
ಸಂಡೂರು; ಸಂವಿಧಾನ 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಮತ್ತು ಉಚಿತ ಶಿಕ್ಷಣದ ಹಕ್ಕನ್ನು ನೀಡಿದೆ. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಹೋರಾಡುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಎಂದು ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಮಹ್ಮದ್ ಶಾಯಿಜ್ ಚೌತಾಯಿ ಹೇಳಿದರು.
ಇದನ್ನೂ ಓದಿ:ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಗೆ
ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಆಡಳಿತ, ತಾಪಂ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ ಹಾಗೂ ರೀಚ್ ಸಂಸ್ಥೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳನ್ನು ರಕ್ಷಿಸಿ ಶಿಕ್ಷಣವಂತರನ್ನಾಗಿ ಮಾಡಲು ಸಂವಿಧಾನ ಪೂರಕವಾಗಿದೆ. ಯಾವುದೇ ಕೈಗಾರಿಕೆಗಳು, ಗಣಿ, ಫ್ಯಾಕ್ಟರಿ, ಗ್ಯಾರೇಜ್‌ಗಳಲ್ಲಿ ಮಕ್ಕಳು ದುಡಿಯುವುದು ಕಂಡುಬಂದರೆ ಅಂಥ ಮಕ್ಕಳನ್ನು ರಕ್ಷಿಸಿ ಶಾಲೆಗೆ ಕಳುಹಿಸಲು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಆಡಳಿತ ಶ್ರಮವಹಿಸುತ್ತಿದೆ. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಮಕ್ಕಳು, ಪಾಲಕರು ಹಾಗೂ ಪ್ರಜ್ಞಾವಂತ ನಾಗರಿಕರು ಮುಂದಾಗಬೇಕು ಎಂದರು.
ತಹಸೀಲ್ದಾರ್ ಅನಿಲ್ ಕುಮಾರ್, ಕಾರ್ಮಿಕ ನಿರೀಕ್ಷಕ ಮಂಜುನಾಥ ತೊಂಡಿಹಾಳ, ತಾಪಂ ಇಒ ಮಡಗಿನ ಬಸಪ್ಪ, ಬಿಇಒ ಡಾ.ಐ.ಆರ್.ಅಕ್ಕಿ, ವಕೀಲರ ಸಂಘದ ಅಧ್ಯಕ್ಷ ಅರಳಿ ಮಲ್ಲಪ್ಪ, ಸಕಇ ಎಡಿ ಎನ್.ಕೆ.ವೆಂಕಟೇಶ್, ವಕೀಲರ ಸಂಘದ ಉಪಾಧ್ಯಕ್ಷ ಕೆ.ಆರ್.ದಾದಾಪೀರ್, ಉಪ ಪ್ರಾಚಾರ್ಯ ಮಹಬೂಬ್ ಬಾಷಾ, ರೀಚ್ ಸಂಸ್ಥೆಯ ಡಾ.ಎಚ್.ಯರ‌್ರಿಸ್ವಾಮಿ ಇತರರಿದ್ದರು.