More

    ಕುರುಹಿನ ಶೆಟ್ಟಿ ಸಂಘದ ವಾರ್ಷಿಕೋತ್ಸವ ನಾಳೆ

    ಚಿಕ್ಕಮಗಳೂರು: ಜಿಲ್ಲಾ ಕುರುಹಿನಶೆಟ್ಟಿ ಮಹಿಳಾ ಸಂಘದ 7ನೇ ವಾರ್ಷಿಕೋತ್ಸವವನ್ನು ಫೆ.18ರಂದು ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷೆ ಸಿ.ಎಸ್.ಪುಷ್ಪಾ ರಾಜೇಂದ್ರ ತಿಳಿಸಿದರು.

    ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ 2022-2023ನೇ ಸಾಲಿನಲ್ಲಿ 10ನೇ ತರಗತಿ ಮತ್ತು ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
    ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಚ್.ಡಿ.ತಮ್ಮಯ್ಯ, ಬೆಂಗಳೂರಿನ ವಿಧಾನಪರಿಷತ್ ಸದಸ್ಯ ಎಸ್.ಕೇಶವಪ್ರಸಾದ್, ಮಾಜಿ ಸಚಿವ ಸಿ.ಟಿ.ರವಿ, ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್, ವಿಧಾನಪರಿಷತ್ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಕೇಂದ್ರ ಕುರುಹಿನಶೆಟ್ಟಿ ಸಂಘದ ಉಪಾಧ್ಯಕ್ಷ ಜಿ.ಟಿ.ಸೋಮಶೇಖರ್, ನೀಲಕಂಠೇಶ್ವರ ಕುರುಹಿನಶೆಟ್ಟಿ ಸಂಘದ ಅಧ್ಯಕ್ಷ ಸಿ.ಎಚ್.ಇಂದುಕುಮಾರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದರು.
    ಸಭೆ, ಸಮಾರಂಭ ನಡೆಸಲು ಅನುಕೂಲವಾಗುವಂತೆ ಜಿಲ್ಲಾ ಕುರುಹಿನಶೆಟ್ಟಿ ಮಹಿಳಾ ಸಂಘಕ್ಕೆ ನಿವೇಶನ ನೀಡಲು ನಗರಸಭೆ ಮುಂದಾಗಬೇಕು. ಶಾಸಕರು ಮತ್ತು ಸಂಸದರು ಈ ಕುರಿತು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
    ಜಿಲ್ಲಾ ಕುರುಹಿನಶೆಟ್ಟಿ ಮಹಿಳಾ ಸಂಘದ ಪದಾಧಿಕಾರಿಗಳಾದ ಪದ್ಮಾ ಮಹೇಶ್, ಗೌರವಾಧ್ಯಕ್ಷೆ ಚಂದ್ರಾವತಿ ಶಂಕರ್, ಗೀತಾ, ಪ್ರಿಯಾ ಪರಮೇಶ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts