22.5 C
Bengaluru
Sunday, January 19, 2020

ಪೊಲೀಸ್ ಭದ್ರತೆಯಲ್ಲಿ ಟೋಲ್ ಸಂಗ್ರಹ

Latest News

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಹೆಜಮಾಡಿ ಟೋಲ್ ಪ್ಲಾಝಾದಲ್ಲಿ ಕೆಎ-19 ಮತ್ತು ಕೆಎ-20 ನೋಂದಣಿ ಹೊಂದಿರುವ ಎಲ್ಲ ವಾಹನಗಳಿಂದಲೂ ಟೋಲ್ ಸಂಗ್ರಹ ಸೋಮವಾರ ಆರಂಭಿಸಲಾಗಿದೆ.
ಮುಂಜಾನೆಯಿಂದಲೇ ಪೊಲೀಸರು ಟೋಲ್ ಪ್ಲಾಝಾಕ್ಕೆ ಭದ್ರತೆ ಕಲ್ಪಿಸಿದ್ದರು. ಟೋಲ್ ನೀಡಲು ವಿರೋಧ ವ್ಯಕ್ತಪಡಿಸಿದ ವಾಹನಗಳ ದಾಖಲೆಗಳನ್ನು ಆರ್‌ಟಿಒ ಅಧಿಕಾರಿಗಳು ಪಡೆದು ಟೋಲ್ ಕಟ್ಟಿಸಿಕೊಂಡರು. ಆದರೆ ಪೊಲೀಸರೆದುರೇ ಕೆಲ ಟೋಲ್ ಸಿಬ್ಬಂದಿ ಸ್ಥಳೀಯ ವಾಹನಗಳವರೊಡನೆ ಟೋಲ್‌ಗಾಗಿ ವಿನಾ ಕಾರಣ ಮಾತಿನ ಚಕಮಕಿ ನಡೆಸಿದರು. ಈ ಸಂದರ್ಭ ಮಧ್ಯ ಪ್ರವೇಶಿಸಿದ ಡಿವೈಎಸ್ಪಿ ಬೆಳ್ಳಿಯಪ್ಪ ಟೋಲ್ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ, ಅಗ್ನಿಶಾಮಕ ವಾಹನ, ಮೂರು ಕ್ರೇನ್‌ಗಳ ಸಹಿತ ಆಂಬುಲೆನ್ಸ್, ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಟೋಲ್ ಪ್ಲಾಝಾ ಬಳಿ ಸನ್ನದ್ಧವಾಗಿರಿಸಲಾಗಿತ್ತು. ಕಾರ್ಕಳ ತಹಸೀಲ್ದಾರ್ ಮಹಮ್ಮದ್ ಇಸಾಕ್, ಆರ್‌ಐ ಸುರೇಶ್ ರಾವ್ ಸಹಿತ ಕಂದಾಯ ಇಲಾಖಾ ಸಿಬ್ಬಂದಿ, ಆರ್‌ಟಿಒ ಸಂತೋಷ್ ಶೆಟ್ಟಿ ಸ್ಥಳದಲ್ಲಿದ್ದರು.

ಸಾಂಕೇತಿಕ ಪ್ರತಿಭಟನೆ: ಟೋಲ್ ಸಂಗ್ರಹ ಖಂಡಿಸಿ ಉಭಯ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ವತಿಯಿಂದ ಟೋಲ್ ಪ್ಲಾಝಾ ಬಳಿ ಬೆರಳೆಣಿಕೆ ಮಂದಿಯಿಂದ ಸಾಂಕೇತಿಕ ಪ್ರತಿಭಟನೆ ನಡೆಯಿತು.
ಹೆದ್ದಾರಿ ಹಾಗೂ ಟೋಲ್ ಸಮಸ್ಯೆ ಬಗ್ಗೆ ಹತ್ತು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ, ತಾರ್ಕಿಕ ಅಂತ್ಯಕ್ಕೆ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವೆ ಜಿಲ್ಲೆಗೆ ಆಗಮಿದಾಗ ಘೆರಾವ್, ಶಾಸಕರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಶೇಖರ ಹೆಜಮಾಡಿ ಹೇಳಿದರು.
ಜಿಪಂ ಸದಸ್ಯ ಶಶಿಕಾಂತ್, ತಾಪಂ ಸದಸ್ಯರಾದ ಯು.ಸಿ.ಶೇಖಬ್ಬ, ರೇಣುಕಾ ಪುತ್ರನ್, ಪಡುಬಿದ್ರಿ, ಗುಲಾಂ ಮಹಮ್ಮದ್, ವಿಶ್ವಾಸ್ ಅಮೀನ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಧು ಆಚಾರ್ಯ, ದೇವಣ್ಣ ನಾಯಕ್, ಲೀಲಾಧರ ಸಾಲ್ಯಾನ್, ಸುಧೀರ್ ಕರ್ಕೇರ, ಸುಭಾಸ್ ಸಾಲ್ಯಾನ್, ಹನೀಫ್, ಹಸನ್, ಕರುಣಾಕರ ಪೂಜಾರಿ, ಕೇಶವ ಸಾಲ್ಯಾನ್ ಮತ್ತಿತರರಿದ್ದರು.
ಪ್ರತಿಭಟನಾ ಸ್ಥಳಕ್ಕೆ ವಿಳಂಬವಾಗಿ ಆಗಮಿಸಿದ ಹೋರಾಟಗಾರ ದೇವಿಪ್ರಸಾದ್ ನಡೆಯಿಂದ ಬೇಸತ್ತ ಪ್ರತಿಭಟನಾಕಾರರು ಒಂದು ಹಂತದಲ್ಲಿ ಪ್ರತಿಭಟನೆಯಿಂದ ದೂರ ಸರಿದರು. ಅಪೂರ್ಣ ಕಾಮಗಾರಿಯಿಂದ ತೊಂದರೆಗಳಾಗುತ್ತಿದ್ದರೂ, ಟೋಲ್ ಸಂಗ್ರಹಕ್ಕೆ ಅವಕಾಶ ಕಲ್ಪಿಸಿದ ಜಿಲ್ಲಾಧಿಕಾರಿ ಕ್ರಮವನ್ನು ದೇವಿಪ್ರಸಾದ್ ಖಂಡಿಸಿದರು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆ ಮಾಡಿದರು.

ಹೆಜಮಾಡಿ ವಾಹನಗಳಿಗೆ ಪಾಸ್: ಹೆಜಮಾಡಿ ಟೋಲ್‌ನಲ್ಲಿ ಹೆಜಮಾಡಿ ವಾಸಿಗಳ ಪ್ರೈವೆಟ್ ವಾಹನಗಳಿಗೆ (ಬಿಳಿ ನಂಬರ್ ಪ್ಲೇಟ್) ಸಂಪೂರ್ಣ ವಿನಾಯಿತಿ ಘೋಷಿಸಲಾಗಿದ್ದು, ಸೂಕ್ತ ದಾಖಲೆ ಒದಗಿಸಿ ಪಾಸ್ ಪಡೆಯುವಂತೆ ನವಯುಗ ಪ್ರಕಟಣೆ ತಿಳಿಸಿದೆ. ಟೋಲ್ ಪ್ಲಾಝಾದ ಎರಡೂ ಕಡೆ 20 ಕಿ.ಮೀ. ವ್ಯಾಪ್ತಿಯ ಬಿಳಿ ನಂಬರ್ ಪ್ಲೇಟ್ ಹೊಂದಿದ ವಾಹನಗಳ ಫೋಟೋ, ಆರ್‌ಸಿ ಮತ್ತು ವಿಳಾಸ ದಾಖಲಾತಿ ನೀಡಿದಲ್ಲಿ ಮಾಸಿಕ 250 ರೂ.ಗಳ ಪಾಸ್ ನೀಡಲಾಗುವುದು. ಇದರಲ್ಲಿ ತಿಂಗಳಲ್ಲಿ ಎಷ್ಟು ಬಾರಿ ಬೇಕಾದರೂ ಪ್ರಯಾಣಿಸಬಹುದಾಗಿದೆ. ಎಲ್‌ಸಿವಿ ವಾಹನಗಳಿಗೆ ತಿಂಗಳಿಗೆ 1,850, ಬಸ್ ಮತ್ತು ಟ್ರಕ್‌ಗಳು 3,880, ಎಂಎವಿ ವಾಹನಗಳು 6,085 ರೂ. ಪಾವತಿಸಿದರೆ ಮಾಸಿಕ 50 ಟ್ರಿಪ್ ಸಂಚರಿಸಬಹುದು.

ಇಂದು ಮುತ್ತಿಗೆ: ಶಾಸಕ ಲಾಲಾಜಿ ಆರ್. ಮೆಂಡನ್ ನೇತೃತ್ವದಲ್ಲಿ ನ.27ರಂದು ಬೆಳಗ್ಗೆ 9.30ಕ್ಕೆ ಹೆಜಮಾಡಿ ಟೋಲ್‌ಗೇಟ್‌ಗೆ ಮುತ್ತಿಗೆ ನಡೆಯಲಿದೆ. ಪಡುಬಿದ್ರಿ ನಾರಾಯಣ ಗುರು ಸಭಾಭವನದಲ್ಲಿ ಸೋಮವಾರ ಸಾಯಂಕಾಲ ಉಭಯ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

 

ಸಾಸ್ತಾನದಲ್ಲಿ ಪ್ರತಿಭಟನಾಕಾರರ ಬಂಧನ
 ಸಾಸ್ತಾನ: ಸ್ಥಳೀಯ ಕೆಎ20 ನೋಂದಣಿ ವಾಹನಗಳಿಗೆ ಸಾಸ್ತಾನ ಟೋಲ್ ಪ್ಲಾಝಾದಲ್ಲಿ ಟೋಲ್ ಸಂಗ್ರಹ ಆರಂಭವಾಗಿರುವುದನ್ನು ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ, ನಾಗರಿಕರು ಸಾಸ್ತಾನ ಹೆದ್ದಾರಿ ಟೋಲ್‌ಗೇಟ್ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.
ಡಿವೈಎಸ್ಪಿ ಹಾಗೂ ತಹಸೀಲ್ದಾರ್ ಮಾತುಕತೆ ನಡೆಸಲು ಮುಂದಾದರೂ ಕೂಡ ಜಗ್ಗದೆ ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದು ಟೋಲ್ ಕೇಂದ್ರದ ಎದುರು ಹೆದ್ದಾರಿ ಬಳಿ ಕುಳಿತು ಘೋಷಣೆ ಕೂಗಿದರು.
ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಅಧ್ಯಕ್ಷ ಪ್ರತಾಪ್ ಶೆಟ್ಟಿ ಮಾತನಾಡಿ, ನ.28ರಂದು ಜಿಲ್ಲಾ ಉಸ್ತುವಾರಿ ಸಚಿವರ ಸಭೆಗೂ ಮುನ್ನ ಟೋಲ್ ಸಂಗ್ರಹ ಮಾಡುವುದಿಲ್ಲವೆಂದು ಡಿಸಿ ಭರವಸೆ ನೀಡಿದ್ದು, ಅದುವರೆಗೆ ಟೋಲ್ ಸಂಗ್ರಹ ನಡೆಯಬಾರದು. ಬೇಡಿಕೆ ಈಡೇರದೆ ಕದಲುವುದಿಲ್ಲ, ಜೈಲಿಗೆ ಹೋಗಲೂ ಸಿದ್ಧರಿದ್ದೇವೆ ಎಂದರು.
ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆಗೆ ಮುಂದಾದ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಕಾರ್ಯದರ್ಶಿ ಐರೋಡಿ ವಿಠಲ್ ಪೂಜಾರಿ, ಕಾನೂನು ಸಲಹೆಗಾರ ಶ್ಯಾಮಸುಂದರ್ ನಾಯರಿ, ಲಾರಿ ಮಾಲೀಕರ ಸಂಘ ಜಿಲ್ಲಾಧ್ಯಕ್ಷ ರಾಜೇಶ್ ಕಾವೇರಿ ಸಹಿತ ಹಲವರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.
ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಡಿವೈಎಸ್ಪಿ ಜಯಶಂಕರ್, ಬ್ರಹ್ಮಾವರ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಆರ್‌ಟಿಒ ಅಧಿಕಾರಿಗಳು ಇದ್ದರು.

ಭಾರಿ ಭದ್ರತೆ: ಐವರು ಸಿಪಿಐ, 17 ಮಂದಿ ಪಿಎಸ್‌ಐ, 11 ಎಎಸ್‌ಐ, 80 ಮಂದಿ ಹೆಡ್ ಕಾನ್ಸ್‌ಟೆಬಲ್, ಕಾನ್ಸ್‌ಟೆಬಲ್ ಸೇರಿದಂತೆ ನೂರಾರು ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು. ಮುಂಜಾಗ್ರತಾ ಕ್ರಮವಾಗಿ 2 ಕೆಎಸ್‌ಆರ್‌ಪಿ, 2 ಡಿಎಆರ್ ವಾಹನ, ಅಗ್ನಿಶಾಮಕ, ಆಂಬುಲೆನ್ಸ್, ಖಾಲಿ ಬಸ್ ನಿಯೋಜನೆ ಮಾಡಲಾಗಿತ್ತು.

 

ಹೋರಾಟಕ್ಕೆ ಬೆಂಬಲ
ಕುಂದಾಪುರ: ಸಾಸ್ತಾನ ಮತ್ತು ಹೆಜಮಾಡಿ ಟೋಲ್ ಅಂಚಿನಲ್ಲಿ ಬರುವ ಪೇಟೆಯೇ ಇಬ್ಭಾಗವಾಗಿ ಒಂದೇ ಗ್ರಾಮದ ಜನರು ತಿರುಗಾಡಲು ಕಡ್ಡಾಯ ಟೋಲ್ ಕೊಡಬೇಕಾದ ಸ್ಥಿತಿಗೆ ಗುತ್ತಿಗೆದಾರ ಕಂಪನಿ ಕಾರಣವಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮೇಲುಸ್ತುವಾರಿ ನಡೆಸುವ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕೃಷ್ಣ ರೆಡ್ಡಿ ಕನಿಷ್ಠ 10 ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿ ವಾಹನ ಮಾಲೀಕರಿಗೆ ರಿಯಾಯಿತಿ ಕೊಡುವ ಭರವಸೆ ನೀಡಿದ್ದಾರೆ. ಆದರೆ ಜಿಲ್ಲೆಯಲ್ಲಿ ಟೋಲ್‌ಗೇಟ್ ಬಗ್ಗೆ ಸರ್ಕಾರಕ್ಕೆ ನಿಯಂತ್ರಣವಿಲ್ಲ. ಕನಿಷ್ಠ ಸ್ಥಳೀಯ 20 ಕಿ.ಮೀ. ವ್ಯಾಪ್ತಿಯಲ್ಲಿಯಾದರೂ ವಾಹನ ಮಾಲೀಕರಿಗೆ ರಿಯಾಯಿತಿ ಕೊಡದಿದ್ದರೆ ಪ್ರತಿಭಟನಾಕಾರರಿಗೆ ಜನಪ್ರತಿನಿಧಿಗಳೆಲ್ಲ ಬೆಂಬಲ ನೀಡುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...