

ರಾಯಚೂರು: ಚತುರ್ಥಿಯ ಪ್ರಯುಕ್ತ ಪೂಜೆಗೆ ಇರಿಸಲಾಗಿದ್ದ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ಒಯ್ಯುತ್ತಿದ್ದ ಟ್ರ್ಯಾಕ್ಟರ್ ಅಪಘಾತಕ್ಕೀಡಾಗಿ ಪಲ್ಟಿಯಾಗಿದ್ದು, ಅದರಲ್ಲಿ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನವಲಹಳ್ಳಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಗೊಂಡಿರುವ ಎಂಟು ಮಂದಿಯ ಪರಿಸ್ಥಿತಿ ಗಂಭೀರವಾಗಿದ್ದು, ಅವರಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ರಾತ್ರಿ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿತ್ತು. ಟ್ರ್ಯಾಕ್ಟರ್ ಪಲ್ಟಿಯಾದ್ದರಿಂದ ಕೆಲವರು ಅದರಡಿಗೆ ಸಿಲುಕಿಕೊಂಡಿದ್ದು, ಸ್ಥಳೀಯರು ಅವರನ್ನು ಅಲ್ಲಿಂದ ರಕ್ಷಣೆ ಮಾಡಿ, ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.