More

    ಮೇ ೨೧ಕ್ಕೆ ಬಿಡುಗಡೆಯಾಗುತ್ತಿಲ್ಲ `ತೂಫಾನ್’ … ಯಾಕೆ ಗೊತ್ತಾ?

    ಮುಂಬೈ: ದೇಶದಲ್ಲಿ ಕರೊನಾ ಎರಡನೇ ಅಲೆ ಹೆಚ್ಚಾದಂತೆ, ಬಿಡುಗಡೆಯಾಗಬೇಕಿದ್ದ ಚಿತ್ರಗಳೆಲ್ಲ ಮುಂದೂಡಲ್ಪಟ್ಟಿವೆ. ಇಂಥ ಸಂದರ್ಭದಲ್ಲಿ ಚಿತ್ರಮಂದಿರಗಳು ಚಿತ್ರಪ್ರದರ್ಶನವನ್ನು ನಿಲ್ಲಿಸಿರುವುದರಿಂದ, ಹಲವು ನಿರ್ಮಾಪಕರು ತಮ್ಮ ಚಿತ್ರದ ಬಿಡುಗಡೆಯನ್ನು ಅನಿರ್ಧಿಷ್ಟಾವಧಿ ಮುಂದಕ್ಕೆ ಹಾಕಿದ್ದಾರೆ. ಕೆಲವರು ಚಿತ್ರಮಂದಿರಗಳಲ್ಲಿ ಚಿತ್ರಪ್ರದರ್ಶನ ಮಾಡುವ ಐಡಿಯಾ ಬಿಟ್ಟು, ಓಟಿಟಿಗಳಲ್ಲಿ ಚಿತ್ರ ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ.

    ಇದನ್ನೂ ಓದಿ: ಚಂದನ್ ಶೆಟ್ಟಿ ಜತೆ ಮಂಗ್ಲಿ ಹಾಡು

    ಆದರೆ, ದೇಶದಲ್ಲಿ ಕರೊನಾ ಕೇಸ್‌ಗಳ ಸಂಖ್ಯೆ ಹೆಚ್ಚಾಗಿದ್ದು ಮತ್ತು ಇಂಥ ವಿಷಮಕಾರಿ ಪರಿಸ್ಥಿತಿಯಲ್ಲಿ ಚಿತ್ರ ಬಿಡುಗಡೆ ಮಾಡುವುದು ಸರಿಯಲ್ಲ ಎಂಬ ತೀರ್ಮಾನಕ್ಕೆ ಫರ್ಹಾನ್ ಅಖ್ತರ್ ಬಂದಿದ್ದಾರೆ. ಅದೇ ಕಾರಣಕ್ಕೆ ಮೇ ೨೧ರಂದು ಅಮೇಜಾನ್ ಪ್ರೆöÊಮ್‌ನಲ್ಲಿ ಬಿಡುಗಡೆಯಾಗಬೇಕಿದ್ದ `ತೂಫಾನ್’ ಎಂಬ ಹೊಸ ಚಿತ್ರದ ಬಿಡುಗಡೆಯನ್ನು ಮುಂದೂಡಿದ್ದಾರೆ. ಮುಂದೊAದು ದಿನ ಪರಿಸ್ಥಿತಿ ತಿಳಿಯಾದ ಮೇಲೆ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಅವರು ಘೋಷಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, `ಭಾರತದಲ್ಲಿ ಇಂದಿನ ಪರಿಸ್ಥಿತಿ ಬಹಳ ಘೋರವಾಗಿದೆ. ಕರೊನಾದಿಂದ ಲಕ್ಷಾಂತರ ಜನ ಬಳಲುತ್ತಿದ್ದು, ಅವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇವೆ. ದೇಶದಲ್ಲಿ ದಿನದಿಂದ ದಿನಕ್ಕೆ ಕರೊನಾ ಕೇಸ್‌ಗಳು ಹೆಚ್ಚಾಗುತ್ತಿದ್ದು, ಈ ಸಂದರ್ಭದಲ್ಲಿ ಜನರಿಗೆ ಸಹಾಯಹಸ್ತ ಚಾಚುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ನಮ್ಮ `ತೂಫಾನ್’ ಚಿತ್ರವನ್ನು ಮುಂದೂಡುವುದಕ್ಕೆ ನಾವು ತೀರ್ಮಾನಿಸಿದ್ದೇವೆ. ಸದ್ಯ ಬಿಡುಗಡೆ ಯಾವಾಗ ಎಂದು ಇನ್ನೂ ತೀರ್ಮಾನಿಸಿಲ್ಲವಾದ್ದರಿಂದ, ಮುಂದಿನ ದಿನಗಳಲ್ಲಿ ಬಿಡುಗಡೆಯ ದಿನಾಂಕದ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಅವರು ಹೇಳಿದ್ದಾರೆ.

    ಇದನ್ನೂ ಓದಿ: ಕರೊನಾ ಸಂಕಷ್ಟಕ್ಕೆ ಮಿಡಿದ ಸುದೀಪ್; 300 ಆಕ್ಸಿಜನ್​ ಸಿಲಿಂಡರ್​ ದೇಣಿಗೆ

    `ತೂಫಾನ್’ ಚಿತ್ರದಲ್ಲಿ ಫರ್ಹಾನ್, ಬಾಕ್ಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜತೆಗೆ ಪರೇಶ್ ರಾವಲ್, ಮೃಣಾಲ್ ಠಾಕೂರ್, ವಿಜಯ್ ರಾಜ್, ಮೋಹನ್ ಅಗಾಸ್ಸೆ ಮುಂತಾದವರು ನಟಿಸಿದ್ದಾರೆ. ಈ ಹಿಂದೆ `ಭಾಗ್ ಮಿಲ್ಕಾ ಭಾಗ್’, `ದಿಲ್ಲಿ ೬’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ರಾಕೇಶ್ ಓಂಪ್ರಕಾಶ್ ಮೆಹ್ರಾ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

    ಸಲ್ಮಾನ್ ಕೆರಿಯರ್‌ನಲ್ಲೇ ಹೊಸ ದಾಖಲೆ ಬರೆದ `ರಾಧೆ’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts