ಕರ್ನಾಟಕ ಚುನಾವಣಾ ಫಲಿತಾಂಶ | ಬಿಜೆಪಿ ದಿಗ್ಗಜರಿಗೆ ಹಿನ್ನಡೆ!

blank

ಬೆಂಗಳೂರು: ಬಿಜೆಪಿ ದಿಗ್ಗಜರಲ್ಲಿ ಕೆಲ ನಾಯಕರು ಮತ ಎಣಿಕೆಯ ಪೈಪೋಟಿಯಲ್ಲಿ ಹಿಂದುಳಿದಿದ್ದಾರೆ.
ಅಥಣಿಯಲ್ಲಿ ಲಕ್ಷ್ಮಣ ಸವದಿ ವಿರುದ್ಧ ನಿಂತಿರುವ ರಮೇಶ್ ಜಾರಕಿಹೊಳಿಗೆ ಹಿನ್ನಡೆಯಾಗಿದೆ. ಇನ್ನು ಚಿಕ್ಕಮಗಳೂರಿನ ಫೈರ್​ ಬ್ರ್ಯಾಂಡ್ ಸಿಟಿ ರವಿ ಕೂಡ ಮತ ಎಣಿಕೆಯ ರೇಸ್​ನಲ್ಲಿ ಹಿಂದುಳಿದಿದ್ದಾರೆ. ಇನ್ನು ಆಶ್ಚರ್ಯಕರ ರೀತಿಯಲ್ಲಿ ಡಾ. ಸುಧಾಕರ್ ಕೂಡ ಚಿಕ್ಕಬಳ್ಳಾಪುರದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ.

ರಾಜ್ಯಾದ್ಯಂತ ಬಿಜೆಪಿ ಒಟ್ಟಾರೆಯಾಗಿ ಮತ ಎಣಿಕೆ ರೇಸ್​ನಲ್ಲಿ ಹಿಂದೆ ಬಿದ್ದಿದ್ದು ಇದೀಗ ದಿಗ್ಗಜರಿಗೂ ಹಿನ್ನಡೆ ಉಂಟಾಗಿದೆ. ಕಾಂಗ್ರೆಸ್ ಇದೀಗ 117 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಬಿಜೆಪಿ ಇನ್ನೂ 80 ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಿಲ್ಲ.

ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‌ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.

2018ರ ಫಲಿತಾಂಶ ಏನಿತ್ತು?

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 31 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 11 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.

73.19 ದಾಖಲೆ ಮತದಾನ: ಈ ಬಾರಿ ದಾಖಲೆಯ ಶೇ.73.19 ಮತದಾನವಾಗಿರುವುದರಿಂದ ರಾಜಕೀಯ ಪಕ್ಷಗಳಲ್ಲಿ ನಾನಾ ರೀತಿಯ ಲೆಕ್ಕಾಚಾರಕ್ಕೆ ಇಂಬು ಮಾಡಿಕೊಟ್ಟಿದೆ. ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿರುವುದು ನಮಗೆ ಲಾಭ ತಂದುಕೊಡಲಿದೆ ಎಂದು ಬಿಜೆಪಿ ನಾಯಕರ ವಾದ. ಆದರೆ, ಅತಿ ಕಡಿಮೆ ಮತದಾನವಾದಾಗಲೂ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿರುವ ಉದಾಹರಣೆಗಳಿವೆ. ಅಂತೆಯೇ, ಅತೀ ಹೆಚ್ಚು ಮತದಾನವಾದಾಗಲೂ ಬಿಜೆಪಿಗೆ ಲಾಭವಾಗದಿರುವ ದಾಖಲೆಗಳೂ ನಮ್ಮ ಮುಂದಿವೆ. ಹೀಗಾಗಿ ಈ ಬಾರಿಯ ಫಲಿತಾಂಶ ಊಹೆಗೆ ನಿಲುಕದಂತಾಗಿದೆ.

Share This Article

ಈ ಆರೋಗ್ಯ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ತುಪ್ಪವನ್ನು ತಿನ್ನಲೇ ಬಾರದು ಗೊತ್ತಾ? ghee benefits and risks

ಬೆಂಗಳೂರು: ( ghee benefits and risks) ಹಾಲಿನ ಉತ್ಪನ್ನಗಳು ಆರೋಗ್ಯಕ್ಕೆ ಒಳ್ಳೆಯದು.  ತುಪ್ಪ ಹಲವು…

ಬಿಸಿಲಿನ ವಾತಾವರಣದಲ್ಲಿ ನಿಮ್ಮ ಕಾರಿನೊಳಗೆ ತಂಪಾಗಿರಲು ಬಯಸುವಿರಾ? ಈ ಟ್ರಿಕ್ ಟ್ರೈ ಮಾಡಿ.. Summer Car Tips

ಬೆಂಗಳೂರು: (Summer Car Tips ) ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲಿಇಂದ ರಕ್ಷಣೆ ಪಡೆಯಲು…

ಹಠಾತ್ತನೆ ಮದ್ಯಪಾನ ತ್ಯಜಿಸುವುದರಿಂದ ಸಾಯ್ತಾರಾ? ಆಲ್ಕೋಹಾಲ್​ ಬಿಡುವುದಾದ್ರೂ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… | Alcohol

Alcohol: ಮದ್ಯಪಾನದಿಂದ ಉಂಟಾಗುವ ಸಾವುಗಳ ಕುರಿತು ಬ್ರಿಟನ್​ನ ರಾಷ್ಟ್ರೀಯ ಅಂಕಿ ಅಂಶಗಳ ಕಚೇರಿ(ONS) ಅಘತಕಾರಿ ಅಂಕಿ…