More

    ಕ.ಕ. ಭಾಗದವರೂ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿ

    ಸಿಂಧನೂರು: ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಟೆನ್ನಿಸ್‌ನಂಥ ಆಟ ಆಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹೊಂದಲು ಸಾಧ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿ ಹೇಳಿದರು.

    ನಗರದ ಎಫ್‌ಆರ್‌ಸಿಎಸ್ ಕ್ಲಬ್‌ನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ, ಪಾಟೀಲ್ ಪದವಿಪೂರ್ವ ಕಾಲೇಜ್ ಮತ್ತು ಎಫ್‌ಆರ್‌ಸಿಎಸ್ ಕ್ಲಬ್ ಸಂಯುಕ್ತಾಶ್ರಯದಲಿ ಆಯೋಜಿಸಿದ್ದ ಪದವಿಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಲಾನ್ ಟೆನ್ನಿಸ್ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಿಸಿ ಭಾನುವಾರ ಮಾತನಾಡಿದರು.
    ಈ ಬಾರಿ ಲಾನ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಬೇರೆ ಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ನಮ್ಮ ಭಾಗದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಇಂಥ ಪಂದ್ಯಾವಳಿಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕಿದೆ. ದೈಹಿಕ ಶಿಕ್ಷಣ ಉಪನ್ಯಾಸಕರ ಕೊರತೆ ನೀಗಿದರೆ ಇದೆಲ್ಲ ಸಾಧ್ಯವಾಗಲಿದೆ ಎಂದು ಸೋಮಶೇಖರಪ್ಪ ಹೊಕ್ರಾಣಿ ತಿಳಿಸಿದರು.

    ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಶಿವರಾಜ ಮಾತನಾಡಿ, ರಾಜ್ಯ ಮಟ್ಟದ ಟೆನ್ನಿಸ್ ಪಂದ್ಯಾವಳಿ ಆಯೋಜಿಸಿರುವುದು ಸಿಂಧನೂರಿನ ಹಿರಿಮೆಯಾಗಿದೆ ಎಂದರು. ಪಾಟೀಲ್ ಕಾಲೇಜಿನ ಕಾರ್ಯದರ್ಶಿ ಆರ್.ಸಿ.ಪಾಟೀಲ್, ಟೆನ್ನಿಸ್ ಆಟಗಾರ ಬಸವರಾಜ ನಾಡಗೌಡ, ಎಫ್‌ಆರ್‌ಸಿಎಸ್ ಕ್ಲಬ್ ಅಧ್ಯಕ್ಷ ಸಿ.ಟಿ.ಪಾಟೀಲ್, ಸದಸ್ಯ ಎಸ್.ಶರಣೇಗೌಡ, ವಿಶ್ವನಾಥ ಪಾಟೀಲ್, ಶಿಕ್ಷಣ ಇಲಾಖೆ ಶಾಖಾಧಿಕಾರಿ ಸುಧಾ, ದೈಹಿಕ ಶಿಕ್ಷಣ ಉಪನ್ಯಾಸಕ ಅಮರೇಶ, ಗುರುಪ್ರಸಾದ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts