More

    ಟೋಲ್ ವಿನಾಯಿತಿಗೆ ತೀವ್ರ ಹೋರಾಟ, 6ರಂದು ಸಚಿವರು, ಶಾಸಕರಿಗೆ ಮನವಿ

    ಕೋಟ: ಸಾಸ್ತಾನದ ನವಯುಗ ಕಂಪನಿಯ ಟೋಲ್ ಫ್ಲಾಜಾದಲ್ಲಿ ಸ್ಥಳೀಯರಿಗೆ ರಿಯಾಯಿತಿ ಮುಂದುವರಿಸಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ವತಿಯಿಂದ ಸಾಸ್ತಾನದಲ್ಲಿ ಶುಕ್ರವಾರ ಸಾರ್ವಜನಿಕ ಸಮಾಲೋಚನಾ ಸಭೆ ನಡೆಸಲಾಯಿತು. ಫೆ.6ರಂದು ಜಿಲ್ಲಾ ಕೇಂದ್ರಕ್ಕೆ ತೆರಳಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಟೋಲ್ ವಿನಾಯಿತಿ ಕ್ರಮಕ್ಕೆ ಆಗ್ರಹಿಸಲು ನಿರ್ಧರಿಸಲಾಯಿತು.

    ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಾಸ್ತಾನ ಹೆದ್ದಾರಿ ಜಾಗೃತಿ ಸಮಿತಿ ಅಧ್ಯಕ್ಷ ಶ್ಯಾಮಸುಂದರ ನಾಯಿರಿ, ಈವರೆಗೆ ಕೋಟ ಜಿ.ಪಂ. ವ್ಯಾಪ್ತಿಯ ವಾಹನಗಳಿಗೆ ಟೋಲ್‌ನಿಂದ ವಿನಾಯಿತಿ ಸಿಕ್ಕಿತ್ತು. ಈ ರಿಯಾಯಿತಿ ಮುಂದುವರಿಸುವಂತಾಗಲು 2015ರಲ್ಲಿ ನಡೆಸಿರುವಂತೆ ತೀವ್ರ ಹೋರಾಟ ಅನಿವಾರ್ಯ. ಶನಿವಾರ ಅಪರಾಹ್ನ 2.30ಕ್ಕೆ ಉಡುಪಿಗೆ ತೆರಳಿ ಸಚಿವರು, ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದರು.
    ಜಾಗೃತಿ ಸಮಿತಿಯ ಮಾಜಿ ಅಧ್ಯಕ್ಷ ಪ್ರತಾಪ್ ಶೆಟ್ಟಿ ಮಾತನಾಡಿ, ಸ್ಥಳೀಯರಾಗಿ ನಮ್ಮ ಹಕ್ಕಿನ ಬಗ್ಗೆ ನಾವು ಹೋರಾಟ ಮಾಡಿ ತೆಗೆದುಕೊಳ್ಳುವ ಸ್ಥಿತಿ ಸೃಷ್ಟಿಯಾಗಿರುವುದು ವಿಪರ್ಯಾಸ. ಜನಪ್ರತಿನಿಧಿಗಳು ಇದರ ಬಗ್ಗೆ ಗಮನ ಹರಿಸಬೇಕಿತ್ತು. ನಾವು ಇನ್ನೊಂದು ಸುತ್ತಿನ ಹೋರಾಟಕ್ಕೆ ಸಿದ್ಧಗೊಳ್ಳಬೇಕು, ಈ ಹೋರಾಟದಲ್ಲಿ ಹಿಂದಡಿ ಇಟ್ಟರೆ ಜೀವಮಾನವಿಡೀ ಟೋಲ್ ಕಟ್ಟಬೇಕಾದ ಸ್ಥಿತಿ ನಿರ್ಮಾಣಗೊಳ್ಳುತ್ತದೆ. ಹೋರಾಟ ನಡೆಸಿ ಟೋಲ್‌ನಿಂದ ಮುಕ್ತರಾಗುವ ಎಂದರು.

    ಹೆದ್ದಾರಿ ಜಾಗೃತಿ ಸಮಿತಿ ಮಾಜಿ ಕಾರ್ಯದರ್ಶಿ ಐರೋಡಿ ವಿಠ್ಠಲ ಪೂಜಾರಿ, ಪ್ರಶಾಂತ್ ಶೆಟ್ಟಿ, ರಾಜೇಶ್, ನಾಗರಾಜ ಗಾಣಿಗ, ವಾಹನ ಚಾಲಕ ಮಾಲೀಕರು, ಸಾರ್ವಜನಿಕರು ಉಪಸ್ಥಿತರಿದ್ದರು. ಹೆದ್ದಾರಿ ಜಾಗೃತಿ ಸಮಿತಿ ಕಾರ್ಯದರ್ಶಿ ಅಲ್ವಿನ್ ಅಂದ್ರೆ ಕಾರ್ಯಕ್ರಮ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts