ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ಭೋವಿ ವಿದ್ಯಾವರ್ಧಕ ಸಂಘ ಹಾಗೂ ಜಿಲ್ಲಾಡಳಿತದಿಂದ ಜ.14ರ ಬೆಳಗ್ಗೆ 11ಕ್ಕೆ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಏರ್ಪಡಿಸಲಾಗಿದೆ ಎಂದು ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ವಿಶೇಷ ಉಪನ್ಯಾಸ ನೀಡುವರು. ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್.ತಂಗಡಗಿ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್ವರ್, ಆರಗ ಜ್ಞಾನೇಂದ್ರ, ಗೋಪಾಲಕೃಷ್ಣ ಬೇಳೂರು, ಶಾರದಾ ಪೂರ‌್ಯಾನಾಯ್ಕಾ, ಬಿ.ವೈ.ವಿಜಯೇಂದ್ರ, ಎಂಎಲ್‌ಸಿಗಳಾದ ಎಸ್.ಎಲ್.ಬೋಜೇಗೌಡ, ಭಾರತಿ ಶೆಟ್ಟಿ , ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಬಲ್ಕೀಶ್ ಬಾನು, ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರಾದ ಜಿ.ಪಲ್ಲವಿ, ಎಚ್.ಎಸ್.ಸುಂದರೇಶ್, ಡಾ. ಅಂಶುಮಂತ್, ಆರ್.ಎಂ.ಮಂಜುನಾಥ ಗೌಡ ಮತ್ತಿತರರು ಪಾಲ್ಗೊಳ್ಳುವರು ಎಂದರು.
ಸಮಾಜದ ಪ್ರಮುಖರಾದ ಬಿ.ಜಗದೀಶ್, ಧೀರರಾಜ್ ಹೊನ್ನವಿಲೆ, ಬಸವರಾಜ್, ಲೋಕೇಶ್, ಗಣೇಶ್, ಶಶಿ, ಮೋಹನ್, ವಿರೇಶ್, ತಿಮ್ಮರಾಜು ಸುದ್ದಿಗೋಷ್ಠಿಯಲ್ಲಿದ್ದರು.