

ಬೆಂಗಳೂರು: ನಾಳೆ ಬೆಳಗ್ಗೆ 11.30ಕ್ಕೆ ಎಲ್ಲ ವಿದ್ಯಾರ್ಥಿಗಳ ಮೊಬೈಲ್ಗೆ ಎಸ್ಎಂಎಸ್ ಮುಖಾಂತರ ಫಲಿತಾಂಶ ರವಾನೆಯಾಗಲಿದೆ. ಮಧ್ಯಾಹ್ನ 12 ಗಂಟೆಯ ನಂತರ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ರಿಸಲ್ಟ್ ವೀಕ್ಷಿಸಬಹುದು.
ಈ ಬಗ್ಗೆ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ನಾಳೆ ಮಧ್ಯಾಹ್ನ 12 ಗಂಟೆ ನಂತರ ಇಲಾಖೆ ವೆಬ್ಸೈಟ್ www.karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಮಾಹಿತಿ ನೀಡಿದರು.
ಇದನ್ನೂ ಓದಿರಿ ಇಡೀ ರಾಜ್ಯ ಲಾಕ್ಡೌನ್?
ಕಳೆದ ಮಾರ್ಚ್ 4ರಿಂದ 21ನೇ ತಾರೀಖಿನವರೆಗೂ ದ್ವೀತಿಯ ಪಿಯು ಎಕ್ಸಾಂ ನಡೆದಿತ್ತು. ಮಾರ್ಚ್ 23ರಂದು ಕೊನೆಯದಾಗಿ ಇಂಗ್ಲಿಷ್ ಪರೀಕ್ಷೆ ನಡೆಯಬೇಕಿತ್ತು. ಅಷ್ಟರಲ್ಲಿ ಕರೊನಾ ಭೀತಿ ಆವರಿಸಿದ್ದರಿಂದ ಈ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಕಳೆದ ತಿಂಗಳು ಅಂದರೆ ಜೂನ್ 18ರಂದು ಇಂಗ್ಲಿಷ್ ಎಕ್ಸಾಂ ನಡೆದಿತ್ತು.
ಇದಾದ ಬಳಿಕ ಫಲಿತಾಂಶ ಯಾವಾಗ ಎಂಬ ಪ್ರಶ್ನೆ ಪದೇಪದೆ ಉದ್ಭವಿಸುತ್ತಲೇ ಇತ್ತು. ಜುಲೈ 20ರೊಳಗೆ ರಿಸಲ್ಟ್ ಬರಲಿದೆ ಎಂದು ಸಚಿವ ಸುರೇಶ್ ಕುಮಾರ್ ಇತ್ತೀಚಿಗಷ್ಟೇ ಹೇಳಿದ್ದರು. ಇಂದು ಅಧಿಕೃತವಾಗಿ ದಿನಾಂಕ ಘೋಷಿಸಿದ ಸಚಿವರು ನಾಳೆಯೇ ಫಲಿತಾಂಶ ಪ್ರಕಟ ಆಗಲಿದೆ ಎಂದು ತಿಳಿಸಿದ್ದಾರೆ. ಸುಮಾರು 6.75 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ನಾಳೆ ಹೊರಬೀಳಲಿದೆ.