More

    ನಾಳೆ ಸ್ನೇಹ ವಿದ್ಯಾಸಂಸ್ಥೆಯ ಬೆಳ್ಳಿ ಹಬ್ಬ ಸಂಭ್ರಮ

    ಕೆ.ಎಂ.ದೊಡ್ಡಿ: ಇಲ್ಲಿನ ಸ್ನೇಹ ವಿದ್ಯಾ ಸಂಸ್ಥೆಗೆ 25 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಜ.10 ರಂದು ಬೆಳ್ಳಿ ಹಬ್ಬ ಸಂಭ್ರಮಕ್ಕೆ ಭರ್ಜರಿ ಸಿದ್ಧತೆ ನಡೆದಿದೆ.

    1998-99 ರಂದು 22 ವಿದ್ಯಾರ್ಥಿಗಳಿಂದ ಆರಂಭವಾದ ಸಂಸ್ಥೆಯಲ್ಲಿ ಪ್ರಸ್ತುತ 415 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸಂಸ್ಥೆಯ ಸಂಸ್ಥಾಪಕ ಗುಡಿಗೆರೆ ಡಿ.ದಾಸೇಗೌಡ ಸ್ಥಾಪಿಸಿದ್ದು, ಮಕ್ಕಳಿಗೆ ಗುಣಮಟ್ಟ ಶಿಕ್ಷಣ ದೊರೆಯುತ್ತಿದೆ.

    ಸಂಸ್ಥೆಯ ಸಂಸ್ಥಾಪಕ ಗುಡಿಗೆರೆ ಡಿ.ದಾಸೇಗೌಡ ಅವರು ಭಾರತೀ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರ ಶೈಕ್ಷಣಿಕ ಪ್ರಗತಿಗೆ ಪತ್ನಿ ಸಂಸ್ಥೆಯ ಅಧ್ಯಕ್ಷೆ ಶಶಿಕಲಾ ದಾಸೇಗೌಡ ಸಾಥ್ ನೀಡಿರುವುದು ವಿಶೇಷ.

    25 ವರ್ಷಗಳ ಹಿಂದೆ ಸ್ಥಾಪಿಸಿದ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪ್ರಸ್ತುತ ಉನ್ನತ ಸ್ಥಾನದಲ್ಲಿದ್ದಾರೆ. ಇದು ಸಂಸ್ಥೆಯ ಹೆಗ್ಗಳಿಕೆಗೆ ಹಿಡಿದ ಕೈಗನ್ನಡಿಯಾಗಿದೆ.

    ಸ್ನೇಹ ವಿದ್ಯಾಸಂಸ್ಥೆಗೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಶಾಲಾ ಆವರಣದಲ್ಲಿ ಜ.10 ರಂದು ಸಂಜೆ 5 ಗಂಟೆಗೆ ಬೆಳ್ಳಿಹಬ್ಬ ಸಂಭ್ರಮ ಮತ್ತು ಸ್ನೇಹ ಸಿಂಚನ ಶಾಲಾ ವಾರ್ಷಿಕೋತ್ಸವ ನಡೆಯಲಿದೆ.

    ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಡಿ.ದಾಸೇಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಡ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಪುಟ್ಟರಾಜು, ಬಿಇಒ ಸಿ.ಎಚ್.ಕಾಳೀರಯ್ಯ, ಸಂಸ್ಥೆ ಅಧ್ಯಕ್ಷೆ ಶಶಿಕಲಾ ದಾಸೇಗೌಡ ಆಗಮಿಸಲಿದ್ದಾರೆ. ಬೆಂಗಳುರಿನ ಸಿಐಡಿ ವಿಭಾಗದ ಎಸ್‌ಪಿ ಪೃಥ್ವಿಕ್ ಶಂಕರ್, ರಾಷ್ಟ್ರಮಟ್ಟದ ಈಜುಪಟು ಹಶಿಕಾ ಶಂಕರ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ಶಾಲೆಯ ಮುಖ್ಯ ಶಿಕ್ಷಕಿ ಅನಿತಾ ಯೋಗನಾಂದ್ ತಿಳಿಸಿದ್ದಾರೆ.

    ಸಂಸ್ಥೆ ಸ್ಥಾಪನೆಯಾಗಿ 25 ವರ್ಷ ಕಳೆದಿದ್ದು ಮಾಜಿ ಸಂಸದ ದಿವಂಗತ ಜಿ.ಮಾದೇಗೌಡರ ಆಶಯಗಳನ್ನು ಅಳವಡಿಸಿಕೊಳ್ಳಲಾಗಿದೆ. ಶೈಕ್ಷಣಿಕ ಪ್ರಗತಿಯಲ್ಲಿ ಪ್ರಗತಿ ಸಾಧಿಸಿದ್ದು, ಇದೀಗ ಬೆಳ್ಳಿಹಬ್ಬ ಆಚರಣೆ ನಡೆಯಲಿದೆ.
    ಡಿ.ದಾಸೇಗೌಡ ಸಂಸ್ಥಾಪಕ, ಸ್ನೇಹ ವಿದ್ಯಾಸಂಸ್ಥೆ


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts