ಚಿಕ್ಕಮಗಳೂರು: ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದಾರಿ ತಪ್ಪುತ್ತಿದು,್ದ ಮಕ್ಕಳು ಶಾಲಾ ಅವಧಿಯಲ್ಲಿ ಶಿಕ್ಷಣದ ಕಡೆಗೆ ಗಮನ ಹರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಲೆನಾಡು ವಿದ್ಯಾ ಸಂಸ್ಥೆ ಸಹಯೋಗದಲ್ಲಿ ಮಲೆನಾಡು ವಿದ್ಯಾ ಸಂಸ್ಥೆ ಸಭಾಂಗಣದಲ್ಲಿ ನಡೆದ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾನವ ಕಳ್ಳ ಸಾಗಾಣಿಕೆಯು ಲೈಂಗಿಕ, ಶೋಷಣೆಗಾಗಿ, ಬಾಲಕಾರ್ಮಿಕತೆಗಾಗಿ, ಜೀತಕ್ಕಾಗಿ ಹಾಗೂ ಇನ್ನು ಮುಂತಾದ ಕೃತ್ಯಗಳಿಗೆ ನಡೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಲೈಂಗಿಕವಾಗಿ ಬಳಸಿಕೊಳ್ಳಲು, ಮಕ್ಕಳನ್ನು ಭಿಕ್ಷಾಟನೆಗೆ ಬಳಸಲು, ಬಾಲಕಾರ್ಮಿಕರಾಗಿ ದುಡಿಸಿಕೊಳ್ಳಲು ಹಾಗೂ ಬಾಲ್ಯ ವಿವಾಹಗಳನ್ನು ಮಾಡುವ ಉz್ದೆÃಶದಿಂದ ಮಾನವ ಕಳ್ಳ ಸಾಗಾಣಿಕೆಯನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಜೀವನದಲ್ಲಿ ಮಕ್ಕಳು ಗುರಿಗಳನ್ನು ಇಟ್ಟುಕೊಂಡು ವಿದ್ಯಾಭ್ಯಾಸವನ್ನು ಮಾಡಬೇಕು. ಗುರಿ ಸಾಧಿಸುವವರೆಗೆ ಪ್ರಯತ್ನ ಬಿಡಬಾರದು. ಆಗ ಉತ್ತಮ ಜೀವನ ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ.ಲೋಕೇಶ್ವರಪ್ಪ ಮಾತನಾಡಿ, ಇಂದು ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಜಾಗೃತಿ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜುಲೈ ೩೦ ಮಾನವ ಕಳ್ಳ ಸಾಗಾಣಿಕೆ ತಡೆ ದಿನವಾಗಿದ್ದು, ರಾಜ್ಯಾದ್ಯಂತ ಕಾರ್ಯಕ್ರಮ ನಡೆಸಲಾಗಿದೆ ಎಂದು ತಿಳಿಸಿದರು.
ಎಂಇಎಸ್ ಎಸ್‌ಎಸ್‌ಎಂ ಪದವಿ ಪೂರ್ವ ಕಾಲೇಜು ಪ್ರಾಚಾರ್ಯೆ ಎಂ.ಬಿ ಜಯಶ್ರೀ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ತರೀಕೆರೆ ವಕೀಲೆ ವಿಭಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುರೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ರಂಗನಾಥ, ಪಿಎಸ್‌ಐ ನಂದಿನಿ ಮತ್ತಿತರರು ಉಪಸ್ಥಿತರಿದ್ದರು.