More

    ಸರ್ಕಾರ ಉರುಳಿಸುವುದು ಕುಮಾರಸ್ವಾಮಿ ಹಗಲುಗನಸು 

    ಬೆಂಗಳೂರು: ಲೋಕಸಭಾ ಚುನಾವಣೆಯ ನಂತರ ರಾಜ್ಯ ಸರ್ಕಾರ ಉರುಳಿಸುವುದು ಕುಮಾರಸ್ವಾಮಿ ಹಗಲುಗನಸು ಉರುಳಿ ಬೀಳಲಿದೆ ಎನ್ನುವ ಎಚ್. ಡಿ. ಕುಮಾರಸ್ವಾಮಿ ಅವರ ಮಾತು ಬರೀ ಹಗಲುಗನಸು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಲೇವಡಿ ಮಾಡಿದ್ದಾರೆ.

    ತಮ್ಮ‌ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ವಿಜಯಪರದಲ್ಲಂತೂ ಕಾಂಗ್ರೆಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ.
    ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಮತದಾರರ ಮನ ಗೆದ್ದಿವೆ. ಫಲಿತಾಂಶದ ನಂತರ ಜೆಡಿಎಸ್ ಗತಿ ಏನಾಗಲಿದೆ ಕಾದು ನೋಡೋಣ ಎಂದು ಅವರು ಪ್ರತಿಪಾದಿಸಿದರು.

    ಜೆಡಿಎಸ್ ಪಕ್ಷದ ಅನೇಕರು ಕಾಂಗ್ರೆಸ್ಸಿನ ಸಂಪರ್ಕದಲ್ಲಿ ಇದ್ದಾರೆ. ಪೆನ್ ಡ್ರೈವ್ ಪ್ರಕರಣವು ಅವರಿಗೆ ತಲೆನೋವಾಗಿ ಪರಿಣಮಿಸಿದೆ ಎಂದು ಅವರು ವಿವರಿಸಿದರು.

    ಪ್ರಜ್ವಲ್ವ ರೇವಣ್ಣನವರ ಕಾಮಕಾಂಡವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ಕ್ಲೀನ್ ಚಿಟ್ ತೆಗೆದುಕೊಂಡು, ಬಿಜೆಪಿಯಿಂದ ಪರಿಶುದ್ಧತೆಯ ಸರ್ಟಿಫಿಕೇಟ್ ಪಡೆದುಕೊಳ್ಳುವ ಯೋಜನೆ ಇದರ ಹಿಂದಿದೆ. ಸದ್ಯಕ್ಕೆ ನಡೆಯುತ್ತಿರುವ ಎಸ್ಐಟಿ ತನಿಖೆ ಬಗ್ಗೆ ಓರ್ವ ಸಚಿವನಾಗಿ ನಾನು ಏನನ್ನೂ ಮಾತನಾಡಲು ಬಯಸುವುದಿಲ್ಲ. ಎಸ್ಐಟಿ ತನ್ನ‌ ಕೆಲಸ ಮಾಡಲಿದೆ ಎಂದು ಪಾಟೀಲ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts