More

    ಸ್ಥಳೀಯರ ಸಹಕಾರದಿಂದ ಪ್ರವಾಸೋದ್ಯಮ ಅಭಿವೃದ್ಧಿ

    ಉಡುಪಿ: ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ರೂಪಿಸಿ ಕಾರ್ಯಗತಗೊಳಿಸಿದಾಗ ಅದು ಯಶಸ್ವಿಯಾಗುತ್ತದೆ. ಮಲ್ಪೆ ಬೀಚ್ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಸ್ಥಳೀಯರ ಪಾತ್ರ ಪ್ರಾಮುಖ್ಯವಾಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

    ಮಲ್ಪೆ ಕಡಲ ಕಿನಾರೆಯಲ್ಲಿ ಶನಿವಾರ ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ ಮಲ್ಪೆ ಬೀಚ್ ವತಿಯಿಂದ ವಿಂಚ್ ಪ್ಯಾರಸೈಲಿಂಗ್ ಬೋಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

    ಮಲ್ಪೆ ಬೀಚ್ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ ಸದಸ್ಯರ ಪಾತ್ರ ಮುಖ್ಯವಾಗಿದೆ. ಇಲ್ಲಿ ವಾಟರ್ ಸ್ಪೋರ್ಟ್ಸ್‌ಗೆ ಅವಕಾಶ ಕಲ್ಪಿಸಿದಷ್ಟು ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಬಹುದು. ವಸತಿ ವ್ಯವಸ್ಥೆ ಹಾಗೂ ಇತರ ಪೂರಕ ಸೌಕರ್ಯಗಳನ್ನು ಸ್ಥಳೀಯರು ಕಲ್ಪಿಸಬಹುದು. ಈ ನಿಟ್ಟಿನಲ್ಲಿ ಮುಂದೆ ಬರುವವರಿಗೆ ಸರ್ಕಾರದ ವತಿಯಿಂದ ಸೂಕ್ತವಾದ ಸಹಕಾರ ನೀಡುವ ಭರವಸೆ ನೀಡಿದರು.

    ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಉಪಾಧ್ಯಕ್ಷೆ ಲಕ್ಷ್ಮಿಮಂಜುನಾಥ ಕೊಳ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ನಗರಸಭಾ ಸದಸ್ಯರಾದ ವಿಜಯ ಕೊಡವೂರು, ಸುಂದರ ಜೆ. ಕಲ್ಮಾಡಿ, ಎಡ್ಲಿನ್ ಕರ್ಕಡ, ವಿಜಯ ಕುಂದರ್, ಉಚ್ಚಿಲದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಂತ್ರ ಟೂರಿಸಂ ಆಡಳಿತ ನಿರ್ದೇಶಕ ಮತ್ತು ಮಲ್ಪೆ ಬೀಚ್ ನಿರ್ವಾಹಕ ಸುದೇಶ್ ಶೆಟ್ಟಿ, ಪ್ರಮುಖರಾದ ಪಾಂಡುರಂಗ ಮಲ್ಪೆ, ವಿನಯ್ ಕರ್ಕೇರ, ವಿಜಯ ತಿಂಗಳಾಯ, ಶಂಕರ್ ಸುವರ್ಣ, ರವಿ ಕರ್ಕೇರ, ಸುಭಾಷ್ ಸಾಲ್ಯಾನ್, ಉದಯ ಕುಂದರ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts