ತೊಟ್ಟಿಲ ಕಾರ್ಯಕ್ಕೆ ಹೊರಟಿದ್ದ ಟ್ರಾೃಕ್ಟರ್ ಪಲ್ಟಿ

tractor overturned that was going to work on the cradle

ಹಾನಗಲ್ಲ: ತೊಟ್ಟಿಲ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಟ್ರಾೃಕ್ಟರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟು, 8 ಜನರಿಗೆ ಗಂಭೀರ ಗಾಯಗಳಾದ ಘಟನೆ ತಾಲೂಕಿನ ಅರಳೇಶ್ವರ ಗ್ರಾಮದ ಸಮೀಪ ಬುಧವಾರ ನಡೆದಿದೆ.
ರಮೇಶ ಕೆಂಚಪ್ಪ ಪುಟ್ಟಣ್ಣನವರ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಲೂಕಿನ ಬಿದರಕೊಪ್ಪ ಗ್ರಾಮದಿಂದ ಕಾಲ್ವೆಕಲ್ಲಾಪುರ ಗ್ರಾಮಕ್ಕೆ ಮಗುವಿನ ತೊಟ್ಟಿಲ ಕಾರ್ಯಕ್ರಮಕ್ಕೆ ಕುಟುಂಬದವರೆಲ್ಲ ತೆರಳುತ್ತಿದ್ದ ಟ್ರಾೃಕ್ಟರ್ ಉರುಳಿ ಬಿದ್ದಿದೆ. ಮೃತನ ಸಹೋದರ ಉಮೇಶ ಅವರ ಪುತ್ರನ ನಾಮಕರಣಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಜರುಗಿದೆ. ಸುಮಾರು 20 ಜನರು ಟ್ರಾೃಕ್ಟರ್‌ನಲ್ಲಿ ತೆರಳುತ್ತಿದ್ದರು. ಗಾಯಗೊಂಡವರನ್ನು ಹಾನಗಲ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸಿಪಿಐ ಎಸ್.ಆರ್. ಶ್ರೀಧರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…