More

    ಸುಲಲಿತ ವ್ಯವಹಾರ ರಾಜ್ಯಕ್ಕೆ ಅಗ್ರಸ್ಥಾನ; 17ನೇ ಸ್ಥಾನದಿಂದ ಟಾಪ್ ಅಚೀವರ್ ಆಗಿ ಹೊರಹೊಮ್ಮಿದ ಕರ್ನಾಟಕ

    ಬೆಂಗಳೂರು: ಸುಲಲಿತ ವ್ಯವಹಾರ (ಈಸ್ ಆಫ್ ಡೂಯಿಂಗ್ ಬಿಜಿನೆಸ್)ಕ್ಕೆ ಸಂಬಂಧಿಸಿದಂತೆ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ಬಿಡುಗಡೆ ಮಾಡಿರುವ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನ ಪಡೆದುಕೊಂಡಿದೆ.

    2020ರ ಸೆಪ್ಟೆಂಬರ್​ನಲ್ಲಿ ಬಿಡುಗಡೆಯಾಗಿದ್ದ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ 17ನೇ ಸ್ಥಾನದಲ್ಲಿತ್ತು, ಈಗ ಟಾಪ್ ಅಚೀವರ್ ಆಗಿ ಹೊರಹೊಮ್ಮಿದೆ. ಕೇಂದ್ರ ಸರ್ಕಾರ 2020ರ ವಹಿವಾಟು ಸುಧಾರಣೆ ಕ್ರಿಯಾ ಯೋಜನೆ (ಎಸ್​ಬಿಆರ್​ಎಪಿ) ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಾರ್ಷಿಕ ಸುಧಾರಣಾ ಕ್ರಮಗಳ ಪರಿಶೀಲನಾ ವರದಿ ಗುರುವಾರ ಬಿಡುಗಡೆಯಾಗಿದೆ. ಡಿಪಿಐಐಟಿ ಸೂಚಿಸಿದ್ದ 187 ಸುಧಾರಣಾ ಕ್ರಮಗಳಲ್ಲಿ ಶೇ.100 ಅನುಷ್ಠಾನಗೊಳಿಸಿದ್ದರೂ, ಕರ್ನಾಟಕ 2019ರಲ್ಲಿ 17ನೇ ಸ್ಥಾನಕ್ಕೆ ಕುಸಿದಿತ್ತು. ಹಲವು ಸುಧಾರಣಾ ಕ್ರಮಗಳ ಅನುಷ್ಠಾನದ ಜತೆಗೆ ರಾಜ್ಯದ 30ಕ್ಕೂ ಹೆಚ್ಚು ಇಲಾಖೆಗಳ ನಡುವಿನ ಸಮನ್ವಯತೆ ಮತ್ತು ಪೂರಕ ಪ್ರಯತ್ನಗಳಿಂದ ಪ್ರಸಕ್ತ ಸಾಲಿನಲ್ಲಿ ಅಗ್ರ ಶ್ರೇಣಿಗೆ ಏರಲು ಸಾಧ್ಯವಾಗಿದೆ. ಆಂಧ್ರಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ತಮಿಳುನಾಡು, ತೆಲಂಗಾಣ ಸಹ ಅಗ್ರ ಸಾಧಕ ರಾಜ್ಯಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.

    ಸುಲಲಿತ ವ್ಯವಹಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಕೈಗಾರಿಕಾ ಸೌಲಭ್ಯ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕೈಗಾರಿಕೆಗಳ ಸ್ಥಾಪನೆಗೆ ಇದ್ದ ತೊಡಕು ನಿವಾರಿಸಲಾಗಿದೆ. ನಮ್ಮ ಸರ್ಕಾರ ಸುಲಲಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡಿರುವುದರಿಂದ ಹೂಡಿಕೆದಾರರು ನಮ್ಮ ರಾಜ್ಯದಲ್ಲಿ ಹೆಚ್ಚು ಬಂಡವಾಳ ಹೂಡುತ್ತಿದ್ದಾರೆ

    | ಮುರುಗೇಶ ಆರ್. ನಿರಾಣಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ

    ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಪೂರಕವಾದ ಸುಧಾರಣಾ ಕ್ರಮಗಳ ಅನುಷ್ಠಾನವನ್ನು ಖಾತ್ರಿಪಡಿಸುವ ನೋಡಲ್ ಏಜೆನ್ಸಿ ’ಕರ್ನಾಟಕ ಉದ್ಯೋಗ ಮಿತ್ರ’ ಡಿಪಿಐಐಟಿ ಮಾಡಿದ ಶಿಫಾರಸು ಪರಿಣಾಮಕಾರಿ ಅನುಷ್ಠಾನಗೊಳಿಸಿರುವ ಫಲವಾಗಿ ರಾಜ್ಯ ಇಂದು ಅಗ್ರ ಶ್ರೇಯಾಂಕ ಪಡೆಯಲು ಸಾಧ್ಯವಾಗಿದೆ.

    | ಡಾ.ಇ.ವಿ.ರಮಣರೆಡ್ಡಿ ಕೈಗಾರಿಕೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ

    ಕರೊನಾ ಸಾಂಕ್ರಾಮಿಕ ನಡುವೆಯೂ ರಾಜ್ಯದಲ್ಲಿ ಉದ್ಯಮಸ್ನೇಹಿ ಕ್ರಮಗಳ ಜಾರಿ ಮತ್ತು ಕೈಗಾರಿಕಾ ಪೂರಕ ಸೌಲಭ್ಯ ಒದಗಿಸುವಲ್ಲಿ ’ಕರ್ನಾಟಕ ಉದ್ಯೋಗ ಮಿತ್ರ’ ಸಫಲವಾಗಿದೆ. ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸುವ ಮೂಲಕ ರಾಜ್ಯ ಅಗ್ರ ಶ್ರೇಯಾಂಕ ಪಡೆಯುವಂತಾಗಿದೆ.

    | ಗುಂಜನ್ ಕೃಷ್ಣ ಕೈಗಾರಿಕಾಭಿವೃದ್ಧಿ ಆಯುಕ್ತರು

    ನಾಯಿ ಕಚ್ಚಿದಕ್ಕೆ ಲಸಿಕೆ ಪಡೆದ ವಿದ್ಯಾರ್ಥಿನಿ, ಚಿಕಿತ್ಸೆ ಫಲಿಸದೆ ರೇಬೀಸ್ ಸೋಂಕಿಗೆ ಬಲಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts