ಟೋಲ್​ ಬೆಲೆ ಹೆಚ್ಚಳ: ಮೈಸೂರು ಬೆಂಗಳೂರು ದಶಪಥ ಸವಾರಿ ಇನ್ನಷ್ಟು ದುಬಾರಿ!

MYS-BNG Toll
Published on

ಬೆಂಗಳೂರು: ದಶಪಥ ಹೆದ್ದಾರಿ ವಾಹನರರಿಗೆ ಮತ್ತೊಮ್ಮೆ ಬರೆ ಬಿದ್ದಿದೆ. ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಮತ್ತೆ ಟೋಲ್ ದರ ಹೆಚ್ಚಳವಾಗಿದೆ.

ನಾಳೆಯಿಂದ ಶೇಕಡಾ 22ರಷ್ಟು ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಪ್ರಕಾರ ಟೋಲ್ ದರ ಹೆಚ್ಚಳವಾಗಲಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪರಿಷ್ಕೃತ ದರ ಹೀಗಿದೆ:

1. ಕಾರು/ವ್ಯಾನ್/ಜೀಪ್: ಏಕಮುಖ ಸಂಚಾರ 165 ರೂ(30ರೂ ಹೆಚ್ಚಳ). ದ್ವಿಮುಖ ಸಂಚಾರ - 250 ರೂ(45ರೂ ಹೆಚ್ಚಳ).
2. ಲಘು ವಾಹನಗಳು/ಮಿನಿಬಸ್: 270 ರೂ.(50ರೂ ಹೆಚ್ಚಳ) ದ್ವಿಮುಖ ಸಂಚಾರ -405 ರೂ.(75 ರೂ. ಹೆಚ್ಚಳ)
3. ಟ್ರಕ್/ ಬಸ್/ಎರಡು ಆಕ್ಸೆಲ್ ವಾಹನ - 565 ರೂ(165 ರೂ ಹೆಚ್ಚಳ), ದ್ವಿಮುಖ ಸಂಚಾರ - 850 ರೂ(160 ರೂ.ಹೆಚ್ಚಳ)
4. ತ್ರಿ ಆಕ್ಸೆಲ್ ವಾಣಿಜ್ಯ ವಾಹನಗಳು: ಏಕ‌ಮುಖ ಸಂಚಾರ 615 ರೂ.(115ರೂ ಹೆಚ್ಚಳ), ದ್ವಿ ಮುಖಸಂಚಾರ - 925 ರೂ.( 225 ರೂ.ಹೆಚ್ಚಳ)
5. ಭಾರೀ ಕಟ್ಟಡ ನಿರ್ಮಾಣ ವಾಹಗನಳು/ಅರ್ಥ್ ಮೂವರ್ಸ್‌/4-6 ಆಕ್ಸೆಲ್ ವಾಹನಗಳು: 885 ರೂ.(165ರೂ ಹೆಚ್ಚಳ) ದ್ವಿಮುಖ ಸಂಚಾರ - 1,330 ರೂ. ಹೆಚ್ಚಳ(250ರೂ ಹೆಚ್ಚಳ)
6. 7 ಅಥವಾ ಅದಕ್ಕಿಂತ ಎಕ್ಸೆಲ್ ವಾಹನಗಳು: 1,080 ರೂ.(200ರೂ ಹೆಚ್ಚಳ) ದ್ವಿಮುಖ ಸಂಚಾರ - 1,620 ರೂ.( 305 ರೂ.ಹೆಚ್ಚಳ)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net