ನಾಳೆ ಎಡಪದವು ಕಾಲೇಜು ವಾರ್ಷಿಕೋತ್ಸವ

Published on

ಗುರುಪುರ: ಎಡಪದವು ಸಮೀಪದ ಮಿಜಾರು ಸ್ವಾಮಿ ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಸ್ವಾಮೀ ವಿವೇಕಾನಂದ ಪದವಿಪೂರ್ವ ಕಾಲೇಜಿನ 2024-25ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಜ.3ರಂದು ಬೆಳಗ್ಗೆ 10ರಿಂದ ನಡೆಯಲಿದೆ.

ಶಾಸಕ ಡಾ.ವೈ.ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಮಂಗಳೂರು ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ.ಪುರಾಣಿಕ್ ಉಪಸ್ಥಿತರಿರುವರು.

ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ಉಪನಿರ್ದೇಶಕ ಸಿ.ಡಿ.ಜಯಣ್ಣ, ಎಡಪದವು ಸ್ವಾಮಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗೋಪಾಲ ಕಾರಂತ, ಮೂಡುಬಿದಿರೆ ಆಳ್ವಾಸ್ ಎಜುಕೇಶನ್ ಚೇರ್‌ಮನ್ ಡಾ.ಎಂ.ಮೋಹನ ಆಳ್ವ, ಎಡಪದವು ಸ್ವಾಮಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷ ನವೀನ್ ಕುಮಾರ್ ಹೊಸಮನೆ ಭಾಗವಹಿಸುವರು.

ಮಧ್ಯಾಹ್ನ 1ಕ್ಕೆ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದ್ದು, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net