More

    ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳದೆ ಪೌರತ್ವ ತಿದ್ದುಪಡಿ ಮಸೂದೆಗೆ ತಡೆನೀಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

    ನವದೆಹಲಿ: ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳದೆ ಪೌರತ್ವ ತಿದ್ದುಪಡಿ ಮಸೂದೆಗೆ ತಡೆನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​ ಬುಧವಾರ ತಿಳಿಸಿದೆ.

    ಸಿಎಎ ಪ್ರಶ್ನಿಸಿ ಸಲ್ಲಿಕೆಯಾಗಿಯಾಗಿರುವ 140 ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಾಲಯ ಕಾಯ್ದೆಗೆ ತಡೆನೀಡಲು ನಿರಾಕರಿಸಿ, ಈ ಸಂಬಂಧ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಗಡುವು ನೀಡಿದೆ.

    ಪಂಚ ಸದಸ್ಯರ ಸಾಂವಿಧಾನಿಕ ಪೀಠವು ಅರ್ಜಿ ಸಂಬಂಧ ಮಧ್ಯಂತರ ಆದೇಶವನ್ನು ಹೊರಡಿಸಲಿದೆ. ಆದರೆ ನ್ಯಾಯಲಯ ಸ್ಪಷ್ಟಪಡಿಸುವುದೇನೆಂದರೆ ಕೇಂದ್ರ ಸರ್ಕಾರದ ವಿಚಾರಣೆ ನಡೆಸದೇ ಕಾಯ್ದೆಯನ್ನು ತಡೆಹಿಡಿಯಲಾಗುವುದಿಲ್ಲ ಎಂದು ಹೇಳಿದೆ.

    ಸಿಎಎ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಇಂದಿನಿಂದ ಕೈಗೆತ್ತಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೊಬ್ಡೆ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.

    ಕಾಯ್ದೆಯು ಎಲ್ಲರ ಮನಸ್ಸಿನಲ್ಲಿ ಉಳಿದಿರುವ ಉನ್ನತ ವಿಚಾರವಾಗಿದ್ದು, ಜನಜಂಗುಳಿಯನ್ನು ನಿರ್ವಹಿಸಲು ಸಾಧ್ಯವಿಲ್ಲ. ಹೀಗಾಗಿ ಛೇಂಬರ್​ನಲ್ಲಿಯೇ ಕೆಲ ಸಣ್ಣ ವಿಚಾರಗಳ ವಿಚಾರಣೆ ನಡೆಯಲಿದ್ದು, ವಕೀಲರು ಛೇಂಬರ್​ಗೆ ಬರಬಹುದಾಗಿದೆ ಎಂದು ಬೊಬ್ಡೆ ತಿಳಿಸಿದ್ದಾರೆ.

    ಕಾಯ್ದೆ ಸಂಬಂಧ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ನೋಟಿಸ್​ ನೀಡಿದ್ದು, ಕೇಂದ್ರ ಸರ್ಕಾರ ಪರ ಅಟಾರ್ನಿ ಜನರಲ್​ ಕೆ.ಕೆ.ವೇಣುಗೊಪಾಲ್​ ವಿಚಾರಣೆ ಎದುರಿಸುತ್ತಿದ್ದಾರೆ. 140 ಅರ್ಜಿಗಳಲ್ಲಿ ಸುಮಾರು 60 ಅರ್ಜಿಗಳನ್ನು ಸರ್ಕಾರಕ್ಕೆ ಕೊಡಲಾಗಿದೆ. ಪ್ರತಿಕ್ರಿಯೆ ನೀಡಲು ಸ್ವಲ್ಪ ಸಮಯ ಬೇಕಾಗಿದೆ ಎಂದು ಕೇಳಿದ್ದಾರೆ.

    ಇನ್ನೊಂದೆಡೆ ಹಿರಿಯ ವಕೀಲ ಕಪಿಲ್​ ಸಿಬಲ್​ ತಡೆನೀಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಎನ್​ಪಿಆರ್​ ಸಮಯವನ್ನು ಮುಂದೂಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts