ಗುಂಡು ಹಾರಿಸಿ 2 ವರ್ಷದ ಬಾಲಕಿಯನ್ನು ಗಾಯಗೊಳಿಸಿದ್ದ ಪ್ರಮುಖ ಲಷ್ಕರ್​ ಉಗ್ರನನ್ನು ಹೊಡೆದುರುಳಿಸಿದ ಸೇನೆ

ಸೋಪುರೆ: ಎರಡು ವರ್ಷದ ಪುಟ್ಟ ಬಾಲಕಿ ಸೇರಿ ನಾಲ್ವರ ಮೇಲೆ ಗುಂಡು ಹಾರಿಸಿ ಅವರನ್ನು ಗಾಯಗೊಳಿಸಿದ್ದ ಲಷ್ಕರ್​ ಎ ತೋಯ್ಬಾ ಉಗ್ರ ಸಂಘಟನೆಯ ಪ್ರಮುಖ ಉಗ್ರನನ್ನು ಭದ್ರತಾಪಡೆಗಳು ಹೊಡೆದುರುಳಿಸಿವೆ.

ಬುಧವಾರ ಬೆಳಗ್ಗೆ ಸೋಪುರೆಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಉಗ್ರ ಆಸಿಫ್​ನನ್ನು ಹೊಡೆದುರುಳಿಸಲಾಗಿದೆ. ಈತ ಸೆ. 6 ರಂದು ಬಾರಾಮುಲ್ಲಾ ಜಿಲ್ಲೆಯ ಸೋಪುರೆ ಪಟ್ಟಣದ ಬಳಿಯ ದಂಗೆಪೂರ ಗ್ರಾಮದಲ್ಲಿ ಹಣ್ಣಿನ ವ್ಯಾಪಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬರ ಮನೆಯೊಂದರ ಮೇಲೆ ಗುಂಡಿನ ದಾಳಿ ನಡೆಸಿದ್ದ. ಈ ದಾಳಿಯಲ್ಲಿ 2 ವರ್ಷದ ಆಸ್ಮಾ ಜಾನ್​ ಮತ್ತು ಇತರ ಮೂವರು ಗಾಯಗೊಂಡಿದ್ದರು. ದಾಳಿಯ ನಂತರ ಆಸಿಫ್​ ಮತ್ತು ಆತನ ಸಹಚರರು ಸ್ಥಳದಿಂದ ಪರಾರಿಯಾಗಿದ್ದರು. ಭಯೋತ್ಪಾದಕ ದಾಳಿಯ ನಂತರ ಭದ್ರತಾ ಪಡೆಗಳು ಮತ್ತು ಪೊಲೀಸರು ದಾಳಿಕೋರರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದರು.

ತೀವ್ರವಾಗಿ ಗಾಯಗೊಂಡಿದ್ದ ಅಸ್ಮಾ ಜಾನ್​ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ಸಲಹೆಯಂತೆ ದೆಹಲಿಯ ಏಮ್ಸ್​ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. (ಏಜೆನ್ಸೀಸ್​)

Leave a Reply

Your email address will not be published. Required fields are marked *