More

    ನಾಳೆ 21 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​; ನಾಡಿದ್ದೂ ಜೋರು ಮಳೆ…

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಪೂರ್ವ ಮುಂಗಾರು ಮಳೆ ಏ.18ರವರೆಗೆ ಮುಂದುವರಿಯಲಿದೆ.

    ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಕೋಲಾರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ಏ.17, 18ರಂದು ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಗದಗದಲ್ಲಿಯೂ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ.

    ಏ.10ರಿಂದ ಏ.16ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 8 ಮಿಮೀ ಮಳೆ ಬದಲಾಗಿ 16 ಮಿಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.105 ಹೆಚ್ಚು ಮಳೆ ಸುರಿದಿದೆ. ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾದರೆ, ಉಳಿದ ಜಿಲ್ಲೆಗಳಲ್ಲಿ ವಾಡಿಕೆಕ್ಕಿಂತ ಹೆಚ್ಚು ಮಳೆ ಬಿದ್ದಿದೆ.

    ಅದೊಂದು ಫೋನ್​ ಕರೆಗೆ ಸಿಎಂ ವಾಪಸ್​ ಬಂದರು; ಕರೆ ಮಾಡಿದ್ಯಾರು?

    ಬಾಲಿವುಡ್​ ಮೇಲೆ ಅಣುಬಾಂಬ್​!; ನಿರ್ದೇಶಕ ರಾಮ್​ಗೋಪಾಲ್​ ವರ್ಮಾ ಹೀಗಂದಿದ್ದೇಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts