ಹೈದರಾಬಾದ್: ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದ ನಟ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಚಿತ್ರದಲ್ಲಿ ಗಮನಸೆಳೆದ ಕಲಾವಿದರ ಪೈಕಿ ದಾಕ್ಷಾಯಿಣಿ ಪಾತ್ರ ಮಾಡಿರುವ ಅನಸೂಯ ಭಾರದ್ವಾಜ್ ಸಹ ಒಬ್ಬರು. ಮೂಲತಃ ನಟಿ-ನಿರೂಪಕಿಯಾಗಿರುವ ಅನಸೂಯ ತಮ್ಮ ಗ್ಲಾಮರಸ್ನಿಂದಲೇ ಟಾಲಿವುಡ್ನಲ್ಲಿ ಸಿಕ್ಕಾಪಟ್ಟೆ ಸುದ್ದಿಯಾಗಿದ್ದಾರೆ. ಅಲ್ಲದೆ, ಸಾಕಷ್ಟು ಸಿನಿಮಾಗಳಲ್ಲೂ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದಾರೆ. ವಿವಾದಗಳನ್ನು ಹುಟ್ಟುಹಾಕುವುದರಲ್ಲೂ ಅನಸೂಯಾ ಹಿಂದೆ ಬಿದ್ದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಅನಸೂಯಾ, ತಮ್ಮ ಬೋಲ್ಡ್ ಫೋಟೋಗಳನ್ನು ಹರಿಬಿಡುವ ಮೂಲಕ ಪಡ್ಡೆ ಹುಡುಗರ ಮೈ ಬಿಸಿಯೇರಿಸುತ್ತಿರುತ್ತಾರೆ.
ಇದೀಗ ಅನಸೂಯ ಅವರು ಬಿಕಿನಿ ಉಡುಗೆಯಲ್ಲಿ ಕ್ಯಾಮೆರಾ ಮುಂದೆ ಪೋಸ್ ಕೊಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.
ತಮ್ಮ ಕುಟುಂಬದೊಂದಿಗೆ ಸ್ವಿಮ್ಮಿಂಗ್ ಪೂಲ್ನಲ್ಲಿ ಅನಸೂಯ ಸಂತೋಷದ ಕ್ಷಣಗಳನ್ನು ಕಳೆದಿದ್ದಾರೆ. ಬೇಸಿಗೆಯ ಬಿಸಿ ಹಿನ್ನೆಲೆಯಲ್ಲಿ ನೀರಿನಲ್ಲಿ ಮಿಂದೆದ್ದಿರುವ ಅನಸೂಯ, ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಈ ಬೇಸಿಗೆಯಲ್ಲಿ ನೀವು ಏನು ಮಾಡುತ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ನೆಟ್ಟಿಗರು ತರಹೇವಾರಿ ಕಾಮೆಂಟ್ಗಳನ್ನು ಮಾಡುತ್ತಿದ್ದಾರೆ.
ಸಿನಿಮಾ ವಿಚಾರಕ್ಕೆ ಬಂದರೆ, ಅನಸೂಯ ಅವರು ಪ್ರಸ್ತುತ ಅನೇಕ ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ. ಪುಷ್ಪ-2 ಸಿನಿಮಾದ ಚಿತ್ರೀಕರಣಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ ಮತ್ತು ಕೃಷ್ಣ ವಂಶಿ ನಿರ್ದೇಶನದ ರಂಗ ಮಾರ್ತಾಂಡ ಸಿನಿಮಾದ ಪ್ರಮುಖ ಪಾತ್ರದಲ್ಲಿ ಅನಸೂಯ ನಟಿಸಿದ್ದಾರೆ. (ಏಜೆನ್ಸೀಸ್)
ಸಲಿಂಗ ಕಾಮದ ಅನುಭವವಿದೆಯೇ? ನೆಟ್ಟಿಗನ ಪ್ರಶ್ನೆಗೆ ಅನಸೂಯ ಕೊಟ್ಟ ಬೋಲ್ಡ್ ಉತ್ತರ ವೈರಲ್
ಆಂಟಿ ಎಂದು ಕರೆದರೆ ನಿಮಗೇಕೆ ಕೋಪ ಬರುತ್ತೆ? ಅಭಿಮಾನಿ ಪ್ರಶ್ನೆಗೆ ಅನಸೂಯ ಕೊಟ್ಟ ಉತ್ತರ ವೈರಲ್
ನಿನ್ನ ರೇಟ್ ಎಷ್ಟು ಎಂದು ಕೇಳಿದ ವಿಜಯ್ ದೇವರಕೊಂಡ ಫ್ಯಾನ್ಸ್ಗೆ ಅನಸೂಯ ಕೊಟ್ಟ ತಿರುಗೇಟು ಹೀಗಿತ್ತು…