನಿರ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಭಾರಿ ಪೊಲೀಸ್ ಭದ್ರತೆಯಲ್ಲಿ ಕಾಮಗಾರಿ ಪುನರಾರಂಭಿಸಲಾಯಿತು. ಈ ಬಗ್ಗೆ ಮಾಹಿತಿ ತಿಳಿದು ಶನಿವಾರವೂ ಮುಷ್ಕರ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಪೊಲೀಸರು ಪ್ರತಿಭಟನಾ ನಿರತರನ್ನು ಬಂಧಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net