ತಿರುವನಂತಪುರಂ: ಕೇರಳದ ವಯನಾಡು ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ನೂರಾರು ಜನರು ಮೃತಪಟ್ಟಿದ್ದಾರೆ. ಸಾವಿರಾರು ಮಂದಿಗೆ ಗಾಯಗಳಾಗಿದ್ದು, ಜನರ ಜೀವನ ಅಸ್ತವ್ಯಸ್ತಗೊಂಡಿದೆ. ವಯನಾಡಿನ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯು ಮುಂದುವರಿದಿದ್ದು, ಈ ನಡುವೆ ಹಲವಾರು ದಕ್ಷಿಣ ಭಾರತದ ಸೆಲಿಬ್ರಿಟಿಗಳು ಸಂತ್ರಸ್ತರಿಗೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ನೆರವಾಗಲು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಂದಾಗಿದ್ದಾರೆ.
ಇದನ್ನು ಓದಿ: ಪೌರಾಣಿಕ ಕಥೆಗಳನ್ನು ಸಿನಿಮಾ ಮಾಡುವುದು ಅಪಾಯಕಾರಿ; ರಾಮ್ಗೋಪಾಲ್ ವರ್ಮಾ
ರಾಜ್ಯದಲ್ಲಿನ ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ಟಾಲಿವುಡ್ನ ಮೆಗಾಸ್ಟಾರ್ ಚಿರಂಜೀವಿ ಹಾಗೂ ಅವರ ಮಗ ಮೆಗಾಪವರ್ಸ್ಟಾರ್ ರಾಮ್ಚರಣ್ ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಪ್ರಕೃತಿಯ ವಿಕೋಪದಿಂದಾಗಿ ಕೇರಳದಲ್ಲಿ ನೂರಾರು ಅಮೂಲ್ಯ ಜೀವಗಳ ವಿನಾಶ ಮತ್ತು ನಷ್ಟದಿಂದ ದುಃಖಿತರಾಗಿದ್ದೇವೆ. ವಯನಾಡು ದುರಂತದ ಸಂತ್ರಸ್ತರ ದುಃಖದ ಜತೆ ನಾವು ಇದ್ದೇವೆ. ರಾಮಚರಣ್ ಮತ್ತು ನಾನು ಜಂಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ನೀಡುತ್ತಿದ್ದೇವೆ. ನೊಂದವರೆಲ್ಲರೂ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ನಟ ಚಿರಂಜೀವಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಡಿರುವ ಪೋಸ್ಟ್ನಲ್ಲಿ ಬರೆದಿದ್ದಾರೆ.
ನಟರಾದ ಸೂರ್ಯ ಮತ್ತು ವಿಕ್ರಮ್, ಮಮ್ಮುಟ್ಟಿ , ದುಲ್ಕರ್ ಸಲ್ಮಾನ್, ಫಹದ್ ಫಾಸಿಲ್, ನಜ್ರಿಯಾ, ನಯನತಾರಾ ಮತ್ತು ವಿಘ್ನೇಶ್ ಶಿವನ್ ದಂಪತಿ, ಮೋಹನ್‌ಲಾಲ್, ಅಲ್ಲು ಅರ್ಜುನ್ ಕೇರಳ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.(ಏಜೆನ್ಸೀಸ್)
ವಕ್ಫ್ ಕಾಯ್ದೆ ತಿದ್ದುಪಡಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ; ಅಸಾದುದ್ದೀನ್ ಓವೈಸಿ