More

    ಗೋಪಾಲಸ್ವಾಮಿ ಬೆಟ್ಟಕ್ಕೆ ಜನವೋಜನ

    ಚಾಮರಾಜನಗರ: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿಬೆಟ್ಟ ಹಾಗೂ ಬಂಡೀಪುರಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ.

    ಶುಕ್ರವಾರ ಕರ್ನಾಟಕ ಬಂದ್, ಶನಿವಾರ, ಭಾನುವಾರ ಹಾಗೂ ಸೋಮವಾರ ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಾಗೂ ಬಂಡೀಪುರ ಸಫಾರಿಗೆ ಭಾರೀ ಆದಾಯ ಸಂಗ್ರಹವಾಗುತ್ತಿದೆ.

    ಇತ್ತೀಚೆಗೆ ಬಂಡೀಪುರದಲ್ಲಿ ಹುಲಿ ಚಿರತೆ ಮುಂತಾದ ವನ್ಯಜೀವಿಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಶನಿವಾರ ಭಾನುವಾರ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಪ್ರವಾಸಿಗರು ಸಫಾರಿಗೆ ಭೇಟಿ ನೀಡುತ್ತಿದ್ದಾರೆ. ಶನಿವಾರ ಆರು ಲಕ್ಷ, ಭಾನುವಾರ ಒಂದೇ ದಿನ 8 ಲಕ್ಷ ರೂ. ಆದಾಯ ಸಂಗ್ರಹವಾಗಿದ್ದು, ಸೋಮವಾರವೂ ಅಷ್ಟೆ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು ಎಂದು ಗೋಪಾಲಸ್ವಾಮಿಬೆಟ್ಟ ವಲಯದ ಆರ್‌ಎಫ್‌ಒ ಮಂಜುನಾಥ್ ತಿಳಿಸಿದ್ದಾರೆ.

    ಬಂಡೀಪುರ ಹುಲಿ ಯೋಜನೆ ಗೋಪಾಲಸ್ವಾಮಿ ಬೆಟ್ಟ ವಲಯದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಮಹಿಳಾ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ.

    ವರೊಂದಿಗೆ ಬೆಟ್ಟಕ್ಕೆ ಹೋಗುವ ಪ್ರಯಾಣಿಕರ ಸಂಖ್ಯೆ ದಿಢೀರನೆ ಏರಿಕೆಯಾಗುತ್ತಿದೆ. ಪ್ರಯಾಣಿಕರ ಸಂಖ್ಯೆಗನುಗುಣವಾಗಿ ಸಾರಿಗೆ ಸಂಸ್ಥೆಯು ಸಾಕಷ್ಟು ಬಸ್‌ಗಳನ್ನು ನಿಯೋಜಿಸಿದ್ದರೂ ಪ್ರವಾಹದಂತೆ ಹರಿದು ಬರುತ್ತಿದ್ದ ಜನರ ಸಂಖ್ಯೆಗೆ ಇವು ಸಾಲದೆ ಪ್ರವಾಸಿಗರು ಗಂಟೆಗಟ್ಟಲೆ ಸಾಲುಗಟ್ಟಿ ನಿಲ್ಲಬೇಕಾಗಿದೆ.
    ಸೋಮವಾರ ಬೆಳಗ್ಗೆ 8 ಬಸ್‌ಗಳನ್ನು ನಿಯೋಜಿಸಿದ್ದರೂ ಪ್ರವಾಸಿಗರ ಸರತಿ ಸಾಲು ಕಡಿಮೆಯಾಗದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯು ಮತ್ತೆ ಎರಡು ಬಸ್‌ಗಳನ್ನು ಹೆಚ್ಚುವರಿಯಾಗಿ ಸೇರಿಸಿತು. ಇದರಿಂದ ಪ್ರತಿ ದಿನವೂ 3 ರಿಂದ 4 ಲಕ್ಷ ರೂ. ಆದಾಯ ಸಂಗ್ರಹವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts